Asianet Suvarna News Asianet Suvarna News

Gold Silver Price Today: ಏಪ್ರಿಲ್‌ ಮೊದಲ ದಿನ ಚಿನ್ನ, ಬೆಳ್ಳಿ ದರ ಹೇಗಿದೆ ನೋಡಿ..

ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
 

what is the gold silver price today in your cities on april 1st 2023 ash
Author
First Published Apr 1, 2023, 11:06 AM IST

Gold Rate on April 1st 2023: ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಮಹಿಳೆಯರು ಬಂಗಾರದ ಪ್ರಿಯರಾಗಿರುವುದರಿಂದ ಚಿನ್ನ , ಬೆಳ್ಳಿ ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಮೂಡುವುದಂತೂ ಗ್ಯಾರಂಟಿ. ಈ ಕಾರಣಕ್ಕಾಗಿ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ಷೇರು ಮಾರುಕಟ್ಟೆಯ ಏರಿಕೆ - ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ  ವ್ಯತ್ಯಾಸವಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? 

ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ (Gold), ಬೆಳ್ಳಿ (Silver) ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ (Jewellery) ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಇದನ್ನು ಓದಿ: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ ನ್ಯೂಸ್‌: 92 ರೂ. ಇಳಿಕೆಯಾದ ಸಿಲಿಂಡರ್‌ ಬೆಲೆ

ಇಂದು ದೇಶದಲ್ಲಿ (India) 22 ಕ್ಯಾರಟ್‌ ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಆದರೆ 24 ಕ್ಯಾರಟ್‌ ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಇನ್ನು, ದೇಶಾದ್ಯಂತ ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,505
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,505

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 44,040
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 44,040

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 55,050
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 55,050

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,50,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,50,500

ಇದನ್ನೂ ಓದಿ: Petrol, Diesel Price Today: ಏಪ್ರಿಲ್‌ ತಿಂಗಳ ಮೊದಲ ದಿನ ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ..

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ.      55,050 ಆಗಿದ್ದು, ನಿನ್ನೆಯ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 55,600, ರೂ. 55,000 ಹಾಗೂ ರೂ. 55,000 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಶನಿವಾರ 55,150 ರೂ. ಆಗಿದ್ದು, ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶಾದ್ಯಂತ ಇಂದು 22 ಕ್ಯರಟ್‌ ಬಂಗಾರದ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೆ ಬೆಳ್ಳಿ ದರದಲ್ಲಿ ಹೆಚ್ಚಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 777, ರೂ. 7,770 ಹಾಗೂ ರೂ. 77,700 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 77,700 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 74,500 ಹಾಗೂ ಕೋಲ್ಕತ್ತದಲ್ಲಿ ಸಹ 1 ಕೆಜಿ ಬೆಳ್ಳಿ ದರ ರೂ. 74,500 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 74,500 ರೂ. ಆಗಿದ್ದು, ದೇಶಾದ್ಯಂತ ಬೆಳ್ಳಿ ದರದಲ್ಲಿ ಏರಿಕೆಯಾಗಿದೆ. 

Follow Us:
Download App:
  • android
  • ios