Bank of Baroda Recruitment 2021: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗ, ತಿಂಗಳಿಗೆ 63,840 ರೂ ಸಂಬಳ
- ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬ್ಯಾಂಕ್ ಆಫ್ ಬರೋಡಾ
- ವಿವಿಧ 52 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಅರ್ಜಿ ಸಲ್ಲಿಸಲು ಡಿಸೆಂಬರ್ 28 ಕೊನೆಯ ದಿನಾಂಕ
ನವದೆಹಲಿ(ಡಿ.9): ಬ್ಯಾಂಕ್ ಆಫ್ ಬರೋಡ (Bank of Baroda) ಖಾಲಿ ಇರುವ 52 ಹುದ್ದೆಗಳನ್ನು ತುಂಬಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 52 ಐಟಿ ಪ್ರೊಫೆಶನಲ್ (IT professional) ಹುದ್ದೆಗಳು ಖಾಲಿ ಇದ್ದು, ಬಿಇ, ಬಿ ಟೆಕ್ ಪಾಸಾಗಿರುವ ಅಭ್ಯರ್ಥಿಗಳನ್ನು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಆಸಕ್ತರು ಆನ್‌ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಡಿಸೆಂಬರ್ 8ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಡಿಸೆಂಬರ್ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ಆಸಕ್ತರು ಬ್ಯಾಂಕ್ ಆಫ್ ಬರೋಡದ (Bank of Baroda) ಅಧಿಕೃತ ವೆಬ್ಸೈಟ್ www.bankofbaroda.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ.
ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ (job) ಮಾಡಲು ತಯಾರಿರುವ ಬಿಇ (BE), ಬಿ ಟೆಕ್ (B-tech) ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 36,000 ರೂ ನಿಂದ 63,840ರವರೆಗೆ ವೇತನ ಇರಲಿದೆ.
ಅರ್ಜಿ ಶುಲ್ಕ ಮತ್ತು ವಿದ್ಯಾರ್ಹತೆ: ಅರ್ಜಿ ಸಲ್ಲಿಸುವ SC/SC/PWD- ಅಭ್ಯರ್ಥಿಗಳು 100 ರೂ. ಮತ್ತು ಸಾಮಾನ್ಯ/ಒಬಿಸಿ/EWS ಕೆಟಗರಿಯಲ್ಲಿ ಬರುವವರು 600 ರೂ. ಪಾವತಿಸಬೇಕು. ಐಟಿ ಪ್ರೊಫೆಶನಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಬಿಇ/ ಬಿ.ಟೆಕ್ ಪೂರ್ಣಗೊಳಿಸಿರಬೇಕು. ಐಟಿ ಪ್ರೊಫೆಶನಲ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಉದ್ಯೋಗ ನೀಡಲಾಗುತ್ತದೆ. ಆನ್‌ಲೈನ್ ಟೆಸ್ಟ್ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.
SBI Recruitment 2021: ಎಸ್‌ಬಿಐನಲ್ಲಿ ತಿಂಗಳಿಗೆ 63,840ರೂ ಸಂಬಳದ ಉದ್ಯೋಗ, ಅರ್ಹರು ಇಂದೇ ಅರ್ಜಿ ಸಲ್ಲಿಸಿ
ಎಸ್‌ಬಿಐನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ:
ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ (State Bank of India) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನಾಂಕವಾಗಿದೆ. ಒಟ್ಟು 1226 ಸರ್ಕಲ್ ಬೇಸ್ಡ್ ಆಫೀಸರ್ (Circle Based Officer) ಹುದ್ದೆಗಳು ಖಾಲಿ ಇದ್ದು, ಅರ್ಹ ಪದವೀಧರರು ಇದಕ್ಕೆ ಅರ್ಜಿ ಸಲ್ಲಿಸಬಹುದು. ಡಿಸೆಂಬರ್ 9ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಉದ್ಯೋಗ ಪಡೆಯಲು ಇಚ್ಚಿಸುವವರು ಹೆಚ್ಚಿನ ಮಾಹಿತಿಗಾಗಿ ಎಸ್ಬಿಐನ ಅಧಿಕೃತ ವೆಬ್ಸೈಟ್ sbi.co.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.
ಅರ್ಜಿ ಶುಲ್ಕ ಮತ್ತು ವಿದ್ಯಾರ್ಹತೆ: ಸಾಮಾನ್ಯ/ಒಬಿಸಿ/EWS- 750 ರೂ. ಅರ್ಜಿ ಶುಲ್ಕ ಇರಲಿದೆ. SC/ST/ PWD ಅವರಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಸರ್ಕಲ್ ಬೇಸ್ಡ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು. ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಗರಿಷ್ಠ 30 ವರ್ಷ ಮೀರಿರಬಾರದು. ಆನ್‌ಲೈನ್ ಟೆಸ್ಟ್, ಸ್ಕ್ರೀನಿಂಗ್, ವೈಯಕ್ತಿಕ ಸಂದರ್ಶನದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ಕಡೆಗಳಲ್ಲಿ ಉದ್ಯೋಗ ಮಾಡಲು ತಯಾರಿರಬೇಕು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತಿಳಿಸಿದೆ.
RRB NTPC result date: ಜನವರಿ 15ರೊಳಗೆ ರೈಲ್ವೇ ನೇಮಕಾತಿ ಪರೀಕ್ಷಾ ಫಲಿತಾಂಶ ಪ್ರಕಟ