ಬೆಂಗಳೂರಿನಲ್ಲಿರುವ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಒಟ್ಟು 19 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಮಾರ್ಚ್ 9 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಬೆಂಗಳೂರು(ಫೆ.12): ಬೆಂಗಳೂರಿನಲ್ಲಿರುವ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (Gandhi Krishi Vignana Kendra Bengaluru - GKVK) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಅಸಿಸ್ಟೆಂಟ್ ಪ್ರೊಫೆಸರ್ (Assistant Professor), ಫಾರ್ಮ್ ಮ್ಯಾನೇಜರ್ (Farm Manager) ಸೇರಿ ಒಟ್ಟು 19 ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್​ಲೈನ್ (Offline)​ ಮೂಲಕ ಅರ್ಜಿ ಸಲ್ಲಿಸಬಹುದು. ಮಾರ್ಚ್​ 9 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್​ಸೈಟ್ uasbangalore.edu.in ಗೆ ಭೇಟಿ ನೀಡಿ.

ಒಟ್ಟು 19 ಹುದ್ದೆಗಳ ಮಾಹಿತಿ
ಅಸಿಸ್ಟೆಂಟ್ ಪ್ರೊಫೆಸರ್- 15
ಫಾರ್ಮ್ ಮ್ಯಾನೇಜರ್ -4

ಶೈಕ್ಷಣಿಕ ವಿದ್ಯಾರ್ಹತೆ: ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗನುಸಾರ ವಿದ್ಯಾರ್ಹತೆ ಹೊಂದಿರಬೇಕು.

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಪಿಎಚ್​ಡಿ ಮಾಡಿರಬೇಕು.
ಫಾರ್ಮ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗ್ರಿಕಲ್ಚರ್/ಹಾರ್ಟಿಕಲ್ಚರ್/ಫಾರೆಸ್ಟ್ರಿ/ಸಿರಿಕಲ್ಚರ್/ಅಗ್ರಿಕಲ್ಚರಲ್ ಮಾರ್ಕೆಟಿಂಗ್ & ಕಾರ್ಪೊರೇಷನ್​​ನಲ್ಲಿ ಪದವಿ ಪಡೆದಿರಬೇಕು.

NPCIL Recruitment 2022: ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ನರ್ಸ್ ಸೇರಿ ವಿವಿಧ 42 ಹುದ್ದೆಗಳಿಗೆ ಅರ್ಜಿ ಆಹ್ವಾನ

ವಯೋಮತಿ: ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗನುಸಾರ ವಯೋಮಿತಿ ನಿಗದಿಪಡಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 1 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 42 ವರ್ಷವಾಗಿರಬೇಕು.
ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷವಾಗಿರಬೇಕು.

ಅರ್ಜಿ ಶುಲ್ಕ ವಿವರ: ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ಮತ್ತು ವರ್ಗಾನುಸಾರ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಡಿಮ್ಯಾಂಡ್ ಡ್ರಾಫ್ಟ್ ಮೂಲಕವೇ ಅರ್ಜಿ ಶುಲ್ಕ ಪಾವತಿಸಬೇಕಾಗಿದೆ. 

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ 
SC/ST ಅಭ್ಯರ್ಥಿಗಳು: ರೂ.1000/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.2000/-
ಮಾಜಿ ಸೈನಿಕ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.

ಫಾರ್ಮ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ 
SC/ST ಅಭ್ಯರ್ಥಿಗಳು: ರೂ.500/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.1000/-
ಮಾಜಿ ಸೈನಿಕ/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ.

Mangalore University Recruitment 2022: ನ್ಯಾಯವಾದಿ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ: ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ: ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವೇತನ ನಿಗದೊಪಡಿಸಲಾಗಿದೆ.
ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಮಾಸಿಕ 57,700 ನಿಂದ 1,82,400 ರೂ ವೇತನ ದೊರೆಯಲಿದೆ.
ಫಾರ್ಮ್ ಮ್ಯಾನೇಜರ್ ಹುದ್ದೆಗೆ ಮಾಸಿಕ 35,400 ನಿಂಧ 1,12,400 ರೂ ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ: 
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆಡಳಿತಾಧಿಕಾರಿ
ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, GKVK
ಬೆಂಗಳೂರು-560065
ಕರ್ನಾಟಕ