Gold Silver Price Today: ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನ, ಬೆಳ್ಳಿ ದರ ಎಷ್ಟಿದೆ ನೋಡಿ..
ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..
ಇಂದು ದೇಶದಲ್ಲಿ (India) ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಹಾಗೆ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಆದರೆ ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..
ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,775
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,300
ಇದನ್ನು ಓದಿ: PETROL DIESEL PRICE TODAY: ಇಂದು ನಿಮ್ಮ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ ನೋಡಿ..
ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,200
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 50,400
ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 57,750
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 63,000
ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,77,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,30,000
ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 57,750 ಆಗಿದ್ದು ನಿನ್ನೆಗಿಂತ ಬೆಲೆ ಏರಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 58,300, ರೂ. 57,750 ಹಾಗೂ 57,750 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶುಕ್ರವಾರ 57,900 ರೂ. ಆಗಿದ್ದು, ಬೆಲೆಯಲ್ಲಿ ಹೆಚ್ಚಾಗಿದೆ.
ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.
ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಆದರೆ, ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 760, ರೂ. 7,600 ಹಾಗೂ ರೂ. 76,000 ಗಳಾಗಿವೆ. ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 80,500 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 78,500 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 78,500 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 78,500 ರೂ. ಆಗಿದ್ದು, ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದೆ.