Asianet Suvarna News Asianet Suvarna News

Gold Silver Price Today: ಆಭರಣ ಪ್ರಿಯರಿಗೆ ಕಹಿ ಸುದ್ದಿ; ದೇಶದಲ್ಲಿ ಮತ್ತಷ್ಟು ದುಬಾರಿಯಾದ ಚಿನ್ನದ ದರ

ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..


 

what is the gold silver price today in your cities on february 9th 2023 ash
Author
First Published Feb 9, 2023, 10:40 AM IST

Gold Rate on February 9th 2023: ದೇಶದಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕೊರತೆ ಇಲ್ಲ. ಬಹುತೇಕ ಮಹಿಳೆಯರು ಬಂಗಾರದ ಪ್ರಿಯರು. ಈ ಹಿನ್ನೆಲೆ, ಚಿನ್ನ , ಬೆಳ್ಳಿ ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಮೂಡುವುದಂತೂ ಗ್ಯಾರಂಟಿ. ಆದರೆ, ಕೇಂದ್ರ ಬಜೆಟ್ 2023 ರಲ್ಲಿ ಚಿನ್ನ, ಬೆಳ್ಳಿಯ ಅಬಕಾರಿ ಸುಂಕ ಕೆಚ್ಚಳ ಮಾಡಿದ ಬಳಿಕ ಆಭರಣ ಪ್ರಿಯರಿಗೆ ಮತ್ತಷ್ಟು ಶಾಕ್‌ ಕಾದಿದೆ. ಆದರೂ, ಶುಭ ಸಮಾರಂಭಗಳು ದೇಶದಲ್ಲಿ ಹೆಚ್ಚು ನಡೆಯುವುದರಿಂದಲೂ ಆಭರಣ ವಹಿವಾಟು ನಡೆಯುತ್ತಲೇ ಇರುತ್ತದೆ. ಈ ಕಾರಣಕ್ಕಾಗಿ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? 

ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ (Gold), ಬೆಳ್ಳಿ (Silver) ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ (Jewellery) ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಇದನ್ನು ಓದಿ: ಅಕ್ರಮವಾಗಿ ವಾಸ: ಬಾಂಗ್ಲಾ ಪ್ರಜೆಗೆ ಜಾಮೀನು ನೀಡಲು ಒಪ್ಪದ ಹೈಕೋರ್ಟ್‌

ಇಂದು ದೇಶದಲ್ಲಿ (India) ಬಂಗಾರದ ದರ ಏರಿಕೆಯಾಗಿದ್ದು,  ಆದರೆ ದೇಶದಲ್ಲಿ ಬೆಳ್ಳಿಯ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,295
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,776

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 42,360
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 46,208

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 52,950
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 57,760

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,29,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,77,600

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ.      52,950 ರೂ. ಆಗಿದ್ದು, ನಿನ್ನೆಗಿಂತ ಬೆಲೆ ಏರಿಕೆಯಾಗಿದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 53,950, ರೂ. 52,900 ಹಾಗೂ ರೂ., 52,900 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಗುರುವಾರ 53,050 ರೂ. ಆಗಿದ್ದು, ಬೆಲೆಯಲ್ಲಿ ಏರಿಕೆಯಾಗಿದೆ.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಏರಿಕೆಯಾಗಿದ್ದು, ಆದರೂ ಬೆಳ್ಳಿ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 740, ರೂ. 7,400 ಹಾಗೂ ರೂ. 74,000 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 74,000 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 71,400 ಹಾಗೂ ಕೋಲ್ಕತ್ತದಲ್ಲಿ ಸಹ 1 ಕೆಜಿ ಬೆಳ್ಳಿ ದರ ರೂ. 71,400 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ 71,400 ರೂ. ಆಗಿದ್ದು, ಬೆಲೆಯಲ್ಲಿ ಯಾವುದೇ ಏರಿಕೆ - ಇಳಿಕೆಯಾಗಿಲ್ಲ.

Follow Us:
Download App:
  • android
  • ios