HAL Recruitment 2022: ಮ್ಯಾನೇಜ್​ಮೆಂಟ್ ಟ್ರೇನಿ ಸೇರಿ 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹಿಂದೂಸ್ತಾನ್ ಏರೋನಾಟಿಕ್ಸ್ ಲಿ.   ಕಂಪನಿಯು ಖಾಲಿ ಇರುವ ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ ಸೇರಿ ಒಟ್ಟು 85 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮಾರ್ಚ್ 2 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

HAL has released the  Recruitment  notification for Design Trainee and Management Trainee Posts gow

ಬೆಂಗಳೂರು(ಫೆ.10): ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ. (Hindustan Aeronautics Limited-HAL) ಕಂಪನಿಯು ಖಾಲಿ ಇರುವ  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜ್​ಮೆಂಟ್ ಟ್ರೇನಿ (Management Trainee) ಮತ್ತು ಡಿಸೈನ್ ಟ್ರೇನಿ (Design Trainee) ಸೇರಿ ಒಟ್ಟು 85 ಹುದ್ದೆಗಳು ಖಾಲಿ ಇದೆ.  ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 2ರೊಳಗೆ  ಅರ್ಜಿ ಸಲ್ಲಿಸಬೇಕು. ನೇಮಕಾತಿ ಬಗೆಗಿನ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://hal-india.co.in/  ಭೇಟಿ ನೀಡಬಹುದು.

ಒಟ್ಟು 85 ಹುದ್ದೆಗಳ ಮಾಹಿತಿ ವಿವರ:
ಮ್ಯಾನೇಜ್​​ಮೆಂಟ್ ಟ್ರೇನಿ-47
ಡಿಸೈನ್ ಟ್ರೇನಿ-38

ಶೈಕ್ಷಣಿಕ ವಿದ್ಯಾರ್ಹತೆ: ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ  ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಪಡೆದಿರಬೇಕು.

ವಯೋಮಿತಿ: ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ  ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಅಭ್ಯರ್ಥಿಗಳ ಗರಿಷ್ಠ ವಯೋಮಾನ 28 ವರ್ಷ. ವರ್ಗಾನುಸಾರ ವಯೋಮಿತಿಯನ್ನು  ಸಡಿಲಿಕೆಯನ್ನು ನೀಡಲಾಗಿರುತ್ತದೆ. SC/STಗೆ 5 ವರ್ಷ, ಒಬಿಸಿಗೆ 3 ವರ್ಷ ಮತ್ತು PWD 10 ವರ್ಷಗಳ ಸಡಿಲಿಕೆ ನೀಡಲಾಗಿದೆ.

CGA RECRUITMENT 2022: 590 ಸಹಾಯಕ ಖಾತೆ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ವೇತನ ವಿವರ: ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ  ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 40,000/- ರಿಂದ 1,40,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ  ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು  ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ  ಮತ್ತು ವೈಯಕ್ತಿಕ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ನಮೂದಿಸಲಾಗಿದೆ.

ಅರ್ಜಿ ಶುಲ್ಕ: ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ  ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ   ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

Karnataka Khadi Recruitment Exam: ಮಾ.12ಕ್ಕೆ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಸಲ್ಲಿಕೆ : ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ  ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ   ಹುದ್ದೆಗಳಿಗೆ  ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.hal-india.co.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಮಾರ್ಚ್​​ 2,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ: ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ  ಮ್ಯಾನೇಜ್​ಮೆಂಟ್ ಟ್ರೇನಿ ಮತ್ತು ಡಿಸೈನ್ ಟ್ರೇನಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿ ಬೇಕಾದರೂ ಕರ್ತವ್ಯ ನಿರ್ವಹಿಸಲು ತಯಾರಿರಬೇಕು.

BDA Recruitment 2022: ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಡಿಎ

Latest Videos
Follow Us:
Download App:
  • android
  • ios