ಟಾಟಾ ಅಲ್ಟ್ರೋಜ್ ಇವಿ, ಹ್ಯುಂಡೈ IONIQ ಸೇರಿ 7 ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್ ಕಾರು ಶೀಘ್ರದಲ್ಲೇ ಲಾಂಚ್!
ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳಲ್ಲಿ ಹೊಸ ಅಧ್ಯಾಯ ನಿರ್ಮಾಣವಾಗುತ್ತಿದೆ. ಟಾಟಾ ಮೋಟಾರ್ಸ್ ಭಾರತದ ಅತೀ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡುತ್ತಿದೆ. ಇದರ ಜೊತೆಗೆ ಹ್ಯುಂಡೈ IONIQ5 ಸೇರಿದಂತೆ 7ಕ್ಕೂ ಹೆಚ್ಚು ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್ ಕಾರುಗಳು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಯಾಗುತ್ತಿದೆ.
ಬೆಂಗಳೂರು(ಆ.02): ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಹೆಚ್ಚಾಗುತ್ತಿದೆ. ಇದಕ್ಕೆ ತಕ್ಕಂತೆ ಹೊಸ ಹೊಸ ಇವಿ ಬಿಡುಗಡೆಯಾಗುತ್ತಿದೆ. ಸದ್ಯ ಟಾಟಾ ಮೋಟಾರ್ಸ್ ಭಾರತದ ಎಲೆಕ್ಟ್ರಿಕ್ ಕಾರು ಮಾರುಕಟ್ಟೆಯಲ್ಲಿ ಅಗ್ರಸ್ಥಾನದಲ್ಲಿದೆ. ಇದರ ಜೊತೆಗೆ ಹ್ಯುಂಡೈ, ಎಂಜಿ ಮೋಟಾರ್ಸ್ ಎಲೆಕ್ಟ್ರಿಕ್ ಕಾರುಗಳು ಲಭ್ಯವಿದೆ. ಇದೀಗ ಮತ್ತಷ್ಟು ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್ ಕಾರುಗಳು ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗುತ್ತಿದೆ. ಬಿಡುಗಡೆಯಾಗಲಿರುವ ಕಾರುಗಳಲ್ಲಿ ಹಲವು ವಿಶೇಷತೆಗಳಿವೆ. ಇದರಲ್ಲಿ ಪ್ರಮುಖವಾಗಿ ಕೈಗೆಟುಕುವ ದರದಲ್ಲಿ ಎಲೆಕ್ಟ್ರಿಕ್ ಕಾರು ಬಿಡುಗಡೆಯಾಗುತ್ತಿದೆ. ಇತರ ಎಲೆಕ್ಟ್ರಿಕ್ ವಾಹನಗಳಿಗೆ ಹೋಲಿಸಿದರೆ ಟಾಟಾ ಮೋಟಾರ್ಸ್ ಟಿಗೋರ್ ಇವಿ ಹಾಗೂ ನೆಕ್ಸಾನ್ ಇವಿ ಕಾರುಗಳು ಕಡಿಮೆ ಬೆಲೆಯಲ್ಲಿ ಲಭ್ಯವಿದೆ. ಇದೀಗ ಟಾಟಾ, ಹ್ಯುಂಡೈ, ಮರ್ಸಿಡೀಸ್ ಬೆಂಜ್ ಸೇರಿದಂತೆ 7ಕ್ಕೂ ಹೆಚ್ಚು ಎಲೆಕ್ಟ್ರಿಕ್ ಹಾಗೂ ಹೈಬ್ರಿಡ್ ಕಾರು ಬಿಡುಗಡೆಯಾಗುತ್ತಿದೆ.
ಟಾಟಾ ಅಲ್ಟ್ರೋಲ್ ಇವಿ
ಟಾಟಾ ಮೋಟಾರ್ಸ್ ಅಲ್ಟ್ರೋಜ್ ಕಾರು ಭಾರಿ ಬೇಡಿಕೆಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರನ್ನು ಎಲೆಕ್ಟ್ರಿಕ್ ಕಾರಾಗಿ ಟಾಟಾ ಬಿಡುಗಡೆ ಮಾಡುತ್ತಿದೆ. 2019ರ ಆಟೋ ಎಕ್ಸ್‌ಪೋದಲ್ಲಿ ಟಾಟಾ ಅಲ್ಟ್ರೋಜ್ ಇವಿ ಕಾರು ಅನಾವರಣ ಮಾಡಲಾಗಿತ್ತು. ಬಳಿಕ ಕೊರೋನಾ ಕಾರಣ ಕಾರು ಬಿಡುಗಡೆ ವಿಳಂಬವಾಗಿತ್ತು. ನೆಕ್ಸಾನ್ ಇವಿ ಕಾರಿನ ಬಹುತೇಕ ಫೀಚರ್ಸ್ ಈ ಕಾರಿನಲ್ಲಿದೆ. ವಿಶೇಷ ಅಂದರೆ ಈ ಕಾರಿನ ಬೆಲೆ 10 ರಿಂದ 13 ಲಕ್ಷ ರೂಪಾಯಿ ಒಳಗಿರಲಿದೆ ಎಂದು ಕಂಪನಿ ಹೇಳಿದೆ.
ಹೊಸ ದಾಖಲೆಗೆ ಭಾರತದ ಆಟೋ ಮಾರ್ಕೆಟ್ ಸಜ್ಜು, ಬಿಡುಗಡೆಯಾಗಲಿದೆ RE ಎನ್‌ಫೀಲ್ಡ್ to ಹ್ಯುಂಡೈ ಟಕ್ಸನ್!
