Gold and Silver price today: ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ದೊಡ್ಡದಿದೆ. ಜತೆಗೆ ಚಿನ್ನದ ಮೇಲಿನ ವ್ಯಾಮೋಹವೂ ಹಲವರಿಗಿದೆ. ಚಿನ್ನ ಮತ್ತು ಬೆಳ್ಳಿಯ ಬೆಲೆ ಪ್ರತಿನಿತ್ಯ ಏರುಪೇರಾಗುತ್ತದೆ. ಪ್ರತಿನಿತ್ಯದ ಬೆಲೆ ನೋಡಿಯೇ ಜನ ಹೂಡಿಕೆ ಮಾಡುತ್ತಾರೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ?
ಬೆಂಗಳೂರು(ಏ.16): ಚಿನ್ನ ಮತ್ತು ಬೆಳ್ಳಿ ಅಂದರೆ ಬಹುತೇಕ ಮಹಿಳೆಯರಿಗೆ ಪ್ರಾಣ, ಮತ್ತು ಎಷ್ಟೋ ಕಷ್ಟದ ಸಮಯಗಳಲ್ಲಿ ಮನೆಯ ಆರ್ಥಿಕ ಸಮಸ್ಯೆಗಳಿಗೆ ಪರಿಹಾರವಾಗಿ ನಿಲ್ಲುವುದೇ ಮನೆಯಲ್ಲಿರುವ ಚಿನ್ನ. ಇದೇ ಕಾರಣಕ್ಕಾಗಿ ಕೆಲವರು ಆಪತ್ಕಾಲಕ್ಕಾಗಿ ಎಂದು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾರೆ. ಇನ್ನು ಕೆಲವರು ಆಭರಣದ ಮೇಲಿನ ವ್ಯಾಮೋಹಕ್ಕಾಗಿ ಚಿನ್ನ ಕೊಳ್ಳುತ್ತಾರೆ. ಒಟ್ಟಿನಲ್ಲಿ ಚಿನ್ನ ಮತ್ತು ಬೆಳ್ಳಿಗೆ ಸದಾಕಾಲ ಬೇಡಿಕೆ ಇದ್ದೇ ಇದೆ. ಚಿನ್ನ ಮತ್ತು ಬೆಳ್ಳಿ ಇಂದಿನ ಬೆಲೆ ಈ ಕೆಳಗಿನಂತಿದೆ.
ಒಂದು ಗ್ರಾಂ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,955
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,406
ಎಂಟು ಗ್ರಾಂ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 39,640
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 43,248
ಹತ್ತು ಗ್ರಾಂ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 49,550
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 54,060
ನೂರು ಗ್ರಾಂ (100G)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,95,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,40,600
ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 49,550 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 50,196, ರೂ. 49,550, ರೂ. 49,550 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 49,550 ರೂ. ಆಗಿದೆ.
ಇಂದಿನ ಬೆಳ್ಳಿ ದರ
ನಿನ್ನೆಗೆ ಹೋಲಿಸಿದರೆ ಇಂದು ಭಾರತದಲ್ಲಿ ಬೆಳ್ಳಿ ದರದಲ್ಲಿ ಹೆಚ್ಚಳವಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ಅಲ್ಲದೆ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನವೂ ಸಹ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಲೆ ಇರುತ್ತದೆ.
ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಇಂದು, ಬೆಂಗಳೂರಿನಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 744, ರೂ. 7,440 ಹಾಗೂ ರೂ. 74,400 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ 74,400 ಆಗಿದ್ದರೆ ದೆಹಲಿಯಲ್ಲಿ 70,000 ಮುಂಬೈನಲ್ಲಿ 70,000 ಹಾಗೂ ಕೋಲ್ಕತ್ತದಲ್ಲೂ ರೂ. 70,000 ಗಳಾಗಿದೆ.
