ನವದೆಹಲಿ, (ನ. 20): ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF)ಯಲ್ಲಿ ಭಾರತದಾದ್ಯಂತ ಖಾಲಿ ಇರುವ 300 ಹೆಡ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತರು ದಿನಾಂಕ  17 ಡಿಸೆಂಬರ್, 2019ರೊಳಗೆ ಅರ್ಜಿ ಸಲ್ಲಿಸಬಹುದು ಕೋರಲಾಗಿದೆ.

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಇಂಟರ್ ಮೀಡಿಯೆಟ್ ಅಥವಾ SSLC ಹಾಗೂ 10+2 ತೇರ್ಗಡೆಯಾಗಿರಬೇಕು. ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಯಲ್ಲಿ ಪ್ರತಿನಿಧಿಸಿದ್ದರೆ ಆದ್ಯತೆ ನೀಡಲಾಗಿದೆ.

ವಯೋಮಿತಿ: ಸಾಮಾನ್ಯಅಭ್ಯರ್ಥಿಗಳಿಗೆ 18 ರಿಂದ 23 ವರ್ಷ ನಿಗದಿಪಡಿಸಲಾಗಿದೆ. ಇನ್ನು SC/ST ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಹಾಗೂ OBC ಅಭ್ಯರ್ಥಿಗಳಿಗೆ 3 ವರ್ಷ ವಿನಾಯತಿ ಇರುತ್ತದೆ. 

ಅರ್ಜಿ ಶುಲ್ಕ: ಸಾಮಾನ್ಯ/OBC ಅಭ್ಯರ್ಥಿಗಳಿಗೆ 100ರು. SC/ST ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಮೆಡಿಕಲ್, ವೃತ್ತಿ ಪರೀಕ್ಷೆ ಸೇರಿದಂತೆ ಇನ್ನಿತರ ಪರೀಕ್ಷೆ ಮೂಲಕ ಕಾನ್ಸ್ ಟೇಬಲ್ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. 

ಈ ಬಗ್ಗೆ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