ಹ್ಯುಂಡೈ ಕೋನಾ ಫೇಸ್‌ಲಿಫ್ಟ್
2019ರಲ್ಲಿ ಹ್ಯುಂಡೈ ಕೋನಾ ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಬಿಡುಗಡೆಯಾಗಿದೆ. ಇದೀಗ ಫೇಸ್‌ಲಿಫ್ಟ್ ವರ್ಶನ್ ಬಿಡುಗಡೆಯಾಗುತ್ತಿದೆ. ಒಂದು ಬಾರಿ ಚಾರ್ಜ್ ಮಾಡಿದರೆ 483 ಕಿ.ಮೀ ಮೈಲೇಜ್ ರೇಂಜ್ ಹೊಂದಿರುವ ಸಾಧ್ಯತೆ ಇದೆ. ನೂತನ ಕೋನಾ ಫೇಸ್‌ಲಿಫ್ಟ್ ಕಾರಿನ ಬೆಲೆ 24 ರಿಂದ 26 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಮರ್ಸಿಡೀಸ್ AMG EQS 53 4ಮ್ಯಾಟಿಕ್+
ಮರ್ಸಿಡೀಸ್ AMG EQS 53 4ಮ್ಯಾಟಿಕ್+ ಎಲೆಕ್ಟ್ರಿಕ್ ಕಾರು ಆಗಸ್ಟ್ 24 ರಂದು ಬಿಡುಗಡೆಯಾಗಲಿದೆ. AMG ವರ್ಶನ್ ಕಾರಾಗಿದೆ. 3.4 ಸೆಕೆಂಡ್‌ನಲ್ಲಿ 100 ಕಿ.ಮೀ ವೇಗ ತಲುಪಲಿದೆ. ಈ ಕಾರಿನ ಗರಿಷ್ಠ ವೇಗ 250 ಕಿ.ಮೀ ಪ್ರತಿ ಗಂಟೆಗೆ. 658 PS ಪವರ್ ಹಾಗೂ 950 Nm ಪೀಕ್ ಟಾರ್ಕ್ ಉತ್ಪಾದಿಸಬಲ್ಲ ಸಾಮರ್ಥ್ಯ ಹೊಂದಿದೆ
ಹ್ಯುಂಡೈ IONIQ5
ಹ್ಯುಂಡೈ ಬಹುನಿರೀಕ್ಷಿತ IONIQ5 ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಈ ಕಾರು ಭಾರತದಲ್ಲೇ ಉತ್ಪಾದನೆಯಾಗುತ್ತಿದೆ. ಕಿಯಾ ಇವಿ6 ಪ್ಲಾಟ್‌ಫಾರ್ಮ್ ಅಡಿಯಲ್ಲಿ ಕಾರು ಬಿಡುಗಡೆಯಾಗುತ್ತಿದೆ. ಈ ಕಾರು 58KwH ಬ್ಯಾಟರಿ ಪ್ಯಾಕ್ ಹೊಂದಿದೆ. ಹೀಗಾಗಿ ಒಂದು ಬಾರಿ ಚಾರ್ಜ್ ಮಾಡಿದರೆ 384 ಕಿ.ಮೀ ಮೈಲೇಜ್ ರೇಂಜ್ ನೀಡಲಿದೆ. ಇನ್ನು 72.6 KwH ಬ್ಯಾಟರಿ ಪ್ಯಾಕ್ ಹೊಂದಿರುವ ಹ್ಯುಂಡೈ IONIQ5 ಕಾರು ಒಂದು ಬಾರಿ ಚಾರ್ಜ್ ಮಾಡಿದರೆ 481 ಕಿ.ಮೀ ಮೈಲೇಜ್ ನೀಡಲಿದೆ.
ಹೊಸ ರೂಪ, ಹೊಸ ವಿನ್ಯಾಸ, ಆ.18ಕ್ಕೆ ಕೈಗೆಟುಕುವ ದರದಲ್ಲಿ ಹೊಚ್ಚ ಹೊಸ ಮಾರುತಿ ಅಲ್ಟೋ ಲಾಂಚ್!
ಎಲೆಕ್ಟ್ರಿಕ್ ಕಾರುಗಳ ಜೊತೆ ಹೈಬ್ರಿಡ್ ಕಾರು ಕೂಡ ಬಿಡುಗಡೆಯಾಗುತ್ತಿದೆ. ಆಗಸ್ಟ್ 16ಕ್ಕೆ ಟೋಯೋಟಾ ಅರ್ಬನ್ ಕ್ರೂಸರ್ ಹೈರೈಡರ್ ಕಾರು ಬಿಡುಗಡೆಯಾಗುತ್ತಿದೆ. ಕಾರಿನ ಬುಕಿಂಗ್ ಆರಂಭಗೊಂಡಿದೆ. 25,000 ರೂಪಾಯಿ ನೀಡಿ ಈ ಕಾರು ಬುಕ್ ಮಾಡಿಕೊಳ್ಳಬಹುದು. 1.5 ಲೀಟರ್ ಪೆಟ್ರೋಲ್ ಎಂಜಿನ್ ಹಾಗೂ 51 KW ಮೋಟಾರ್ ಹೊಂದಿದೆ. ಹೈರೈಡರ್ ಬೆನ್ನಲ್ಲೇ ಮಾರುತಿ ಸುಜುಕಿ ವಿಟಾರ ಬ್ರಿಜಾ ಹೈಬ್ರಿಡ್ ಕಾರು ಬಿಡುಗಡೆಯಾಗುತ್ತಿದೆ. ಹ್ಯುಂಡೈ ಸಣ್ಣ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಲು ಸಜ್ಜಾಗಿದೆ.