Asianet Suvarna News Asianet Suvarna News

BECIL Recruitment 2022: ಪತ್ರಿಕೋದ್ಯಮ ಪದವಿಯಾದವರಿಗೆ ಸುವರ್ಣವಕಾಶ, ಇಂದೇ ಅರ್ಜಿ ಸಲ್ಲಿಸಿ

ಸರ್ಕಾರಿ ಸ್ವಾಮ್ಯದ BECIL ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಸೋಷಿಯಲ್ ಮೀಡಿಯಾ ಎಕ್ಸಿಕ್ಯೂಟಿವ್ ಮತ್ತು ಸ್ಟಾರ್ಟ್ ಅಪ್ ಫೆಲೋ ಹುದ್ದೆ ಖಾಲಿ ಇದ್ದು ಜನವರಿ 21 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ. 

BECIL Recruitment 2022 notification for the Post of Social Media Executive gow
Author
Bengaluru, First Published Jan 1, 2022, 5:00 PM IST

ಬೆಂಗಳೂರು(ಜ.1): ಸರ್ಕಾರಿ ಸ್ವಾಮ್ಯದ ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿ. (Broadcast Engineering Consultants India Limited) ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ.  ಖಾಲಿ ಇರುವ ಹುದ್ದೆಯನ್ನು ಭರ್ತಿ ಮಾಡಲು  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 1 ಸೋಷಿಯಲ್ ಮೀಡಿಯಾ ಎಕ್ಸಿಕ್ಯೂಟಿವ್ (Social Media Executive) ಮತ್ತು 1 ಸ್ಟಾರ್ಟ್ ಅಪ್ ಫೆಲೋ (Start-up Fellow)​​ ಹುದ್ದೆ ಖಾಲಿ ಇದ್ದು ಆನ್‌ಲೈನ್ (online) ಮೂಲಕ ಅರ್ಜಿ ಸಲ್ಲಿಸಲು ಜನವರಿ 21  ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://www.becil.com/vacancies ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: BECILನಲ್ಲಿ ಖಾಲಿ ಇರುವ ಸೋಷಿಯಲ್ ಮೀಡಿಯಾ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ ಸಂವಹನ ಮತ್ತು ಪತ್ರಿಕೋದ್ಯಮ/ ಪಬ್ಲಿಕ್​ ರಿಲೇಶನ್ಸ್​ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು. ಮತ್ತು  ಸ್ಟಾರ್ಟ್ ಅಪ್ ಫೆಲೋ ಗೆ ಅರ್ಜಿ ಸಲ್ಲಿಸುವವರು ಕಡ್ಡಾಯವಾಗಿ  ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಇಂಜಿನಿಯರಿಂಗ್/ತಂತ್ರಜ್ಞಾನದಲ್ಲಿ ಬ್ಯಾಚುಲರ್ ಪದವಿಯನ್ನು ಪೂರ್ಣಗೊಳಿಸಿರಬೇಕು ಜೊತೆಗೆ ಇಂಜಿನಿಯರಿಂಗ್/ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.

ವೇತನ ಮತ್ತು ವಯೋಮಿತಿ: BECILನಲ್ಲಿ ಖಾಲಿ ಇರುವ ಸೋಷಿಯಲ್ ಮೀಡಿಯಾ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 36,000 ದಿಂದ 50,000 ವೇತನ ನಿಗದಿಯಾಗಿದೆ.

Land Surveyor Recruitment 2022: 3000 ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೆ ಅಧಿಸೂಚನೆ

ಅರ್ಜಿ ಶುಲ್ಕ ಮತ್ತು ಉದ್ಯೋಗ ಸ್ಥಳ:
ಸಾಮಾನ್ಯ/ಒಬಿಸಿ/ ಮಹಿಳಾ/ ಮಾಜಿ ಸೈನಿಕ- 750 ರೂ. ಅರ್ಜಿ ಶುಲ್ಕ
SC/ST/EWS/PH ಅಭ್ಯರ್ಥಿಗಳಿಗೆ - 450 ರೂ.ಅರ್ಜಿ ಶುಲ್ಕ
ಆಯ್ಕೆಯಾದ ಅಭ್ಯರ್ಥಿಗಳು ಉತ್ತರ ಪ್ರದೇಶದ ನೋಯ್ಡಾದಲ್ಲಿ ಉದ್ಯೋಗ ಮಾಡಬೇಕಾಗುತ್ತದೆ.

