Asianet Suvarna News Asianet Suvarna News

ಕಾನ್ಸ್‌ಟೇಬಲ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಪಾಸಾದವರಿಗೆ ಅವಕಾಶ

ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ. 

BSF Recruitment 2020 Apply Online for 228 Constable, SI, JE posts rbj
Author
Bengaluru, First Published Oct 10, 2020, 6:44 PM IST

ನವದೆಹಲಿ, (ಅ.10): ಬಾರ್ಡರ್ ಸೆಕ್ಯುರಿಟಿ ಫೋರ್ಸ್ ಸುಮಾರು 228 ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಿದೆ.

75 ಕಾನ್ಸ್‌ಟೇಬಲ್ , 64 ಸಬ್ ಇನ್ಸ್ ಪೆಕ್ಟರ್, 52  ಜ್ಯುನಿಯರ್ ಇಂಜಿನಿಯರ್ / ಎಸ್‌ಐ, 22 ಅಸಿಸ್ಟೆಂಟ್ ಏರ್‌ ಕ್ರಾಫ್ಟ್ ಮೆಕ್ಯಾನಿಕ್, 15 ಟೆಕ್ನೀಶಿಯನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ದಿನಾಂಕ ಅಕ್ಟೋಬರ್ 28,2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ: ಬಾರ್ಡರ್ ಸೆಕ್ಯುರಿಟಿ ಫೋರ್ಸ್ ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹತ್ತನೇ ತರಗತಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಅಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ವಯೋಮಿತಿ: ಕನಿಷ್ಟ 18 ವರ್ಷ ವಯಸ್ಸಾಗಿರಬೇಕು. ಇನ್ನು ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಎಕ್ಸ್- ಸರ್ವೀಸ್ ಮೆನ್ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ವಿನಾಯಿತಿ ಇದೆ.

ಅರ್ಜಿ ಶುಲ್ಕ: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕವಿದ್ದು, ಎಸ್‌ಸಿ/ಎಸ್‌ಟಿ/ಎಕ್ಸ್ ಸರ್ವೀಸ್ ಮೆನ್/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ ಎಂದು ತಿಳಿಸಿದೆ.

ಅರ್ಜಿ ಸಲ್ಲಿಕೆ ಹೇಗೆ?: ಆಸಕ್ತರು ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ https://bsf.gov.in/Home ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ನಂತರ ಭರ್ತಿ ಮಾಡಿ ಅರ್ಜಿ ಸಲ್ಲಿಬೇಕು. 
 

Follow Us:
Download App:
  • android
  • ios