BSNL Recruitment: ಡಿಪ್ಲೋಮಾ ಪೂರೈಸಿದವರಿಗೆ ಅಪ್ರೆಂಟಿಸ್ ಜಾಬ್
ಸಾರ್ವಜನಿಕ ವಲಯದ ಪ್ರಮುಖ ಕಂಪನಿಯಾಗಿರುವ ಭಾರತ್ ಸಂಚಾರ್ ನಿಗಮ್ ಲಿ.(BSNL) ತನ್ನಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಡಿಪ್ಲೋಮಾ ಮುಗಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಅರ್ಜಿ ಪ್ರಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಂಪನಿಯ ಅಧಿಕೃತ್ ಜಾಲತಾಣಕ್ಕೆ ಭೇಟಿ ನೀಡಬಹುದು.
ಡಿಪ್ಲೋಮಾ (Diploma) ಕೋರ್ಸ್ ಮುಗಿಸಿ ಉದ್ಯೋಗಕ್ಕಾಗಿ ಕಾಯುತ್ತಿರೋರಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (Bharat Sanchar Nigam Limited-BSNL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಭಾರತ್ ಸಂಚಾರ್ ನಿಗಮ್ ಲಿಮಿಟೆಡ್(Bharat Sanchar Nigam Limited-BSNL) ನಲ್ಲಿ ಒಟ್ಟು 27 ಡಿಪ್ಲೋಮಾ ಅಪ್ರೆಂಟಿಸ್(Diploma Apprentice) ಹುದ್ದೆಗಳು ಖಾಲಿ ಇವೆ. ಈ ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡಿಕೊಳ್ಳಲು ಈಗಾಗಲೇ ಬಿಎಸ್ಎನ್ಎಲ್ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 6 ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್ 20 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಿಎಸ್ಎನ್ಎಲ್(BSNL)ನ ಅಧಿಕೃತ ವೆಬ್ಸೈಟ್ bsnl.co.in ಗೆ ಭೇಟಿ ನೀಡಿ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಪರಿಶೀಲಿಸಬಹುದು.
ಈ ನೇಮಕಾತಿ ಡ್ರೈವ್ ಮೂಲಕ ಮಧ್ಯಪ್ರದೇಶ ರಾಜ್ಯದ ಬಿಎಸ್ಎನ್ಎಲ್ ಶಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು. ಭೋಪಾಲ್ - 5 ಹುದ್ದೆ, ಇಂದೋರ್- 4 ಹುದ್ದೆ, ಗ್ವಾಲಿಯರ್- 3 ಹುದ್ದೆ, ಜಬಲ್ಪುರ್- 3 ಹುದ್ದೆ, ಹೊಸನಗ್ಬಾದ್- 3 ಹುದ್ದೆ, ಸಾಗರ್- 3 ಹುದ್ದೆ, ಸಾತ್ನಾ-3 ಹುದ್ದೆ, ಉಜ್ಜಯಿನಿ-3 ಹುದ್ದೆ ಸೇರಿ ಒಟ್ಟು 28 ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಯ್ಕೆಯಾದವರು ಮಧ್ಯಪ್ರದೇಶ ಟೆಲಿಕಾಂ ಕ್ಷೇತ್ರದ ವಿವಿಧ ವ್ಯಾಪಾರ ಕ್ಷೇತ್ರಗಳಲ್ಲಿ ಒಂದು ವರ್ಷದ ಅಪ್ರೆಂಟಿಸ್‌ಶಿಪ್ ತರಬೇತಿ ಪಡೆಯಲಿದ್ದಾರೆ.
ಬಿಎಸ್ಎನ್ಎಲ್ (BSNL) ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಡಿಪ್ಲೋಮಾ ಕೋರ್ಸ್ ಪಾಸಾಗಿರಬೇಕು. ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 8,000 ವೇತನ ನೀಡಲಾಗುತ್ತದೆ.
Sports Quota Recruitment: ಭಾರತೀಯ ಸೇನೆಗೆ ನ.29ರಿಂದ ನೇಮಕಾತಿ rally
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 25 ವರ್ಷ ಮೀರಿರಬಾರದು. ಬಿಎಸ್ಎನ್ಎಲ್ ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ಪೋಸ್ಟ್ ನೀಡಲಾಗುತ್ತದೆ.
ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆ (Diploma Apprentice posts) ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಎರಡು ಹಂತದಲ್ಲಿ ಆಯ್ಕೆ ಮಾಡಲಾಗುತ್ತದೆ. ಮೊದಲು ದಾಖಲಾತಿ ಪರಿಶೀಲನೆ ನಡೆಸಲಾಗುತ್ತದೆ. ನಂತರ ವೈಯಕ್ತಿಕ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಇನ್ನು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನಾಗಿ 300 ರೂಪಾಯಿ ಪಾವತಿಸಬೇಕು. ಈ ಶುಲ್ಕದ ಹಣವನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ ಎಂದು ಬಿಎಸ್ಎನ್ಎಲ್ ತಿಳಿಸಿದೆ.
30/11/2021ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯ ಗರಿಷ್ಠ ವಯಸ್ಸು 25 ವರ್ಷ ಅಥವಾ ಅದಕ್ಕಿಂತ ಕಡಿಮೆ ಇರಬೇಕು. SC/ ST/ PWD ಗೆ 5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷಗಳ ಗರಿಷ್ಠ ವಯೋಮಿತಿ ಸಡಿಲಿಕೆಯು ಸರ್ಕಾರದ ನಿಬಂಧನೆಗಳಿಗೆ ಒಳಪಟ್ಟಿರುತ್ತದೆ.
BHEL Recruitment: ವೃತ್ತಿಪರರರಿಗೆ ತಿಂಗಳಿಗೆ 80 ಸಾವಿರ ವೇತನ
ಬಿಎಸ್ಎನ್ಎಲ್ (BSNL) ಸರ್ಕಾರಿ ಸ್ವಾಮ್ಯದ ಪ್ರಮುಖ ಕಂಪನಿಯಾಗಿದ್ದು, ಟೆಲಿಕಾಂ ಸೇವೆಯನ್ನು ಒದಗಿಸುತ್ತದೆ. ಟೆಲಿಕಮ್ಯುನಿಕೇಷನ್ (Telecommunications) ಹಾಗೂ ಸಂವಹನ (Communications) ಸಚಿವಾಲಯದ ಅಡಿ ಈ ಸಂಸ್ಥೆಯು ಕಾರ್ಯನಿರ್ವಹಿಸುತ್ತದೆ. ಮೊಬೈಲ್ ಸೇವೆಯನ್ನು ಪೂರೈಸುವ ಬಿಎಸ್ಸೆನ್ನೆಲ್ ಅನೇಕ ಹೊಸ ತಂತ್ರಜ್ಞಾನಗಳ ಮೂಲಕ ಗ್ರಾಹಕರಿಗೆ ಸೇವೆಯನ್ನು ಒದಗಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಖಾಸಗಿ ಮೊಬೈಲ್ ಸೇವಾ ಪೂರೈಕೆದಾರ ಕಂಪನಿಗಳಿಂದಲೂ ಸಾಕಷ್ಟು ಸ್ಪರ್ಧೆಯನ್ನೂ ಎದುರಿಸುತ್ತಿದೆ.