BSNL ನಲ್ಲಿ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (Bharath Sanchar Nigam Limited-BSNL), ಅಪ್ರೆಂಟಿಸ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ನೇಮಕಾತಿ ಪ್ರಕ್ರಿಯೆ ಶುರು ಮಾಡಿದೆ. ಒಟ್ಟು 12 ಗ್ರಾಜುಯೇಟ್​ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್ (Diploma Apprentice) ಹುದ್ದೆಗಳು ಖಾಲಿ ಇದ್ದು, ಈ ಅಪ್ರೆಂಟಿಸ್ ಹುದ್ದೆಗಳಿಗೆ ಡಿಸೆಂಬರ್ 29ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಹರು ಹಾಗೂ ಸೂಕ್ತ ಅಭ್ಯರ್ಥಿಗಳು ಜನವರಿ 20, 2022ರಂದು ಅರ್ಜಿ ಸಲ್ಲಿಸಬಹುದಾಗಿದೆ. ಬಿಎಸ್‌ಎನ್‌ಎಲ್,  ಜಮ್ಮು, ಶ್ರೀನಗರದಲ್ಲಿ ನೇಮಕಾತಿಗೆ ಈ ಬಾರಿ ಅರ್ಜಿಗಳನ್ನು ಆಹ್ವಾನಿಸಿದೆ.  ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅಧಿಕೃತ ಪೋರ್ಟಲ್ www.mhrdnats.gov.in ಅಥವಾ https://bsnl.co.in/ ಗೆ ಭೇಟಿ ನೀಡಿ. 

ಶೈಕ್ಷಣಿಕ ವಿದ್ಯಾರ್ಹತೆ: ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ತಮ್ಮನ್ನು ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯ (Ministry of Human Resource Development) ಪೋರ್ಟಲ್ mhrdnats.gov.in ನಲ್ಲಿ ನೋಂದಾಯಿಸಿಕೊಳ್ಳಬೇಕು.   ಜಮ್ಮು, ಶ್ರೀನಗರ ಟೆಲಿಕಾಂ ಸರ್ಕಲ್, ಇಂಜಿನಿಯರಿಂಗ್/ ಟೆಕ್ನಾಲಜಿ ಕ್ಷೇತ್ರದಲ್ಲಿ (ಎಲೆಕ್ಟ್ರಾನಿಕ್ಸ್/ ಇ& ಟಿಸಿ/ ಕಂಪ್ಯೂಟರ್/ ಐಟಿ)  ಡಿಪ್ಲೋಮಾ ವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಹೊಂದಿರುವವರನ್ನು ಒಂದು ವರ್ಷದ ಅವಧಿಗೆ ಅಪ್ರೆಂಟಿಸ್‌ಶಿಪ್ ತರಬೇತಿಗಾಗಿ ನೇಮಕ ಮಾಡಿಕೊಳ್ಳಲಿದೆ. ಅಪ್ರೆಂಟಿಸ್‌ಶಿಪ್ ತರಬೇತಿಯ ಅವಧಿಯು ಒಂದು ವರ್ಷವಿರುತ್ತದೆ. 

ವಯೋಮಿತಿ: ಗ್ರಾಜುಯೇಟ್​ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 31/ 01/ 2022 ತಕ್ಕಂತೆ  25 ವರ್ಷ ಮೀರಿರಬಾರದು.

MYSURU UDYOGA MELA: ಮೈಸೂರಿನಲ್ಲಿ ಜನವರಿ 4 ರಿಂದ ಉದ್ಯೋಗ ಮೇಳ

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಗ್ರಾಜುಯೇಟ್​ ಅಪ್ರೆಂಟಿಸ್, ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಶಾರ್ಟ್​​ಲಿಸ್ಟಿಂಗ್​, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ.  ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ. ಮತ್ತು ಜಮ್ಮು ಕಾಶ್ಮೀರದ ಜಮ್ಮು ಮತ್ತು ಶ್ರೀನಗರದಲ್ಲಿ ಉದ್ಯೋಗ ನೀಡಲಾಗುತ್ತದೆ.

Follow Us:
Download App:
  • android
  • ios