Asianet Suvarna News Asianet Suvarna News

Gold Silver Price Today: ಕೃಷ್ಣಾಷ್ಟಮಿಯಂದು ಹೇಗಿದೆ ಬಂಗಾರದ ಬೆಲೆ

ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭದಿನ ಚಿನ್ನಾಭರಣಗಳ ದರ ದೇಶದ ವಿವಿಧ ನಗರದಲ್ಲಿ ಹೇಗಿದೆ ವಿವರ ಇಲ್ಲಿದೆ.

what is the gold price today in Metro cities of India akb
Author
Mumbai, First Published Aug 19, 2022, 10:36 AM IST

ಇಂದು ದೇಶಾದ್ಯಂತ ಜಗದ್ದೋದ್ಧಾರಕ ಶ್ರೀಕೃಷ್ಣನ ಜನ್ಮದಿನವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ದೇಶದ ಹಲವು ದೇಗುಲಗಳು, ಇಸ್ಕಾನ್ ಶ್ರೀ ಕೃಷ್ಣ ಮಂದಿರಗಳು ಕೃಷ್ಣಾಷ್ಟಮಿ ಸಂಭ್ರಮ ಜೋರಾಗಿದೆ. ತಾಯಂದಿರು ಮಕ್ಕಳಿಗೆ ಶ್ರೀಕೃಷ್ಣನ ವೇಷ ಹಾಕಿ ಸಂಭ್ರಮಿಸುತ್ತಿದ್ದಾರೆ. ಇನ್ನು ಶುಭದಿನವಾಗಿರುವುದರಿಂದ ಈ ದಿನ ಚಿನ್ನ ಖರೀದಿಸುವವರ ಸಂಖ್ಯೆಯೂ ಹೆಚ್ಚಿದೆ. ಈ ದಿನ ಯಾವ ಯಾವ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ಆಭರಣಗಳ ದರ ಹೇಗಿದೆ ಎಂಬ ವಿವರ ಇಲ್ಲಿದೆ. 
 
ಇಂದು ಬೆಂಗಳೂರು, ಮುಂಬೈ ಸೇರಿ ದೇಶದ ಪ್ರಮುಖ ನಗರಗಳಲ್ಲಿ ಬಂಗಾರದ ದರದಲ್ಲಿ ಗ್ರಾಂನಲ್ಲಿ 10 ರೂಪಾಯಿಯ ಇಳಿಕೆ ಆಗಿದೆ

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,785
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,220

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 38,280
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,760

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,850
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 52,200

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,78,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,22,000

what is the gold price today in Metro cities of India akb

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,850 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 48,220, ರೂ. 47,800, ರೂ.  47,800 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,950 ರೂ. ಆಗಿದೆ. 

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಇಂದು ಬೆಳ್ಳಿ ದರದಲ್ಲಿ ಏರಿಕೆ ಆಗಿದೆ. ನಿನ್ನೆಗೆ ಹೋಲಿಸಿದರೆ ಇಂದು ಗ್ರಾಮ್‌ಗೆ ಬೆಂಗಳೂರಿನಲ್ಲಿ 5.30 ರೂ ಏರಿಕೆ ಆಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 620, ರೂ. 6,200 ಹಾಗೂ ರೂ. 62,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 62, 800 ಆಗಿದ್ದರೆ, ಮುಂಬೈನಲ್ಲಿ ರೂ. 56,000 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 56,000 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿಯೂ ಸಹ ಇಂದಿನ ಬೆಳ್ಳಿ ದರ ರೂ. 56,000 ಆಗಿದೆ.
 

Follow Us:
Download App:
  • android
  • ios