CISF Constable Recruitment 2022: 1149 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕರ್ನಾಟಕದಲ್ಲಿ 34 ಹುದ್ದೆಗಳಿಗೆ ಕರೆ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಕಾನ್ಸ್‌ಟೇಬಲ್‌  ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 1149 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕರ್ನಾಟಕ ಅಭ್ಯರ್ಥಿಗಳಿಗೆ 34 ಹುದ್ದೆಗಳಿವೆ. ಅರ್ಜಿ ಸಲ್ಲಿಸಲು ಮಾರ್ಚ್ 4  ಕೊನೆಯ ದಿನಾಂಕವಾಗಿದೆ.

Central Industrial Security Force  has invited applications from candidates to apply for Constable  posts gow

ಬೆಂಗಳೂರು(ಜ.30): ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ  (Central Industrial Security Force-CISF) ಖಾಲಿ ಇರುವ ಕಾನ್ಸ್‌ಟೇಬಲ್‌ / ಅಗ್ನಿಶಾಮಕ  ಹುದ್ದೆಗಳನ್ನು  ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 1149 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಕರ್ನಾಟಕ ಅಭ್ಯರ್ಥಿಗಳಿಗೆ 34 ಹುದ್ದೆಗಳಿವೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ  ಅರ್ಜಿ ಸಲ್ಲಿಸಲು ಮಾರ್ಚ್ 4  ಕೊನೆಯ ದಿನಾಂಕವಾಗಿದೆ.  ಹೆಚ್ಚಿನ ಮಾಹಿತಿಗೆ https://www.cisf.gov.in/cisfeng/ ಗೆ ಅಥವಾ https://cisfrectt.in./ಭೇಟಿ ನೀಡಿ.

ವಿದ್ಯಾರ್ಹತೆ: ಹೆಡ್ ಕಾನ್ಸ್ಟೇಬಲ್  ಹುದ್ದೆಗಳಿಗೆ  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು. 

ವಯೋಮಿತಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 23 ವರ್ಷದೊಳಗಿನವರಾಗಿರಬೇಕು. ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ OBC  ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 

ಆಯ್ಕೆ ಪ್ರಕ್ರಿಯೆ: ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ,  ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಲು ತಯಾರಿರಬೇಕು.

ವೇತನ ಮತ್ತು ಅರ್ಜಿ ಶುಲ್ಕ: ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 21,700 ರೂ ನಿಂದ 69,100ರವರೆಗೆ ಮಾಸಿಕ ವೇತನ ದೊರೆಯಲಿದೆ. SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕವನ್ನು ವಿಧಿಸಲಾಗಿಲ್ಲ. ಮಿಕ್ಕ ಕೆಟಗರಿಯವರು 100 ರೂ ಅರ್ಜಿ ಶುಲ್ಕ ಪಾವತಿಸಬೇಕು.

HQ MADRAS ENGINEER GROUP RECRUITMENT 2022: 10TH,12TH, ITI ಪಾಸಾದವರು ಇಂದೇ ಅರ್ಜಿ ಸಲ್ಲಿಸಿ

ಕ್ರೀಡಾ ಕೋಟದಲ್ಲಿ ಹೆಡ್‌ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ  (Central Industrial Security Force-CISF) ಖಾಲಿ ಇರುವ ಹೆಡ್‌ ಕಾನ್ಸ್ಟೇಬಲ್  ಹುದ್ದೆಗಳನ್ನು  ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ  ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ.  ಹೆಚ್ಚಿನ ಮಾಹಿತಿಗೆ https://www.cisf.gov.in/cisfeng/ ಗೆ ಅಥವಾ https://cisfrectt.in./ಭೇಟಿ ನೀಡಿ.

ಕ್ರೀಡಾ ಕೋಟದ ಆಧಾರದಲ್ಲಿ ಒಟ್ಟು 249 ಹೆಡ್‌ ಕಾನ್ಸ್ಟೇಬಲ್ (Head Constable)  ಹುದ್ದೆ ಖಾಲಿ ಇದ್ದು, ಈ 249 ಹೆಡ್‌ ಕಾನ್ಸ್ಟೇಬಲ್ ಹುದ್ದೆಗಳಲ್ಲಿ  68 ಮಹಿಳಾ ಅಭ್ಯರ್ಥಿಗಳಿಗೆ ಮತ್ತು 181 ಪುರುಷ ಅಭ್ಯರ್ಥಿಗಳಿಗೆ ಹುದ್ದೆಗಳನ್ನು  ಮೀಸಲಿಡಲಾಗಿದೆ.

ವಿದ್ಯಾರ್ಹತೆ: ಹೆಡ್ ಕಾನ್ಸ್ಟೇಬಲ್  ಹುದ್ದೆಗಳಿಗೆ  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು. ಅಭ್ಯರ್ಥಿಯು ರಾಜ್ಯ ಅಥವಾ ರಾಷ್ಟ್ರ ಮಟ್ಟದಲ್ಲಿ ಕ್ರೀಡೆಗಳನ್ನು ಆಡಿರುವ ಸರ್ಟಿಫಿಕೇಟ್ ಇರಬೇಕು.

ಆಯ್ಕೆ ಪ್ರಕ್ರಿಯೆ: ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಮೆಡಿಕಲ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶ ಅಥವಾ ವಿದೇಶದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಲು ತಯಾರಿರಬೇಕು.

BARC Recruitment 2022: ಬಿಇ, ಬಿ.ಟೆಕ್, ಬಿಎಸ್ಸಿ ಪದವೀಧರರಿಗೆ ಉದ್ಯೋಗವಕಾಶ

Latest Videos
Follow Us:
Download App:
  • android
  • ios