HAL Recruitment 2022: BE, B Tech ಆದವರಿಗೆ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

HAL ಕಂಪನಿಯು ಖಾಲಿ ಇರುವ  150 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಜನವರಿ 19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

HAL Recruitment 2022 notification for Apprentice Posts gow

ಬೆಂಗಳೂರು(ಜ.10): ಬೆಂಗಳೂರಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ. (Hindustan Aeronautics Limited-HAL) ಕಂಪನಿಯು ಖಾಲಿ ಇರುವ  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 150 ಗ್ರಾಜುಯೇಟ್ ಅಪ್ರೆಂಟಿಸ್​​ ಮತ್ತು ಡಿಪ್ಲೋಮಾ ಅಪ್ರೆಂಟಿಸ್​​ ಹುದ್ದೆಗಳು ಖಾಲಿ ಇದ್ದು, ಬಿಇ, ಬಿಟೆಕ್, ಡಿಪ್ಲೋಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 19, 2022ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ನೇಮಕಾತಿ ಬಗೆಗಿನ ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್ https://hal-india.co.in/ ಗೆ   ಅಥವಾ http://portal.mhrdnats.gov.in/ ಭೇಟಿ ನೀಡಬಹುದು.

ಒಟ್ಟು 150 ಹುದ್ದೆಗಳ ಮಾಹಿತಿ ಇಂತಿದೆ:
ಗ್ರಾಜುಯೇಟ್ ಅಪ್ರೆಂಟಿಸ್ - 70 ಹುದ್ದೆಗಳು
ಡಿಪ್ಲೋಮಾ ಅಪ್ರೆಂಟಿಸ್- 80 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ: ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಗ್ರಾಜುಯೇಟ್ ಅಪ್ರೆಂಟಿಸ್  ಮತ್ತು  ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಡಿಪ್ಲೋಮಾ, ಬಿಇ, ಬಿ.ಟೆಕ್​ ಪೂರ್ಣಗೊಳಿಸಿರಬೇಕು.
ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಎಂಜಿನಿಯರಿಂಗ್
ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್
ಮೆಕ್ಯಾನಿಕಲ್ ಇಂಜಿನಿಯರಿಂಗ್
ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್
ಮಾಡಿರಬೇಕು.

ECIL Recruitment 2022: ಇಂಜಿನಿಯರ್ ಹುದ್ದೆಗಳ ಪದವೀಧರರಿಗೆ ಸುವರ್ಣಾವಕಾಶ

ಆಯ್ಕೆ ಪ್ರಕ್ರಿಯೆ: ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಗ್ರಾಜುಯೇಟ್ ಅಪ್ರೆಂಟಿಸ್  ಮತ್ತು  ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮೂಲಕ ಆಯ್ಕೆ ಮಾಡಿ ನಂತರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ: ಹಿಂದೂಸ್ತಾನ್ ಏರೋನಾಟಿಕ್ಸ್​​ ಲಿಮಿಟೆಡ್​ನಲ್ಲಿ ಖಾಲಿ ಇರುವ ಗ್ರಾಜುಯೇಟ್ ಅಪ್ರೆಂಟಿಸ್  ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ಜೊತೆಗೆ  ಮಾಸಿಕ 8000 ದಿಂದ 9000 ಸ್ಟೈಪೆಂಡ್ ನೀಡಲಾಗುತ್ತದೆ. ಮತ್ತು ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಯು ತೆಲಂಗಾಣದ ಹೈದಾರಾಬಾದ್​​ನಲ್ಲಿ ಉದ್ಯೋಗ  ಮಾಡಬೇಕಾಗುತ್ತದೆ.

RRB NTPC Result: 1 ಕೋಟಿಗೂ ಅಧಿಕ ಅಭ್ಯರ್ಥಿಗಳು ಬರೆದಿದ್ದ ಸಿಬಿಟಿ-1 ಪರೀಕ್ಷೆ ಜನವರಿ 15 ರಂದು ಪ್ರಕಟ

ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆಯ ರಿಸರ್ವ್ ಲಿಸ್ಟ್‌ ಬಿಡುಗಡೆ: ಕೇಂದ್ರ ಲೋಕಸೇವಾ ಆಯೋಗ (Union Public Service Commission- UPSC) ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆ 2020 ರ (Engineering Services Examination 2020 ) ರಿಸರ್ವ್ ಲಿಸ್ಟ್‌ ಅನ್ನು ಬಿಡುಗಡೆ ಮಾಡಲಾಗಿದೆ. ಸದರಿ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್‌ಸೈಟ್‌ upsc.gov.in ಗೆ ಭೇಟಿ ನೀಡಿ ಫಲಿತಾಂಶವನ್ನು ಪರೀಕ್ಷಿಸಬಹುದು. ಕೇಂದ್ರ ಲೋಕಸೇವಾ ಆಯೋಗವು ಎಪ್ರಿಲ್ 12, 2021ರಂದು  302 ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ನೇಮಕಾತಿಗೆ ಶಿಫಾರಸು ಮಾಡಿ ನೋಟಿಸ್ ಬಿಡುಗಡೆ ಮಾಡಿತ್ತು.

ಪ್ರಸ್ತುತ ರೈಲ್ವೆ ಸಚಿವಾಲಯದ ಬೇಡಿಕೆಯಂತೆ ಇಂಜಿನಿಯರಿಂಗ್ ಸೇವೆಗಳ ಪರೀಕ್ಷೆಯ ಆಧಾರದ ಮೇಲೆ ಉಳಿದ ಹುದ್ದೆಗಳ ನೇಮಕಾತಿಗೆ ಆಯೋಗವು 41 ಅಭ್ಯರ್ಥಿಗಳ ರಿಸರ್ವ್‌ ಲಿಸ್ಟ್‌ ಅನ್ನು ಬಿಡುಗಡೆ ಮಾಡಿದೆ. ಈ ಅಭ್ಯರ್ಥಿಗಳ ಪೈಕಿ ಸಾಮಾನ್ಯ-30, ಒಬಿಸಿ-09, ಇಡಬ್ಲ್ಯೂಎಸ್ (Economically Weaker Section)-01, ST-1 ವರ್ಗದವರ ಹೆಸರು ಪಟ್ಟಿಯಲ್ಲಿದೆ. ಸದ್ಯ ಕೇಂದ್ರ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ರಿಸರ್ವ್ ಲಿಸ್ಟ್‌ ನಲ್ಲಿನ ಅಭ್ಯರ್ಥಿಗಳೊಂದಿಗೆ ರೈಲ್ವೆ ಸಚಿವಾಲಯ ನೇರ ಸಂಪರ್ಕ ಮಾಡಿ, ಮುಂದಿನ ಪ್ರಕ್ರಿಯೆ ನಡೆಸಲಿದೆ. 

Latest Videos
Follow Us:
Download App:
  • android
  • ios