AICTE Recruitment 2022: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ವಿವಿಧ ಹುದ್ದೆಗಳ ನೇಮಕಾತಿ

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು ಖಾಲಿ ಸಲಹೆಗಾರ ಮತ್ತು ನಿರ್ದೇಶಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಎಪ್ರಿಲ್ 11 ಕೊನೆಯ ದಿನವಾಗಿದೆ.

All India Council for Technical Education Recruitment 2022 notification for Advisor and director post gow

ಬೆಂಗಳೂರು (ಮಾ.30):  ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು - ಎಐಸಿಟಿಇ (All India Council for Technical Education - AICTE) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಸಲಹೆಗಾರ (Advisor), ನಿರ್ದೇಶಕರ (Director) ಸೇರಿ ಒಟ್ಟು 6 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 11 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ತಾಣ https://www.aicte-india.org/ ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ಕೋರಲಾಗಿದೆ. ವಿವಿಧ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ: https://facilities.aicte-india.org/recruitment_aicte/   

ಶೈಕ್ಷಣಿಕ ವಿದ್ಯಾರ್ಹತೆ:  ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯಲ್ಲಿ (AICTE) ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ  ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ಕೆಲಸದ ಅನುಭವ: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಕೇಂದ್ರ ಅಥವಾ ರಾಜ್ಯ ಸರ್ಕಾರದ ವಿಶ್ವವಿದ್ಯಾಲಯ/ಉನ್ನತ ಶಿಕ್ಷಣ ಸಂಸ್ಥೆಗಳು/ ಸ್ವಾಯತ್ತ ಸಂಸ್ಥೆಗಳು / ಸಾರ್ವಜನಿಕ ವಲಯದ ಸಂಸ್ಥೆಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ಗಳಲ್ಲಿ ಬೋಧನೆ ಅಥವಾ ಸಂಶೋಧನೆ, ಶೈಕ್ಷಣಿಕ ಯೋಜನೆ ಅಥವಾ ಆಡಳಿತ, ತರಬೇತಿ ಇತ್ಯಾದಿಗಳಲ್ಲಿ 15 ವರ್ಷಗಳ ಅನುಭವವನ್ನು ಹೊಂದಿರಬೇಕು.

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ನಿರ್ದೇಶಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕೇಂದ್ರ ಅಥವಾ ರಾಜ್ಯ ಸರ್ಕಾರಿ ವಿಶ್ವವಿದ್ಯಾಲಯ / ಉನ್ನತ ಶಿಕ್ಷಣ ಸಂಸ್ಥೆಗಳು/ ಸ್ವಾಯತ್ತ ಸಂಸ್ಥೆಗಳು / PSU ಗಳಲ್ಲಿ ಬೋಧನೆ ಅಥವಾ ಸಂಶೋಧನೆ, ಶೈಕ್ಷಣಿಕ ಯೋಜನೆ ಅಥವಾ ಆಡಳಿತ, ತರಬೇತಿ ಇತ್ಯಾದಿಗಳಲ್ಲಿ 12 ವರ್ಷಗಳ ಅನುಭವವನ್ನು ಹೊಂದಿರಬೇಕು.

KRIDL RECRUITMENT 2022: ವಿವಿಧ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ

ವಯೋಮಿತಿ: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  01-08-2021  ಅನ್ವಯ 56 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ವಿಧಿಸಲಾಗಿಲ್ಲ.

KPSC Recruitment 2022: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ನೇಮಕಾತಿ

ವೇತನ ವಿವರ: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವೇತನ ದೊರೆಯಲಿದೆ. ಸಲಹೆಗಾರ ಹುದ್ದೆಗೆ ₹37400 ರಿಂದ ₹2,16,600 ಮತ್ತು ನಿರ್ದೇಶಕ ಹುದ್ದೆಗೆ ₹37400 ರಿಂದ ₹2,15,900 ದೊರೆಯಲಿದೆ.

ಉದ್ಯೋಗ ಸ್ಥಳ: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಭಾರತದಾದ್ಯಂತ ಪೋಸ್ಟಿಂಗ್ ಮಾಡಲಾಗುವುದು. 

Latest Videos
Follow Us:
Download App:
  • android
  • ios