ಬಿಡದಿ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಉತ್ಪಾದನೆ ಘಟಕ ಸ್ಥಾಪನೆ: ಟೊಯೋಟಾ ಕಿರ್ಲೋಸ್ಕರ್!
- ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆ
- ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ಪ್ರಗತಿಯಲ್ಲಿ
- ಟೊಯೋಟಾ ಕಿರ್ಲೋಸ್ಕರ್ ಮೋಟಾರ್‌ನಿಂದ ಸಾಮಾಜಿಕ ಕಾರ್ಯ
ಬೆಂಗಳೂರು(ಜೂ.14): ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಬಿಡದಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಮ್ಲಜನಕ ಉತ್ಪಾದನಾ ಘಟಕವನ್ನು ಸ್ಥಾಪಿಸುವುದಾಗಿ ಘೋಷಿಸಿದೆ. ಕಂಪನಿಯು ಈಗಾಗಲೇ ಘೋಷಿಸಿದಂತೆ ಬಿಡದಿಯ ಸಮುದಾಯ ಆರೋಗ್ಯ ಕೇಂದ್ರವನ್ನು ಅತ್ಯಾಧುನಿಕವಾಗಿ ಮೇಲ್ದರ್ಜೆಗೇರಿಸುವ ಕಾರ್ಯ ಪ್ರಗತಿಯಲ್ಲಿದೆ. ಇದೀಗ ನೂತನ ಆಮ್ಲಜನಕ ಉತ್ಪಾದನಾ ಘಟಕವನ್ನು ಸ್ಥಾಪಿಸುವುದರಿಂದ ಮೂಲಸೌಕರ್ಯವನ್ನು ಮತ್ತಷ್ಟು ಹೆಚ್ಚಿಸಿದಂತಾಗಿದೆ.
ಟೊಯೋಟಾ ಕಿರ್ಲೋಸ್ಕರ್‌ನಿಂದ ರಾಜ್ಯಕ್ಕೆ ಆಕ್ಸಿಜನ್ ಕಾನ್ಸನ್‌ಟ್ರೇಟರ್ಸ್ ನೆರವು!
ಇತ್ತೀಚಿನ ತಂತ್ರಜ್ಞಾನವನ್ನು ಹೊಂದಿರುವ ಆಕ್ಸಿಜನ್ ಘಟಕವು ಬಾಟ್ಲಿಂಗ್ ಸೌಲಭ್ಯವನ್ನು ಹೊಂದಿರುತ್ತದೆ. ಇದು ಆಮ್ಲಜನಕ ಪೂರೈಕೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಕೋವಿಡ್ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ಸರ್ಕಾರಕ್ಕೆ ಸಹಾಯ ಮಾಡುತ್ತದೆ. ಆಮ್ಲಜನಕ ಘಟಕವು ದಿನಕ್ಕೆ ಸುಮಾರು 50 ಸಿಲಿಂಡರ್ ಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇದನ್ನು ಬಿಡದಿ ಸಿ.ಎಚ್.ಸಿ ಮತ್ತು ರಾಮನಗರ ಜಿಲ್ಲಾಸ್ಪತ್ರೆಗೆ ಪೂರೈಸಲಾಗುವುದು. ನೂತನ ಘಟಕವು ನವೆಂಬರ್ 2021 ರ ಅಂತ್ಯದ ವೇಳೆಗೆ ಬಳಕೆಗೆ ಸಿದ್ಧವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ರಾಮನಗರಕ್ಕೆ 3.5 ಕೋಟಿ ಮೌಲ್ಯದ ವೈದ್ಯಕೀಯ ಸಲಕರಣೆ ನೀಡಿದ ಟೊಯೊಟಾ ಕಿರ್ಲೋಸ್ಕರ್
ಕೇಂದ್ರ ಮತ್ತು ರಾಜ್ಯ ಸರ್ಕಾರದ ಚುರುಕಾದ ಮತ್ತು ಸ್ಕೇಲಬಲ್ ಆರೋಗ್ಯ ಸೌಲಭ್ಯಗಳ ಜೊತೆಗೆ ಕಾರ್ಪೊರೇಟ್ ಗಳಿಂದ ನಿರಂತರ ಬೆಂಬಲವ ದೊರೆಯುತ್ತಿರುವುದು ತುಂಬಾ ಪ್ರೋತ್ಸಾಹದಾಯಕವಾಗಿದೆ. ಇದು ವೈದ್ಯಕೀಯ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ನಮ್ಮ ಪ್ರಯತ್ನಗಳನ್ನು ಹೆಚ್ಚಿಸಿದೆ. ಟಿಕೆಎಂ ಯಾವಾಗಲೂ ಸಮುದಾಯ ಕಾರ್ಯಕ್ರಮಗಳಿಗೆ ಸಕ್ರಿಯ ಕೊಡುಗೆ ನೀಡುತ್ತದೆ. ಹೊಸ ಆಮ್ಲಜನಕ ಉತ್ಪಾದಿಸುವ ಘಟಕವನ್ನು ಸ್ಥಾಪಿಸುವುದು ಈ ಪ್ರದೇಶದಲ್ಲಿ ನಿರ್ಣಾಯಕ ಆರೋಗ್ಯ ಮೂಲಸೌಕರ್ಯದ ಲಭ್ಯತೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಆಕ್ಸಿಜನ್ ಮಾಗಡಿ ಕ್ಷೇತ್ರದ ಶಾಸಕ ಎ ಮಂಜುನಾಥ್ ಹೇಳಿದರು.
