ಬೆಂಗಳೂರು, [ಏ.22]: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (ಬಿಎಸ್‌ಎಫ್‌) 1072 ಹೆಡ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆನ್ ಲೈನ್ ನಲ್ಲಿ 14.05.2019ರಿಂದ ಅರ್ಜಿ ಆರಂಭವಾಗಲಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು 16.06.2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ : ಈ ಹುದ್ದೆಗಳಿಗೆ ಮೆಟ್ರಿಕ್ಯುಲೇಷನ್ / ಪಿಯುಸಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌ನಿಂದ ಹೊಂದಿರುವ ಮತ್ತು ಹುದ್ದೆಗೆ ಸಂಬಂಧಪಟ್ಟಂತೆ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ನಿಯಮ ಉಲ್ಲಂಘನೆ,ಮಾರಾಟ ಕುಸಿತ - ವಾಹನ ಕ್ಷೇತ್ರದಲ್ಲಿ 37,000 ಉದ್ಯೋಗ ಕಡಿತ!

ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,500ರಿಂದ 81,100 ರು. ವೇತನವನ್ನು ನಿಗದಿಪಡಿಸಲಾಗಿದೆ.. 

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ಮೆಡಿಕಲ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. 
ಅರ್ಜಿ ಶುಲ್ಕ: 100 ರು. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಹುದ್ದೆಗಳ ಬಗೆಗಿನ ಅಧಿಕೃತ ಅಧಿಸೂಚನೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ. ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.