BEL Recruitment 2022: ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 9 ಕೊನೆಯ ದಿನ

ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್  ಖಾಲಿ ಇರುವ  6 ಸೀನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಫೆಬ್ರವರಿ 9ರೊಳಗೆ ಅರ್ಜಿ ಸಲ್ಲಿಸಬಹುದು.

Bharat Electronics Limited recruitment 2022   notification for six new senior engineer vacancies in bengaluru Unit gow

ಬೆಂಗಳೂರು(ಜ.31): ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (Bharath Electronics Limited-BEL) ಮತ್ತೊಮ್ಮೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಇರುವ  6 ಸೀನಿಯರ್ ಎಂಜಿನಿಯರ್ (senior engineer) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಫೆಬ್ರವರಿ 9ರೊಳಗೆ ಅರ್ಜಿ ಸಲ್ಲಿಸಬಹುದು.  ಆಸಕ್ತ ಅಭ್ಯರ್ಥಿಗಳು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕೃತ ವೆಬ್‌ಸೈಟ್ bel-india.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಬಿಇಎಲ್ (BEL) ನಲ್ಲಿ ಖಾಲಿ ಇರುವ  ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ   ಬಿ.ಇ/ಬಿ.ಟೆಕ್ ,ಎಂಇ, ಎಂಟೆಕ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​  ನೇಮಕಾತಿಯ ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜನವರಿ 1, 2022 ರ ಅನ್ವಯ ಗರಿಷ್ಟ 32 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು  PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

CISF Constable Recruitment 2022: 1149 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕರ್ನಾಟಕದಲ್ಲಿ 34

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಬಿಇಎಲ್ ನಲ್ಲಿ ಖಾಲಿ ಇರುವ ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/- ರಿಂದ 1,60,000/-ರೂಗಳ ವರೆಗೆ ವೇತನ ಸಿಗಲಿದೆ. ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಉದ್ಯೋಗ ನೀಡಲಾಗುತ್ತದೆ.

ಅರ್ಜಿ ಶುಲ್ಕ:  ಬಿಇಎಲ್ ನಲ್ಲಿ ಖಾಲಿ ಇರುವ ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 750/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಕೆ:  ಬಿಇಎಲ್ ನಲ್ಲಿ ಖಾಲಿ ಇರುವ ಸೀನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಫೆಬ್ರವರಿ 9,2022ರೊಳಗೆ ಅರ್ಜಿಯನ್ನು ಕೊರಿಯರ್ ಅಥವಾ ಅಂಚೆ ಮೂಲಕ ಕಳುಹಿಸಬೇಕು.

ಕಚೇರಿ ವಿಳಾಸ:
DGM (HR/MR,MS&ADSN)
Bharat Electronics Limited
Jalahalli Post, Bangalore-560013, Karnataka.

NHPC RECRUITMENT 2022: ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ರಾಷ್ಟ್ರೀಯ ಜಲ ವಿದ್ಯುತ್ ಶಕ್ತಿ ನಿಗಮ (National Hydroelectric Power Corporation - NHPC)ಖಾಲಿ ಇರುವ  ವಿವಿಧ ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 113 ಹುದ್ದೆಗಳು ಖಾಲಿ ಇದ್ದು, ಎಂಜಿನಿಯರಿಂಗ್ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.   ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 21ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ nhpcindia.com ಗೆ ಭೇಟಿ ನೀಡಲು ಕೋರಲಾಗಿದೆ.

ಒಟ್ಟು 113 ಹುದ್ದೆಗಳ ವಿವರ:
ಜೂನಿಯರ್ ಎಂಜಿನಿಯರ್(ಸಿವಿಲ್)-68
ಜೂನಿಯರ್ ಎಂಜಿನಿಯರ್(ಎಲೆಕ್ಟ್ರಿಕಲ್)-34
ಜೂನಿಯರ್ ಎಂಜಿನಿಯರ್(ಮೆಕ್ಯಾನಿಕಲ್)-31

ಶೈಕ್ಷಣಿಕ ವಿದ್ಯಾರ್ಹತೆ: ರಾಷ್ಟ್ರೀಯ ಜಲ ವಿದ್ಯುತ್ ಶಕ್ತಿ ನಿಗಮ  ಖಾಲಿ ಇರುವ ವಿವಿಧ ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಶೇ.60ರಷ್ಟು ಅಂಕಗಳೊಂದಿಗೆ ಕಡ್ಡಾಯವಾಗಿ ಬಿಇ/ಬಿ.ಟೆಕ್ ಪೂರ್ಣಗೊಳಿಸಿರಬೇಕು.

Latest Videos
Follow Us:
Download App:
  • android
  • ios