Asianet Suvarna News Asianet Suvarna News

EPFO Recruitment 2022: ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನೌಕರರ ಭವಿಷ್ಯ ನಿಧಿ ಸಂಸ್ಥೆಯಲ್ಲಿ 98 ಹುದ್ದೆಗಳು ಖಾಲಿ
ಫೆಬ್ರವರಿ 2   ಅರ್ಜಿ ಸಲ್ಲಿಸಲು ಕೊನೆಯ ದಿನ
ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ

epfo recruitment 2022 notification apply date extended gow
Author
Bengaluru, First Published Jan 30, 2022, 4:57 PM IST

ಬೆಂಗಳೂರು(ಜ.30): ನೌಕರರ ಭವಿಷ್ಯ ನಿಧಿ ಸಂಸ್ಥೆ (Employees Provident Fund Organisation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ. ಡೆಪ್ಯುಟಿ ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​, ಆಡಿಟರ್, ಅಸಿಸ್ಟೆಂಟ್ ಆಡಿಟ್​ ಆಫೀಸರ್ ಸೇರಿ ಒಟ್ಟು 98 ಹುದ್ದೆಗಳು ಖಾಲಿ ಇದೆ.  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ  ಫೆಬ್ರವರಿ 2, 2022 ರೊಳಗೆ  ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳು ಆಫ್​ಲೈನ್ (Offline)​ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ  ಇಲಾಖೆಯ ಅಧಿಕೃತ ವೆಬ್‌ತಾಣ  www.epfindia.gov.in ಗೆ ಭೇಟಿ ನೀಡಿ ತಿಳಿದುಕೊಳ್ಳಬಹುದು. ಈ ಹಿಂದೆ ಜನವರಿ 2 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಇದೀಗ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ  ಮಾಡಿದೆ.

ಒಟ್ಟು 98 ಹುದ್ದೆಗಳು ಖಾಲಿ ಇದ್ದು, ಮಾಹಿತಿ ಇಂತಿದೆ
ಡೆಪ್ಯುಟಿ ಡೈರೆಕ್ಟರ್​-13
ಅಸಿಸ್ಟೆಂಟ್ ಡೈರೆಕ್ಟರ್​-25
ಅಸಿಸ್ಟೆಂಟ್ ಆಡಿಟ್ ಆಫೀಸರ್-26
ಆಡಿಟರ್-34

ವಿದ್ಯಾರ್ಹತೆ: ಡೆಪ್ಯುಟಿ ಡೈರೆಕ್ಟರ್, ಅಸಿಸ್ಟೆಂಟ್ ಡೈರೆಕ್ಟರ್​, ಆಡಿಟರ್, ಅಸಿಸ್ಟೆಂಟ್ ಆಡಿಟ್​ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಯಾವುದೇ ಪದವಿ ಪಡೆದವರು ಅರ್ಹರಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Dakshina Kannada Anganwadi Recruitment 2022: ಒಟ್ಟು 96 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ ಮತ್ತು ವೇತನ: ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 56 ವರ್ಷ ಮೀರಿರಬಾರದು. ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 15,600-39,100 ವೇತನ ನೀಡಲಾಗುತ್ತದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ 
ಶ್ರೀ ಪರಿತೋಷ್​ ಕುಮಾರ್
ರೀಜನಲ್​ ಪ್ರಾವಿಡೆಂಟ್ ಫಂಡ್ ಕಮಿಷನರ್-1(HRM)
ಭವಿಷ್ಯ ನಿಧಿ ಭವನ
14 ಭಿಕಜಿ ಕ್ಯಾಮ ಸರ್ಕಲ್
ನವದೆಹಲಿ-11006

SOUTH WESTERN RAILWAY RECRUITMENT 2022: ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವವರಿಗೆ ಸುವರ್ಣವಕಾಶ

CA, ICWA, ಪದವೀಧರರಿಗೆ UCIL ನಲ್ಲಿ ಉದ್ಯೋಗವಕಾಶ:  ಯುರೇನಿಯಂ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್ (Uranium Corporation of India Limited -UCIL) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಅಕೌಂಟ್ಸ್​ ಆಫೀಸರ್, ಮೈನಿಂಗ್ ಮೇಟ್ ಸೇರಿ ಒಟ್ಟು 41 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್​ಲೈನ್ (Offline) ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 16 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು  ಇಲಾಖೆಯ ಅಧಿಕೃತ ವೆಬ್‌ತಾಣ www.ucil.gov.in ಗೆ ಭೇಟಿ ನೀಡಲು ಕೋರಲಾಗಿದೆ.

ಒಟ್ಟು  41 ಹುದ್ದೆಗಳ ಮಾಹಿತಿ:
ಮೈನಿಂಗ್ ಮೇಟ್- 38
ಅಕೌಂಟ್ಸ್​ ಆಫೀಸರ್-3

ಶೈಕ್ಷಣಿಕ ವಿದ್ಯಾರ್ಹತೆ: ಯುರೇನಿಯಂ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ CA, ICWA, ಪದವಿ ಮಾಡಿರಬೇಕು.

ಅರ್ಜಿ ಸಲ್ಲಿಸುವ ವಿಧಾನ ಮತ್ತು ವಿಳಾಸ: ಯುರೇನಿಯಂ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಅಕೌಂಟ್ಸ್​ ಆಫೀಸರ್ ಮತ್ತು ಮೈನಿಂಗ್ ಮೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್
ಯುರೇನಿಯಂ ಕಾರ್ಪೊರೇಷನ್ ಆಫ್​ ಇಂಡಿಯಾ ಲಿಮಿಟೆಡ್​
ಪಿ.ಒ. ಜಡುಗುಡ ಮೈನ್ಸ್​, ಸಿಂಗ್​​ಭುಮ್ ಈಸ್ಟ್​
ಜಾರ್ಖಂಡ್- 832102

Follow Us:
Download App:
  • android
  • ios