ನೀವು ಸಹ ಚಿನ್ನ, ಬೆಳ್ಳಿ ಆಭರಣ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ.. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ.. ಎಲ್ಲಿ ಹೆಚ್ಚಾಗಿದೆ, ಎಲ್ಲಿ ಕಡಿಮೆಯಾಗಿದೆ ಅನ್ನೋ ಗೊಂದಲವೇ..? ಹಾಗಾದ್ರೆ, ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ..

Gold Rate on January 17th 2023: ದೇಶದಲ್ಲಿ ಶುಭ ಸಮಾರಂಭಗಳು ಹೆಚ್ಚಿರುವಂತೆ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಅಲ್ಲದೆ, ಬಹುತೇಕ ಮಹಿಳೆಯರು ಬಂಗಾರದ ಪ್ರಿಯರು. ಈ ಹಿನ್ನೆಲೆ, ಚಿನ್ನ , ಬೆಳ್ಳಿ ದರ ಇಳಿಕೆಯಾದರೆ ಮಹಿಳೆಯರ ಮೊಗದಲ್ಲಿ ನಗು ಮೂಡುವುದಂತೂ ಗ್ಯಾರಂಟಿ. ಇನ್ನೊಂದೆಡೆ, ದರ ಏರಿಕೆ, ಇಳಿಕೆ - ಹೇಗೆ ಇದ್ದರೂ ಆಭರಣ ವಹಿವಾಟು ನಡೆಯುತ್ತಲೇ ಇರುತ್ತದೆ. ಈ ಕಾರಣಕ್ಕಾಗಿ ಪ್ರತಿನಿತ್ಯ ಹಲವರು ಚಿನ್ನ, ಬೆಳ್ಳಿ ದರವನ್ನು ಪರಿಶೀಲಿಸುತ್ತಾರೆ. ನೀವೂ ಸಹ ಚಿನ್ನ, ಬೆಳ್ಳಿ ಖರೀದಿಗೆ ಪ್ಲ್ಯಾನ್‌ ಮಾಡಿದ್ದೀರಾ..? 

Add Asianetnews Kannada as a Preferred SourcegooglePreferred

ಇಂದು ಬೆಂಗಳೂರಿನಲ್ಲಿ (Bengaluru) ಬಂಗಾರ (Gold), ಬೆಳ್ಳಿ (Silver) ಬೆಲೆ ಎಷ್ಟಿದೆ ಹಾಗೂ ದೇಶದ ಪ್ರಮುಖ ನಗರಗಳಲ್ಲಿ ಆಭರಣ (Jewellery) ದರ ಹೇಗಿದೆ ಎಂಬ ಬಗ್ಗೆ ತಿಳ್ಕೋಬೇಕಾ.. ಇಲ್ಲಿದೆ ವಿವರ..

ಇದನ್ನು ಓದಿ: ಹೇಗಿದೆ ನಿಮ್ಮ ನಗರದಲ್ಲಿ ಇಂದು ಪೆಟ್ರೋಲ್ ಡಿಸೇಲ್ ದರ

ಇಂದು ದೇಶದಲ್ಲಿ (India) ಬಂಗಾರದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಆದರೆ ಬೆಳ್ಳಿಯ ದರದಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನ, ಬೆಳ್ಳಿ ಬೆಲೆ ವಿವರ ಹೀಗಿದೆ ನೋಡಿ..

ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,225
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,700

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 41,800
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 45,600

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 52,250
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 57,000

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 5,22,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,70,000

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 52,250 ರೂ. ಆಗಿದ್ದು, ನಿನ್ನೆಯ ಬೆಲೆಯಷ್ಟೇ ಇದೆ. ಇನ್ನು, ದೇಶದ ಪ್ರಮುಖ ಮೆಟ್ರೋಪಾಲಿಟನ್‌ ನಗರಗಳಾದ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾದಲ್ಲಿ ಕ್ರಮವಾಗಿ ಚಿನ್ನದ ಬೆಲೆ ರೂ. 53,170, ರೂ. 52,200, ರೂ. 52,200, ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ಹೊಸ ದೆಹಲಿಯಲ್ಲಿ ಸಹ ಚಿನ್ನದ ಬೆಲೆ ಮಂಗಳವಾರ 52,350 ರೂ. ಆಗಿದ್ದು, ಬೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ.

ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ದೇಶಾದ್ಯಂತ ಇಂದು ಬಂಗಾರದ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ, ಬೆಳ್ಳಿ ದರದಲ್ಲಿ ಇಳಿಕೆಯಾಗಿದೆ. ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 753, ರೂ. 7,530 ಹಾಗೂ ರೂ. 75,300 ಗಳಾಗಿವೆ. ಇನ್ನು, ದೇಶದ ಇತರೆ ಪ್ರಮುಖ ನಗರಗಳಾದ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 75,300 ಆಗಿದ್ದು, ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ರೂ. 72,500 ಹಾಗೂ ಕೋಲ್ಕತ್ತದಲ್ಲಿ ಸಹ 1 ಕೆಜಿ ಬೆಳ್ಳಿ ದರ ರೂ. 72,500 ಆಗಿದೆ. ಅದೇ ರೀತಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸಹ 72,500 ರೂ. ಆಗಿದ್ದು, ಬೆಲೆಯಲ್ಲಿ ಇಳಿಕೆ ಕಂಡಿದೆ.