ಮಾನವಕುಲಕ್ಕೆ ವ್ಯಾಪಕ ವಾಗಿ ಹರಡಿ ತೊಂದರೆಗಳನ್ನು ಉಂಟುಮಾಡಿರುವ ಈ ಸಾಂಕ್ರಾಮಿಕ ರೋಗದ ವಿರುದ್ಧ ಸ್ಥಳೀಯ ಸಮುದಾಯವನ್ನು ಜಯಗೊಳಿಸುವಂತೆ ಮಾಡಲು ಟೊಯೋಟಾ ಸಂಪೂರ್ಣವಾಗಿ ಸಮರ್ಪಿತವಾಗಿದೆ. ಟೊಯೋಟಾ ತನ್ನ ಸುರಕ್ಷತಾ ತತ್ವಶಾಸ್ತ್ರಕ್ಕೆ ಅನುಗುಣವಾಗಿ ಸರ್ಕಾರದ ಪ್ರಯತ್ನಗಳಿಗೆ ಪೂರಕವಾಗಿ ಹಲವಾರು ಕ್ರಮಗಳನ್ನು ಕೈಗೊಂಡಿದೆ. ನಮ್ಮ ಸಿಎಸ್ಆರ್ ಉಪಕ್ರಮಗಳ ಅಡಿಯಲ್ಲಿ, ಆರೋಗ್ಯ ರಕ್ಷಣೆ ಯಾವಾಗಲೂ ಆದ್ಯತೆಯ ಕ್ಷೇತ್ರವಾಗಿದೆ ಮತ್ತು ಜಿಲ್ಲೆಯಲ್ಲಿ ಅಗತ್ಯಬಿದ್ದಾಗ ಆರೋಗ್ಯ ಸೌಲಭ್ಯಗಳನ್ನು ಹೆಚ್ಚಿಸಲು ಸರ್ಕಾರದ ಬೆಂಬಲದೊಂದಿಗೆ ನಾವು ನಿರಂತರವಾಗಿ ಶ್ರಮಿಸಿದ್ದೇವೆ. ಎರಡನೇ ಕೋವಿಡ್ ಅಲೆಯ ವಿರುದ್ಧದ ಹೋರಾಟದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಪೂರ್ವಭಾವಿ ಕ್ರಮಗಳನ್ನು ಕೈಗೊಂಡಿವೆ. ಅವರು ಕೈಗೊಂಡಿರುವ ಅಪಾರ ಪ್ರಯತ್ನಗಳನ್ನು ನಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ. ದೇಶದ ಜೀವನವು ತ್ವರಿತವಾಗಿ ಸಾಮಾನ್ಯ ಸ್ಥಿತಿಗೆ ಮರಳುತ್ತದೆ ಎಂದು ಆಶಿಸುತ್ತೇವೆ ಎಂದು ಟಿಕೆಎಂನ ಉಪಾಧ್ಯಕ್ಷ ವಿಕ್ರಮ್ ಗುಲಾಟಿ ಹೇಳಿದರು.