Asianet Suvarna News Asianet Suvarna News

ESIC IMO Recruitment 2022: MBBS ಆದವರಿಗೆ ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ

  • ವಿಮಾ ವೈದ್ಯಕೀಯ ಅಧಿಕಾರಿ ಗ್ರೇಡ್ II ಹುದ್ದೆಗಳನ್ನು ಭರ್ತಿ ಮಾಡಲು ESIC ನೋಟಿಫಿಕೇಶನ್
  • MBBS ಪದವಿ ಪೂರೈಸಿದವರಿಗೆ ಅರ್ಜಿ ಸಲ್ಲಿಸಲು ಅವಕಾಶ
  • ಡಿ-31,2021 ರಿಂದ ಜನವರಿ 31,2022ರೊಳಗೆ ಅರ್ಜಿ ಸಲ್ಲಿಕೆಗೆ ಅವಕಾಶ
     
esic recruitment for  Insurance Medical Officer Apply online gow
Author
Bengaluru, First Published Dec 16, 2021, 6:53 PM IST

ಬೆಂಗಳೂರು(ಡಿ.16): ನೌಕರರ ರಾಜ್ಯ ವಿಮಾ ನಿಗಮದಲ್ಲಿ (Employees State Insurance Corporation- ESIC) ಒಟ್ಟು 1,120 ವಿಮಾ ವೈದ್ಯಕೀಯ ಅಧಿಕಾರಿ ಗ್ರೇಡ್ II ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಸೆಂಬರ್ 31,2021 ರಿಂದ ಜನವರಿ 31,2022ರೊಳಗೆ ಅರ್ಜಿ ಹಾಕಲು ಕೋರಲಾಗಿದೆ . ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ https://www.esic.nic.in/ ಭೇಟಿ ನೀಡಲು ಕೋರಲಾಗಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿ : ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ವಿಮಾ ವೈದ್ಯಕೀಯ ಅಧಿಕಾರಿ (Insurance Medical Officer) ಹುದ್ದೆಗಳಿಗೆ  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ MBBS (Bachelor of Medicine and Bachelor of Surgery) ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಮತ್ತು  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಜನವರಿ 31,2022ರ ಅನ್ವಯ ಗರಿಷ್ಟ 35 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಓಬಿಸಿ/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವೇತನ: ಇಎಸ್‌ಐಸಿ ನೇಮಕಾತಿಯ ವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 1,77,500/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ ಆಯ್ಕೆ ಮತ್ತು ಪ್ರಕ್ರಿಯೆ: ಇಎಸ್‌ಐಸಿವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿ‍ಶಿಷ್ಟ ಪಂಗಡ/ಅಂಗವಿಕಲ/ಮಹಿಳೆ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

 ಅರ್ಜಿ ಸಲ್ಲಿಕೆ : ರಾಜ್ಯ ನೌಕರರ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ವಿಮಾ ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.esic.nic.in/recruitments ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 31,2021 ರಿಂದ ಜನವರಿ 31,2022ರೊಳಗೆ ಅರ್ಜಿಯನ್ನು ಸಲ್ಲಿಸಿ.

ESICನಲ್ಲಿ ಸೀನಿಯರ್ ರೆಸಿಡೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಿ: ನೌಕರರ ರಾಜ್ಯ ವಿಮಾ ನಿಗಮ ದಲ್ಲಿ (Employees State Insurance Corporation- ESIC) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 4 ಸೀನಿಯರ್ ರೆಸಿಡೆಂಟ್ ಹುದ್ದೆಗಳು ಖಾಲಿ ಇದ್ದು, ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 17,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗೆ https://www.esic.nic.in/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. 

 ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಪಿಜಿ ಡಿಪ್ಲೋಮಾ/ಡಿಎನ್‌ಬಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.  ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಡಿಸೆಂಬರ್ 17,2021ರ ಅನ್ವಯ ಗರಿಷ್ಟ 37 ವರ್ಷ ವಯಸ್ಸಾಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 67,700/-ರೂ ವೇತನ ನಿಗದಿಯಾಗಿದೆ.

ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.  ಡಿಸೆಂಬರ್ 17,2021ರಂದು ನೇರ ಸಂದರ್ಶನ ನಡೆಯಲಿದೆ. ಆಯ್ಕೆಯಾದವರಿಗೆ ಬೆಂಗಳೂರಿನಲ್ಲಿ ಉದ್ಯೋಗ ಸಿಗಲಿದೆ.

Follow Us:
Download App:
  • android
  • ios