ದೇಶದ ಪ್ರಮುಖ ಸಶಸ್ತ್ರ ಪಡೆಯಾಗಿರುವ ಗಡಿ ಭದ್ರತಾ ಪಡೆ (BSF) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ಬಗ್ಗೆ ಅಧಿಸೂಚನೆ ಹೊಡಿಸಿರುವ ಬಿಎಸ್‌ಎಫ್ ಯಾವ ಯಾವ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿ.29 ಕೊನೆಯ ದಿನವಾಗಿದೆ.

ಗಡಿ ಭದ್ರತಾ ಪಡೆ (Border Security Force - BSF) ಖಾಲಿ ಇರುವ ವಿವಿಧ ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತಿ ಹೊಂದಿರುವವರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಭಾರತೀಯ ನಾಗರಿಕರ ನೇಮಕಾತಿಗಾಗಿ ಬಿಎಸ್ಎಫ್ ಈಗಾಗಲೇ ಅಧಿಸೂಚನೆಯನ್ನು ಹೊರಡಿಸಿದೆ. BSF ಗ್ರೂಪ್-'ಸಿ' ಕಾಂಬಟೈಸ್ಡ್ (ನಾನ್ ಗೆಜೆಟೆಡ್-ನಾನ್ ಮಿನಿಸ್ಟ್ರಿಯಲ್)ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಗಡಿ ಭದ್ರತಾ ಪಡೆ ಎಂಜಿನಿಯರಿಂಗ್ ಸೆಟಪ್‌ನಲ್ಲಿನ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ. ಆಸಕ್ತ ಅಭ್ಯರ್ಥಿಗಳು BSF ನ ಅಧಿಕೃತ ವೆಬ್‌ಸೈಟ್- rectt.bsf.gov.in ನಲ್ಲಿ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಪ್ರಕ್ರಿಯೆ ಅರ್ಜಿ ಸಲ್ಲಿಸಲು ಡಿಸೆಂಬರ್ 29ರವರೆಗೆ ಕಾಲಾವಕಾಶವಿದೆ. ಒಟ್ಟು 72 ಹುದ್ದೆಗಳನ್ನು ನೇಮಕಾತಿ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತದೆ. ಹೆಚ್ಚಿನ ನವೀಕರಣಗಳಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಪರಿಶೀಲಿಸಬಹುದು. ಎಎಸ್ಐ (ASI) - 01 ಹುದ್ದೆ, HC (Carpenter, Sewerman) - 06 ಹುದ್ದೆಗಳು, ಕಾನ್ಸ್ಟೇಬಲ್ (Generator Operator, Generator Mechanic, Linemen) - 65 ಹುದ್ದೆಗಳು ಸೇರಿ ಒಟ್ಟು 72 ಹುದ್ದೆಗಳನ್ನ ಈ ನೇಮಕಾತಿ ಡ್ರೈವ್ನಲ್ಲಿ ಭರ್ತಿ ಮಾಡಿಕೊಳ್ಳಲಾಗುವುದು. 

ಬಿಎಸ್ಎಫ್ನ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 29, 2021ಕ್ಕೆ ಅನ್ವಯವಾಗುವಂತೆ 18 ರಿಂದ 25 ವರ್ಷ ವಯಸ್ಸಿನವರಾಗಿರಬೇಕು. ಇನ್ನುಎಸ್ಎಸ್ಐ (ASI) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕೈಗಾರಿಕಾ ತರಬೇತಿ ಸಂಸ್ಥೆಯಿಂದ (ITI) ಡ್ರಾಫ್ಟ್ಸ್‌ಮನ್‌ಶಿಪ್ (ಸಿವಿಲ್) ನಲ್ಲಿ ಡಿಪ್ಲೊಮಾ ಪದವಿ ಜೊತೆಗೆ ಮೆಟ್ರಿಕ್ಯುಲೇಷನ್ ಪಡೆದಿರಬೇಕು. ಎಚ್‌ಸಿ ಮತ್ತು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ ಜೊತೆಗೆ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 29ರ ಕೊನೆಯ ದಿನವಾಗಿದೆ. ಹಾಗಾಗಿ, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ.

Central Government Jobs: ಇಂಡಿಯನ್ ಕೋಸ್ಟ್‌ ಗಾರ್ಡ್‌ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ ಶುರು 

BSF ನ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ನೇಮಕಾತಿ ಪೋರ್ಟಲ್, rectt.bsf.gov.in ಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಜೊತೆಗೆ ಅಗತ್ಯವಿರುವ ಎಲ್ಲಾ ದಾಖಲೆಗಳು ಮತ್ತು ಐಡಿ ಪುರಾವೆಗಳನ್ನು ಲಗತ್ತಿಸಬೇಕು. ಅಂದಹಾಗೇ ಬಿಎಸ್ಎಫ್ ನೇಮಕಾತಿಗೆ ಅಭ್ಯರ್ಥಿಗಳು ಆನ್‌ಲೈನ್ ಮೋಡ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. BSF ಅಧಿಕೃತ ವೆಬ್‌ಸೈಟ್ https://rectt.bsf.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಬೇರೆ ಯಾವುದೇ ವಿಧಾನದಲ್ಲಿ ಸಲ್ಲಿಸುವ ಅರ್ಜಿಯನ್ನು ಸ್ವೀಕರಿಸಲಾಗುವುದಿಲ್ಲ. 

ಆಯ್ಕೆ ಪ್ರಕ್ರಿಯೆಯು ಎರಡು ಹಂತಗಳನ್ನು ಒಳಗೊಂಡಿರುತ್ತದೆ. ಮೊದಲ ಹಂತವು ಲಿಖಿತ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಎರಡನೇ ಹಂತವು ದಾಖಲಾತಿ, ದೈಹಿಕ ಗುಣಮಟ್ಟದ ಪರೀಕ್ಷೆ (PST) ಮತ್ತು ವಿವರವಾದ ವೈದ್ಯಕೀಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಯ ಕಾರ್ಯಕ್ಷಮತೆಯ ಆಧಾರದ ಮೇಲೆ ಹಾಗೂ ಮೆರಿಟ್ ಆಧಾರದ ಮೇಲೆ ಪ್ರತ್ಯೇಕ ಪಟ್ಟಿಗಳನ್ನು ಸಿದ್ಧಪಡಿಸಲಾಗುತ್ತದೆ.

IIT BHU placement: ವಿದ್ಯಾರ್ಥಿಗೆ ವಾರ್ಷಿಕ 2 ಕೋಟಿ ರೂ. ವೇತನ ಪ್ಯಾಕೇಜ್! 

ಭಾರತದ ಪ್ರಮುಖ ಸಶಸ್ತ್ರ ಪಡೆಯಾಗಿರುವ ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಕೆಲಸ ಮಾಡುವುದು ಹಲವರು ಗುರಿಯಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈಗ ಅಂಥದ್ದೊಂದು ಅವಕಾಶ ಎದುರಾಗಿದೆ. ಬಿಎಸ್‌ಎಫ್‌ನಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಶುರುವಾಗಿದೆ. ಹಾಗಾಗಿ, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 29ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.