ಯಸ್ ಬ್ಯಾಂಕ್ ಬಿಕ್ಕಟ್ಟು: ಅನಿಲ್ ಅಂಬಾನಿಗೆ ಸಂಕಷ್ಟ!
ಆರ್ಥಿಕ ಬಿಕ್ಕಟ್ಟಿನಲ್ಲಿ ಯಸ್ ಬ್ಯಾಂಕ್| ಅನಿಲ್ ಅಂಬಾನಿಗೆ ನೋಟಿಸ್ ಜಾರಿಗೊಳಿಸಿದ ಇಡಿ ಅಧಿಕಾರಿಗಳು| ಆರೋಗ್ಯ ಸರಿ ಇಲ್ಲ ಎಂಬ ಅಂಬಾನಿ
ಮುಂಬೈ[ಮಾ.16]: ಯಸ್ ಬ್ಯಾಂಕ್ ಬಿಕ್ಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅನಿಲ್ ಅಂಬಾನಿಗೆ ನೋಟಿಸ್ ಜಾರಿಗೊಳಿಸಿದೆ. ಯಸ್ ಬ್ಯಾಂಕ್ ನೀಡಿರುವ ಲೋನ್ ಕುರಿತಾದ ವಿಚಾರಣೆಗೆ ಮುಂಬೈ ಇಡಿ ಕಚೇರಿಗೆ ಹಾಜರಾಗುವಂತೆ ಅಧಿಕಾರಿಗಳು ಶನಿವಾರ ನೋಟಿಸ್ ನೀಡಿದ್ದಾರೆ.
ಇನ್ನು ಆರೋಗ್ಯ ಸಮಸ್ಯೆ ಕಾರಣ ನೀಡಿರುವ ಅನಿಲ್ ಅಂಬಾನಿ ಸದ್ಯ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ಹೀಗಾಗಿ ವಿಚಾರಣೆ ದಿನಾಂಕ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಇಂದು ಸೋಮವಾರ, ಇಡಿ ಅಧಿಕಾರಿಗಳು ವಿಚಾರಣೆಗೆ ಹೊಸ ದಿನಾಂಕ ನಿಗದಿಪಡಿಸಲಿದ್ದಾರೆ. ಇಲ್ಲವಾದಲ್ಲಿ ರಿಲಾಯನ್ಸ್ ಹಣಕಾಸು ವಿಭಾಗದ ಅಧಿಕಾರಿಗಳನ್ನು ಈ ವಾರದೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸುವ ಸಾಧ್ಯತೆಗಳಿವೆ.
ಯಸ್ ಬ್ಯಾಂಕ್ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಯಸ್ ಬ್ಯಾಂಕ್ ಗ್ರಾಹಕರಿಗೆ ನಿರಾಳ
ಇನ್ನು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ಸ್ವಾಮ್ಯದ ಯಸ್ ಬ್ಯಾಂಕ್ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರ ಶುಕ್ರವಾರ ತಡರಾತ್ರಿ ಅಧಿಸೂಚನೆ ಹೊರಡಿಸಿದೆ. ಇದರಿಂದಾಗಿ ಬ್ಯಾಂಕಿನ ಗ್ರಾಹಕರು ಮಾಸಿಕ 50 ಸಾವಿರ ರು.ಗಿಂತ ಹೆಚ್ಚು ನಗದನ್ನು ಹಿಂಪಡೆಯುವಂತಿಲ್ಲ ಎಂಬ ಮಿತಿ ಮಾ.18ರಿಂದ ರದ್ದಾಗಲಿದ್ದು, ಗ್ರಾಹಕರು ಪರಿಪೂರ್ಣವಾಗಿ ನಿರಾಳರಾಗುವಂತಾಗಿದೆ.