ESIC Recruitment 2022: ಒಟ್ಟು 3847 ಹುದ್ದೆಗೆ ಆನ್‌ಲೈನ್‌ ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನ

ಕಾರ್ಮಿಕ ರಾಜ್ಯ ವಿಮಾ ನಿಗಮದಲ್ಲಿ ಖಾಲಿ ಇರುವ  ‌ ಅಪ್ಪರ್ ಡಿವಿಷನ್‌ ಕ್ಲರ್ಕ್‌, ಸ್ಟೆನೋಗ್ರಾಫರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಸೇರಿದಂತೆ 3847 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ. ಕರ್ನಾಟಕದಲ್ಲೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

esic-recruitment-2022-fresh-notification for various-posts apply before gow

ಬೆಂಗಳೂರು(ಡಿ.30): ರಾಜ್ಯ ನೌಕರರ ವಿಮಾ ನಿಗಮ (Employees State Insurance Corporation - ESIC) ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ನಿಗಮವು ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹೀಗೆ ಒಟ್ಟು 3865 ಹುದ್ದೆಗಳನ್ನು ಭರ್ತಿ ಮಾಡಲು ದೇಶದ ಹಲವು ರಾಜ್ಯಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲೂ ಅಪ್ಪರ್ ಡಿವಿಷನ್‌ ಕ್ಲರ್ಕ್ (Upper Divison Clerk)‌, ಸ್ಟೆನೋಗ್ರಾಫರ್ (Stenographer), ಮಲ್ಟಿ ಟಾಸ್ಕಿಂಗ್ ಸ್ಟಾಫ್‌ (Multi Tasking Staff) ಹುದ್ದೆಗಳನ್ನು ಭರ್ತಿ ಮಾಡಲಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್  http://www.esic.nic.in/ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.  ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಜನವರಿ 15, 2022 ರಿಂದ ಪ್ರಾರಂಭವಾಗಿ ಫೆಬ್ರವರಿ 15, 2022 ರಂದು ಕೊನೆಗೊಳ್ಳಲಿದೆ. ಕರ್ನಾಟಕದಲ್ಲಿ (Karnataka) ಅಪ್ಪರ್ ಡಿವಿಷನ್‌ ಕ್ಲರ್ಕ್  199 ಹುದ್ದೆ, ಸ್ಟೆನೋಗ್ರಾಫರ್ 18 ಹುದ್ದೆ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್‌  65 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ವಿದ್ಯಾರ್ಹತೆ: ಇಎಸ್‌ಐಸಿ ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ, ಮೆಟ್ರಿಕ್ಯುಲೇಶನ್ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಒಟ್ಟು 3865 ಹುದ್ದೆಗಳ ವಿವರ:
ಅಪ್ಪರ್ ಡಿವಿಷನ್ ಕ್ಲರ್ಕ್ - 1736 ಹುದ್ದೆಗಳು
ಮಲ್ಟಿ ಟಾಸ್ಕಿಂಗ್ ಸ್ಟಾಫ್ - 1964 ಹುದ್ದೆಗಳು
ಶೀಘ್ರಲಿಪಿಗಾರ - 165 ಹುದ್ದೆಗಳು

 UPSC Indian Forest Service Recruitment 2022: ಐಎಎಸ್‌, ಐಪಿಎಸ್‌, ಐಎಫ್‌ಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮಿತಿ: ಇಎಸ್‌ಐಸಿ ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಫೆಬ್ರವರಿ 15,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಆದರೆ ಮಲ್ಟಿ ಟಾಸ್ಕಿಂಗ್ ಸ್ಟಾಫ್​ಗೆ ಗರಿಷ್ಠ 25 ವರ್ಷ.

ಆಯ್ಕೆ ಪ್ರಕ್ರಿಯೆ: ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರ ಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

 Eastern Coalfields Limited Recruitment 2022: ಬರೋಬ್ಬರಿ 313 ಮೈನಿಂಗ್ ಸಿರ್ದಾರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ: ಇಎಸ್‌ಐಸಿ ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 18,000/- ರಿಂದ 56,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ: ಇಎಸ್‌ಐಸಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಇಲಾಖೆಯ ಅಭ್ಯರ್ಥಿಗಳು, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಕೆ: ಇಎಸ್‌ಐಸಿ ನೇಮಕಾತಿಯ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.esic.nic.in/recruitments ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಜನವರಿ 15, 2022 ರಿಂದ ಫೆಬ್ರವರಿ 15,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

Latest Videos
Follow Us:
Download App:
  • android
  • ios