CISF Recruitment 2022: 647 ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ
- ಖಾಲಿ ಇರುವ 647 ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು CISF ಅಧಿಸೂಚನೆ
- ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 5 ಕೊನೆಯ ದಿನಾಂಕ
- ಸಂಸ್ಥೆಯ ಅಧಿಕೃತ ವಿಳಾಸಕ್ಕೆ ಕಳುಹಿಸಲು ಸೂಚನೆ
ಬೆಂಗಳೂರು(ಡಿ.30): ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ (Central Industrial Security Force-CISF) ಖಾಲಿ ಇರುವ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 647 ಸಹಾಯಕ ಸಬ್ ಇನ್ಸ್‌ಪೆಕ್ಟರ್ (Assistant Sub Inspector) ಹುದ್ದೆ ಖಾಲಿ ಇದ್ದು, ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆಫ್‌ಲೈನ್ (offline) ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 5 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ https://www.cisf.gov.in/ ಗೆ ಭೇಟಿ ನೀಡಿ.
ವಿದ್ಯಾರ್ಹತೆ ಮತ್ತು ಅನುಭವ: ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳೂ ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು. ಮತ್ತು ವೃತ್ತಿಯಲ್ಲಿ 5 ವರ್ಷಗಳ ಅನುಭವವನ್ನು ಹೊಂದಿರಬೇಕು.
ವಯೋಮಿತಿ: ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೇಮಕಾತಿಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 2021-2022ನೇ ಸಾಲಿಗೆ ಆಗಸ್ಟ್ 1,2021ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ https://www.cisf.gov.in/cisfeng/wp-content/uploads/2021/12/3815.pdf
KSP RECRUITMENT 2022: ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆ: ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಮೆಡಿಕಲ್ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ಮತ್ತು ಅರ್ಜಿ ಶುಲ್ಕ: ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು. ಮತ್ತು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿಶುಲ್ಕವನ್ನು ವಿಧಿಸಲಾಗಿಲ್ಲ.
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನೇಮಕಾತಿಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಸೂಚನೆಯೊಂದಿಗೆ ನೀಡಲಾಗಿರುವ ಅರ್ಜಿ ನಮೂನೆಯಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಫೆಬ್ರವರಿ 5,2022ರೊಳಗೆ ಕಚೇರಿಗೆ ಅರ್ಜಿಯನ್ನು ಕೊರಿಯರ್ ಅಥವಾ ಪೋಸ್ಟ್ ಮೂಲಕ ಕಳುಹಿಸಿಕೊಡಬಹುದು ಸಂಸ್ಥೆಯ ಅಧಿಕೃತ ವಿಳಾಸಕ್ಕೆ ಕಳುಹಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ESIC Recruitment 2022: ಬರೋಬ್ಬರಿ 3865 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ರಾಜ್ಯ ಸಶಸ್ತ್ರ ಮೀಸಲು ಪಡೆಯಲ್ಲಿ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಕರ್ನಾಟಕ ರಾಜ್ಯ ಪೊಲೀಸ್ (Karnataka State Police ) ಇಲಾಖೆಯು ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 71 ಸಬ್ ಇನ್‌ಸ್ಪೆಕ್ಟರ್ ಹುದ್ದೆಗಳು ಖಾಲಿಯಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಪದವಿ ಅಥವಾ ತತ್ಸಮಾನ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಜನವರಿ 27ರ ಒಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್‌ತಾಣ http://rec21.ksp-online.in/ ಗೆ ಅಥವಾ https://ksp.karnataka.gov.in/ ಗೆ ಭೇಟಿ ನೀಡಿ.