Asianet Suvarna News Asianet Suvarna News

Gold Silver Price Today: ಸಂಡೇ ಆಭರಣ ಕೊಳ್ಳೋ ಪ್ಲ್ಯಾನ್‌ ಇದ್ಯಾ? ಹಾಗಾದ್ರೆ, ಇಲ್ಲಿದೆ ಗುಡ್‌ ನ್ಯೂಸ್‌!

ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

what is the gold silver price today in your cities on december 10th 2023 ash
Author
First Published Dec 10, 2023, 10:25 AM IST

Gold Rate on December 10th 2023: ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿದ್ದು, ಈಗ ಮದುವೆ ಸೀಸನ್‌ ನಡೆಯುತ್ತಿದೆ. ಇನ್ನು, ನಮ್ಮಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಇನ್ನು, ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ - ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? 

ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ (Gold), ಬೆಳ್ಳಿ (Silver) ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ (Jewellery) ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಇದನ್ನು ಓದಿ: PETROL DIESEL PRICE TODAY: ಭಾನುವಾರ ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ..

ಇಂದು ದೇಶದಲ್ಲಿ (India) ಬಂಗಾರದ ದರದಲ್ಲಿ ಕಡಿಮೆಯಾಗಿದ್ದು, ಹಾಗೆ ಬೆಳ್ಳಿ ದರದಲ್ಲಿ ಸಹ ಇಳಿಕೆಯಾಗಿದೆ. ಆದರೆ ಬೆಂಗಳೂರಲ್ಲಿ ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,715
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,235

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 45,720
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 49,880

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 57,150
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 62,350

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,71,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,23,500

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 57,150 ಆಗಿದ್ದು ನಿನ್ನೆಗಿಂತ ಬೆಲೆ ಕಡಿಮೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 57,650, ರೂ. 57,150 ಹಾಗೂ 57,150 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಭಾನುವಾರ 57,300 ರೂ. ಆಗಿದ್ದು, ಬೆಲೆಯಲ್ಲಿ ಇಳಿಕೆಯಾಗಿದೆ.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಇಳಿಕೆಯಾಗಿದ್ದು, ಬೆಳ್ಳಿ ದರದಲ್ಲಿ ಸಹ ಕಡಿಮೆಯಾಗಿದೆ. ಆದರೆ, ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 760, ರೂ. 7,600 ಹಾಗೂ ರೂ. 76,000 ಗಳಾಗಿವೆ. ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 78,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 76,000 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 76,000 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 76,000 ರೂ. ಆಗಿದ್ದು, ಬೆಂಗಳೂರು ಹೊರತುಪಡಿಸಿ ಉಳಿದೆಡೆ ಬೆಳ್ಳಿ ಬೆಲೆಯಲ್ಲಿ ಕಡಿಮೆಯಾಗಿದೆ.

Follow Us:
Download App:
  • android
  • ios