AOC recruitment 2022: ಬರೋಬ್ಬರಿ 419 ಹುದ್ದೆಗಳಿಗೆ ಅರ್ಜಿ ಆಹ್ವಾನ
ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್, ರಕ್ಷಣಾ ಸಚಿವಾಲಯವು ಮೆಟೀರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನವೆಂಬರ್ 12 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಬೆಂಗಳೂರು (ಅ.27): ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ (Army Ordnance Corps), ರಕ್ಷಣಾ ಸಚಿವಾಲಯವು ಮೆಟೀರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು AOC ಯ ಅಧಿಕೃತ ಸೈಟ್ aocrecruitment.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಉದ್ಯೋಗ ಸುದ್ದಿಯಲ್ಲಿ ಜಾಹೀರಾತು ಪ್ರಕಟವಾದ ದಿನಾಂಕದಿಂದ 21 ದಿನಗಳ ಒಳಗೆ ಅಂದರೆ ನವೆಂಬರ್ 12ರೊಳಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ನೇಮಕಾತಿ ಅಭಿಯಾನದಲ್ಲಿ ಸಂಸ್ಥೆಯಲ್ಲಿ 419 ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ ಅಥವಾ ಮೆಟೀರಿಯಲ್ ಮ್ಯಾನೇಜ್‌ಮೆಂಟ್‌ನಲ್ಲಿ ಡಿಪ್ಲೊಮಾ ಅಥವಾ ಯಾವುದೇ ವಿಭಾಗದಲ್ಲಿ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮಾಡಿರಬೇಕು. ಅಭ್ಯರ್ಥಿಯ ವಯೋಮಿತಿಯು 18 ರಿಂದ 27 ವರ್ಷಗಳ ನಡುವೆ ಇರಬೇಕು.ಆನ್‌ಲೈನ್‌ನಲ್ಲಿ ಸ್ವೀಕರಿಸಿದ ಅರ್ಜಿಗಳ ಪರಿಶೀಲನೆ ಮತ್ತು ಶಾರ್ಟ್‌ಲಿಸ್ಟ್ ನಂತರ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಲಾಗುತ್ತದೆ. ಬಳಿಕ ಅಭ್ಯರ್ಥಿಗಳು ನೇಮಕಾತಿ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ವೇತನ ರೂ. 29,200 ರಿಂದ ರೂ. 92,300 ದೊರೆಯಲಿದೆ.
ಮೊಬೈಲ್ ಮತ್ತು ಇಮೇಲ್ ಐಡಿಯಲ್ಲಿ ವಿವಿಧ OTP ಆಧಾರಿತ ದೃಢೀಕರಣದ ಮೂಲಕ ಅರ್ಜಿದಾರರು ಕಡ್ಡಾಯವಾಗಿ ಆನ್‌ಲೈನ್ ನೋಂದಣಿಯ ನಂತರ ಆನ್‌ಲೈನ್ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುತ್ತದೆ. ಹೆಚ್ಚಿನ ಸಂಬಂಧಿತ ವಿವರಗಳಿಗಾಗಿ ಅಭ್ಯರ್ಥಿಗಳು ಆರ್ಮಿ ಆರ್ಡನೆನ್ಸ್ ಕಾರ್ಪ್ಸ್‌ನ ಅಧಿಕೃತ ಸೈಟ್ ಅನ್ನು ಪರಿಶೀಲಿಸಬಹುದು.
NTRO Recruitment 2022: ನ್ಯಾಷನಲ್ ಟೆಕ್ನಿಕಲ್ ರಿಸರ್ಚ್ ಆರ್ಗನೈಜೇಷನ್ ನಲ್ಲಿ ಐಟಿ
ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್, ರಕ್ಷಣಾ ಸಚಿವಾಲಯವು ಮೆಟೀರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 27 ವರ್ಷ ವಯಸ್ಸಿನವರಾಗಿರಬೇಕು.
NIC RECRUITMENT 2022: ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ ವಿಜ್ಞಾನಿ ಹುದ್ದೆಗಳಿಗೆ ನೇಮಕಾತಿ
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು
ಆಧಾರ್ ಕಾರ್ಡ್
ಪ್ಯಾನ್ ಕಾರ್ಡ್
ಮತದಾರರ ಗುರುತಿನ ಚೀಟಿ
ಪಾಸ್ಪೋರ್ಟ್
ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ
10 ನೇ ತರಗತಿ ಉತ್ತೀರ್ಣ ಪ್ರಮಾಣಪತ್ರ