BEL Recruitment: ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ
* ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಬಿಇಎಲ್(BEL) ಅರ್ಜಿ ಆಹ್ವಾನ
* ಖಾಲಿ ಇರುವ ಪ್ರಾಜೆಕ್ಟ್ ಎಂಜಿನಿಯರ್-1 ಹುದ್ದೆಗಳಿಗೆ ನೇಮಕಾತಿ
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 24 ಕೊನೆಯ ದಿನವಾಗಿದೆ
ನವದೆಹಲಿ (ಡಿ.11): ನೀವು ಇಂಜಿನಿಯರಿಂಗ್ ಪದವಿ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ?. ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharath Electronics Limited- BEL) ನಲ್ಲಿ ಕೆಲಸಕ್ಕೆ ಸೇರುವ ಅವಕಾಶ ಒಲಿದು ಬಂದಿದೆ. BELನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಬಿಇಎಲ್ ನ ಅಧಿಕೃತ ವೆಬ್‌ಸೈಟ್ https://www.bel-india.in ಗೆ ಭೇಟಿ ನೀಡಿ ಹುದ್ದೆಗಳ ಬಗ್ಗೆ ಪರಿಶೀಲಿಸಬಹುದು. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಡಿಸೆಂಬರ್ 24 ರೊಳಗೆ ಅರ್ಜಿ ಸಲ್ಲಿಸಬೇಕು. BEL ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಪೂರೈಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ / ಸಂಸ್ಥೆಯಿಂದ ಬಿ.ಇ/ ಬಿ.ಟೆಕ್ ಪದವಿ ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಪ್ರಾಜೆಕ್ಟ್ ಇಂಜಿನಿಯರ್-I (Civil) - 24 ಹುದ್ದೆಗಳು, ಪ್ರಾಜೆಕ್ಟ್ ಇಂಜಿನಿಯರ್-I (Electrical/EEE) -6 ಹುದ್ದೆಗಳು ಪ್ರಾಜೆಕ್ಟ್ ಇಂಜಿನಿಯರ್-I (Mechanical) - 6 ಹುದ್ದೆಗಳು ಸೇರಿ ಒಟ್ಟು 36 ಹುದ್ದೆಗಳನ್ನ ಈ ನೇಮಕಾತಿ ಡ್ರೈವ್ ನಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತದೆ. ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 1 ,2021ಕ್ಕೆ ಅನ್ವಯಿಸುವಂತೆ ಗರಿಷ್ಟ 28 ವರ್ಷ ವಯೋಮಿತಿ ಒಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
Bank of Baroda Recruitment 2021: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗ, ತಿಂಗಳಿಗೆ 63,840 ರೂ ಸಂಬಳ
ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಶಾರ್ಟ್ ಲಿಸ್ಟ್ ಮಾಡಲಾಗುವುದು. ನಂತರ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಪಾಸ್ ಆದವರನ್ನು ನೇರ ಸಂದರ್ಶನದ ಮೂಲಕ ಬಿಇಎಲ್ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ . ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 35,000/- ರಿಂದ 50,000/-ರೂ.ಗಳ ವರೆಗೆ ವೇತನ ಲಭ್ಯವಾಗಲಿದೆ. ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500ರೂ .ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಎಸ್ಬಿಐ ಕಲೆಕ್ಟ್ ಅಥವಾ ಆನ್ಲೈನ್ ಮೂಲಕ ಅರ್ಜಿ ಶುಲ್ಕ ವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.
ಬಿಇಎಲ್ ನ ಪ್ರಾಜೆಕ್ಟ್ ಇಂಜಿನಿಯರ್-1ರಲ್ಲಿ ವಿವಿಧ ವಿಭಾಗ ಗಳಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿರುವವರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಪ್ರಾಜೆಕ್ಟ್ ಇಂಜಿನಿಯರ್-Iರಲ್ಲಿ ಸಿವಿಲ್ ಇಂಜಿನಿಯರಿಂಗ್ ಮಾಡುರುವರಿಗಾಗಿ 24 ಹುದ್ದೆಗಳು, ಎಲೆಕ್ಟ್ರಿಕಲ್/ಇಇಇ ವಿದ್ಯಾರ್ಹತೆ ಪಡೆದವರಿಗೆ 6 ಹುದ್ದೆಗಳು, ಮೆಕ್ಯಾನಿಕಲ್ ಇಂಜಿನಿಯರಿಂಗ್ ಪೂರೈಸಿದವರಿಗೆ 6 ಹುದ್ದೆಗಳು ಸೇರಿ ಒಟ್ಟು 36 ಹುದ್ದೆಗಳನ್ನ ಈ ನೇಮಕಾತಿ ಡ್ರೈವ್ ನಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತದೆ.
IOCL Recruitment 2021: 300 ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಿದ ಇಂಡಿಯನ್ ಆಯಿಲ್
ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಪ್ರಾಜೆಕ್ಟ್ ಇಂಜಿನಿಯರ್-I ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಿಇಎಲ್ ಅಧಿಕೃತ ವೆಬ್‌ಸೈಟ್ https://www.bel-india.in ಗೆ ಭೇಟಿ ನೀಡಬೇಕು. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಬೇಕು. ಅರ್ಜಿಯ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕು. ಇನ್ನು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಡಿಸೆಂಬರ್ 24 ರೊಳಗೆ ಅರ್ಜಿಯನ್ನು ಕೊರಿಯರ್ ಅಥವಾ ಪೋಸ್ಟ್ ಮೂಲಕ ಕಳುಹಿಸಬಹುದು. ಮ್ಯಾನೇಜರ್ (HR/ES & SW), ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಜಾಲಹಳ್ಳಿ ಪೋಸ್ಟ್, ಬೆಂಗಳೂರು - 560013- ಈ ವಿಳಾಸಕ್ಕೆ ಅರ್ಜಿಯನ್ನು ಕಳುಹಿಸಬೇಕು.