CGA Recruitment 2022: 590 ಸಹಾಯಕ ಖಾತೆ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಕಂಟ್ರೋಲರ್ ಆಫ್ ಜನರಲ್ ಅಕೌಂಟ್ಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆ ಬಿಡುಗಡೆಯಾದ 45 ದಿನಗಳೊಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ನವದೆಹಲಿ: ಕಂಟ್ರೋಲರ್ ಆಫ್ ಜನರಲ್ ಅಕೌಂಟ್ಸ್ (Controller General of Accounts) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 590 ಸಹಾಯಕ ಖಾತೆ ಅಧಿಕಾರಿ (Assistant Accounts Officer) ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆ ಬಿಡುಗಡೆಯಾದ 45 ದಿನಗಳೊಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ನೇಮಕಾತಿ ಅಧಿಸೂಚನೆಯನ್ನು ಜನವರಿ 22 ರಿಂದ ಜನವರಿ 28ರವರೆಗೆ ಬಿಡುಗಡೆ ಮಾಡಿದೆ. 45 ದಿನಗಳ ಲೆಕ್ಕಾಚಾರ ಪ್ರಕಾರ ಮಾರ್ಚ್ 17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣ https://cga.nic.in/ ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಕಂಟ್ರೋಲರ್ ಆಫ್ ಜನರಲ್ ಅಕೌಂಟ್ಸ್ ನಲ್ಲಿ ಖಾಲಿ ಇರುವ ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಸಿವಿಲ್/SAS ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಕಂಟ್ರೋಲರ್ ಆಫ್ ಜನರಲ್ ಅಕೌಂಟ್ಸ್ ನಲ್ಲಿ ಖಾಲಿ ಇರುವ ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಆಯಸ್ಸು 56 ವರ್ಷ ಮೀರಿರಬಾರದು. ಎಸ್ಸಿ/ಎಸ್ಟಿ, ಒಬಿಸಿ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.
KARNATAKA KHADI RECRUITMENT EXAM: ಮಾ.12ಕ್ಕೆ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಸ್ಪರ್ಧಾತ್ಮಕ ಪರೀಕ್ಷೆ
ವೇತನ: ಕಂಟ್ರೋಲರ್ ಆಫ್ ಜನರಲ್ ಅಕೌಂಟ್ಸ್ ನಲ್ಲಿ ಖಾಲಿ ಇರುವ ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 7ನೇ ವೇತನ ಆಯೋಗದ 8/9ನೇ ಲೆವೆಲ್ ವೇತನ ದೊರೆಯಲಿದೆ.
ಆಯ್ಕೆ ಪ್ರಕ್ರಿಯೆ: ಕಂಟ್ರೋಲರ್ ಆಫ್ ಜನರಲ್ ಅಕೌಂಟ್ಸ್ ನಲ್ಲಿ ಖಾಲಿ ಇರುವ ಸಹಾಯಕ ಖಾತೆ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ: ಅಭ್ಯರ್ಥಿಗಳು ಅಂಚೆ ಅಥವಾ, ಈ-ಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು.
ಸೀನಿಯರ್ ಅಕೌಂಟ್ಸ್ ಆಫೀಸರ್ (HR-3)
O/o ಕಂಟ್ರೋಲರ್ ಜನರಲ್ ಆಫ್ ಅಕೌಂಟ್ಸ್
ಎಕ್ಸ್ಪೆಂಡಿಚರ್ ಡಿಪಾರ್ಟ್ಮೆಂಟ್
ಹಣಕಾಸು ಸಚಿವಾಲಯ
ಕೊಠಡಿ ಸಂಖ್ಯೆ. 210, 2 ನೇ ಮಹಡಿ
ಮಹಾಲೇಖಾ ನಿಯಂತ್ರಕ್ ಭವನ, ಬ್ಲಾಕ್ E
GPO ಕಾಂಪ್ಲೆಕ್ಸ್, INA
ದೆಹಲಿ - 110023.
BDA Recruitment 2022: ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಡಿಎ
ಮಾ.12ಕ್ಕೆ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಸ್ಪರ್ಧಾತ್ಮಕ ಪರೀಕ್ಷೆ: ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ (karnataka state khadi and village industries board) ಖಾಲಿ ಇರುವ ವಿವಿಧ ಒಟ್ಟು 29 ಹುದ್ದೆಗಳಿಗೆ ಪಿಯು, ಪದವಿ ಪಾಸಾದ ಅಭ್ಯರ್ಥಿಗಳಿಂದ 2021 ರ ಅಂತ್ಯದಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಈ ಹುದ್ದೆಗಳ ಆಯ್ಕೆಗಾಗಿ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕ ನಿಗದಿಪಡಿಸಿರುವುದನ್ನು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ (khadi and village industries board) ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://khadi.karnataka.gov.in/ ಗೆ ಭೇಟಿ ನೀಡಲು ಕೋರಲಾಗಿದೆ.
ಖಾಲಿ ಇರುವ ಹುದ್ದೆಗಳನ್ನು ಉಳಿಕ ಮೂಲ ವೃಂದದ ಹುದ್ದೆ ಗ್ರೂಪ್ -ಸಿ 14, ಹೈದರಾಬಾದ್ ಕರ್ನಾಟಕ ಸ್ಥಳೀಯ ವೃಂದದ ಗ್ರೂಪ್-ಬಿ ಹುದ್ದೆ 2 ಹಾಗೂ ಗ್ರೂಪ್-ಸಿ 13 ಹುದ್ದೆಗಳು ಸೇರಿ 29 ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ (online) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.
ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಗ್ರೂಪ್-ಬಿ ಹುದ್ದೆಗೆ ದಿನಾಂಕ ಮಾರ್ಚ್ 12, 2022ರಂದು ಬೆಳಿಗ್ಗೆ 9 ಗಂಟೆಯಿಂದ 11.15ರವರೆಗೆ ಹಾಗೂ ಗ್ರೂಪ್-ಸಿ ಹುದ್ದೆಗಳಿಗೆ ಅದೇ ದಿನ ಮಧ್ಯಾಹ್ನ 3 ಗಂಟೆಯಿಂದ 5.15ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ಗೆ ಭೇಟಿ ನೀಡಲು ಮನವಿ ಮಾಡಿಕೊಂಡಿದೆ.