Gold Silver Price Today: ವೀಕೆಂಡ್‌ನಲ್ಲಿ ನಿಮ್ಮ ನಗರಗಳಲ್ಲಿ ಬಂಗಾರ, ಬೆಳ್ಳಿ ದರ ಹೇಗಿದೆ ನೋಡಿ..

ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

what is the gold silver price today in your cities on december 2nd 2023 ash

Gold Rate on December 2nd 2023: ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಷೇರು ಮಾರುಕಟ್ಟೆಯಲ್ಲಿ ಏರಿಕೆ - ಇಳಿಕೆಯ ಆಧಾರದ ಮೇಲೂ ಆಭರಣ ದರದಲ್ಲಿ ವ್ಯತ್ಯಾಸವಾಗುತ್ತಿರುತ್ತದೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? 

ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ (Gold), ಬೆಳ್ಳಿ (Silver) ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ (Jewellery) ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಇದನ್ನು ಓದಿ: Petrol Diesel Price Today: ವೀಕೆಂಡ್‌ನಲ್ಲಿ ನಿಮ್ಮ ನಗರಗಳಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಹೇಗಿದೆ ನೋಡಿ..

ಇಂದು ದೇಶದಲ್ಲಿ (India) ಬಂಗಾರದ ದರದಲ್ಲಿ ಹೆಚ್ಚಿದ್ದು, ಹಾಗೆ ಬೆಳ್ಳಿ ಬೆಲೆಯಲ್ಲಿ ಸಹ ಏರಿಕೆಯಾಗಿದೆ. ಆದರೆ ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,845
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,376

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 46,760
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,008

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 58,450
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 63,760

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,84,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,37,600

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 58,450 ಆಗಿದ್ದು ನಿನ್ನೆಗಿಂತ ಬೆಲೆ ಏರಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 59,150, ರೂ. 58,450 ಹಾಗೂ 58,450 ರೂ. ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಚಿನ್ನದ ಬೆಲೆ ಶನಿವಾರ 58,650 ರೂ. ಆಗಿದ್ದು, ಬೆಲೆಯಲ್ಲಿ ಹೆಚ್ಚಾಗಿದೆ.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಸಹ ಹೆಚ್ಚಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಹೆಚ್ಚಾಗಿದ್ದು, ಬೆಳ್ಳಿ ದರದಲ್ಲಿ ಸಹ ಏರಿಕೆಯಾಗಿದೆ. ಆದರೆ, ಬೆಂಗಳೂರಲ್ಲಿ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 790, ರೂ. 7,900 ಹಾಗೂ ರೂ. 79,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 83,500 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 80,500 ಹಾಗೂ ಕೋಲ್ಕತ್ತದಲ್ಲಿ 1 ಕೆಜಿ ಬೆಳ್ಳಿ ದರ ರೂ. 80,500 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 1 ಕೆಜಿ ಬೆಳ್ಳಿ ದರ 80,500 ರೂ. ಆಗಿದ್ದು, ಬೆಂಗಳೂರು ಹೊರತುಪಡಿಸಿ ಉಳಿದೆಡೆ ಬೆಳ್ಳಿ ದರದಲ್ಲಿ ಹೆಚ್ಚಾಗಿದೆ.

Latest Videos
Follow Us:
Download App:
  • android
  • ios