FSSAI recruitment 2022: ಆಹಾರ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಖಾಲಿ ಇರುವ 2 ಆಹಾರ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಮಾರ್ಚ್ 10 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು(ಫೆ.27): ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (Food Safety and Standards Authority of India) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 2 ಆಹಾರ ವಿಶ್ಲೇಷಕ (Food Analyst) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ತಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 10, 2022 ಕೊನೆಯ ದಿನವಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಆಹಾರ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ರಸಾಯನಶಾಸ್ತ್ರ ,ಬಯೋಕೆಮಿಸ್ಟ್ರಿ ,ಮೈಕ್ರೋಬಯಾಲಜಿ ,ಡೈರಿ ಕೆಮಿಸ್ಟ್ರಿ ,ಫುಡ್ ಟೆಕ್ನಾಲಜಿ, ಫುಡ್ ಅಂಡ್ ನ್ಯೂಟ್ರಿಷನ್ ,ಡೈರಿ ಅಥವಾ ಆಯಿಲ್‌ನಲ್ಲಿ ಬ್ಯಾಚುಲರ್ ಆಫ್ ಟೆಕ್ನಾಲಜಿ , ಅಥವಾ ಪಶುವೈದ್ಯಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು . ರಸಾಯನಶಾಸ್ತ್ರಜ್ಞರ ಸಂಸ್ಥೆ (ಭಾರತ) ನಡೆಸುವ ಆಹಾರ ವಿಶ್ಲೇಷಕರ ವಿಭಾಗದಲ್ಲಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕೆಲಸದ ಅನುಭವ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಆಹಾರ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕೇಂದ್ರ ಸರ್ಕಾರದಿಂದ ಗುರುತಿಸಲ್ಪಟ್ಟ ಮತ್ತು ಸೂಚಿಸಲಾದ ಯಾವುದೇ ಸಮಾನ ಅರ್ಹತೆ ಆಹಾರದ ವಿಶ್ಲೇಷಣೆಯಲ್ಲಿ ಕನಿಷ್ಠ ಮೂರು ವರ್ಷಗಳ ಕೆಲಸದ ಅನುಭವ ಪಡೆದಿರಬೇಕು.
TFRI Recruitment 2022: ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ
ವಯೋಮಿತಿ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಆಹಾರ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಗರಿಷ್ಠ 50 ವರ್ಷಗಳಾಗಿರಬೇಕು.
ಅರ್ಜಿ ಶುಲ್ಕ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಆಹಾರ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಆಹಾರ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಲ್ಲಿ ಖಾಲಿ ಇರುವ ಆಹಾರ ವಿಶ್ಲೇಷಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ 60,000 ವೇತನ ನಿಗದಿಯಾಗಿದೆ.
ONGC Director Recruitment 2022: ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನಿಸಿದ ಒಎನ್‌ಜಿಸಿ
ಕ್ರೀಡಾ ಕೋಟದಲ್ಲಿ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ: ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ (Central Industrial Security Force-CISF) ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತರು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ https://www.cisf.gov.in/cisfeng/ ಗೆ ಭೇಟಿ ನೀಡಿ. ಕ್ರೀಡಾ ಕೋಟದ ಆಧಾರದಲ್ಲಿ ಒಟ್ಟು 249 ಹೆಡ್ ಕಾನ್ಸ್ಟೇಬಲ್ (Head Constable) ಹುದ್ದೆ ಖಾಲಿ ಇದ್ದು, ಈ 249 ಹೆಡ್ ಕಾನ್ಸ್ಟೇಬಲ್ ಹುದ್ದೆಗಳಲ್ಲಿ 68 ಮಹಿಳಾ ಅಭ್ಯರ್ಥಿಗಳಿಗೆ ಮತ್ತು 181 ಪುರುಷ ಅಭ್ಯರ್ಥಿಗಳಿಗೆ ಹುದ್ದೆಗಳನ್ನು ಮೀಸಲಿಡಲಾಗಿದೆ.