Asianet Suvarna News Asianet Suvarna News

IFFCO Recruitment 2022 ಕೃಷಿ, ಕಾನೂನು ಪದವಿ ಪಡೆದವರಿಗೆ ಇಫ್ಕೊನಲ್ಲಿ ಉದ್ಯೋಗವಕಾಶ

ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮದಲ್ಲಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ.  ಎಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಟ್ರೈನಿ ಲೀಗಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 3 ಆಗಿದೆ. 

IFFCO Recruitment 2022 notification for Agriculture and Other Graduates gow
Author
Bengaluru, First Published Apr 1, 2022, 6:04 PM IST

ಬೆಂಗಳೂರು(ಎ.1): ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮ (Indian Farmers Fertiliser Cooperative Limited) ದಲ್ಲಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಿದೆ. ಅಗ್ರಿಕಲ್ಚರ್ ಗ್ರಾಜುಯೇಟ್ ಟ್ರೈನಿ (Agriculture Graduate Trainees), ಟ್ರೈನಿ ಲೀಗಲ್ (Trainee Legal) ಮತ್ತು ಟ್ರೈನಿ ಅಕೌಂಟ್ಸ್ (Trainee Accounts) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.  ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನವಾಗಿದೆ.  ಟ್ರೈನಿ ಲೀಗಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 3 ಆಗಿದೆ. 

ಶೈಕ್ಷಣಿಕ ಅರ್ಹತೆ: ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮದಲ್ಲಿ  ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು.

ಅಗ್ರಿಕಲ್ಚರ್ ಗ್ರಾಜುಯೇಟ್ ಟ್ರೈನಿ ಹುದ್ದೆಗೆ ಶೇ.60 ಅಂಕಗಳನ್ನು ಪಡೆದು ಕೃಷಿ ವಿಷಯದಲ್ಲಿ ನಾಲ್ಕು ವರ್ಷಗಳ ಬಿ.ಎಸ್ಸಿ ಮಾಡಿರಬೇಕು. 2019ರಲ್ಲಿ     ವಿದ್ಯಾರ್ಹತೆ ಪಡೆದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಟ್ರೈನಿ ಅಕೌಂಟ್ಸ್ ಹುದ್ದೆಗೆ ಶೇ.60 ಅಂಕಗಳೊಂದಿಗೆ ವಾಣಿಜ್ಯದಲ್ಲಿ ಪದವಿ ಮತ್ತು CA ಮಾಡಿರಬೇಕು.

ಟ್ರೈನಿ ಲೀಗಲ್ ಹುದ್ದೆಗೆ  ಶೇ.60 ಅಂಕಗಳೊಂದಿಗೆ ಪದವಿ ಅಥವಾ ಸ್ನಾತಕೋತ್ತರ LLB ಮಾಡಿರಬೇಕು.

Prasar Bharati Recruitment 2022: ಆಲ್‌ ಇಂಡಿಯಾ ರೇಡಿಯೋ ಹುದ್ದೆಗಳಿಗೆ ನೇಮಕಾತಿ

ವಯೋಮಿತಿ: ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮದಲ್ಲಿ  ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು 30 ವರ್ಷ ಮೀರಿರಬಾರದು. SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮದಲ್ಲಿ  ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮ್ಸ್ ಪರೀಕ್ಷೆ ಮತ್ತು ಅಂತಿಮ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: ಭಾರತೀಯ ರೈತರ ರಸಗೊಬ್ಬರ ಸಹಕಾರ ನಿಗಮದಲ್ಲಿ  ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ಮಾಸಿಕ ವೇತನ ದೊರೆಯಲಿದೆ.
ಟ್ರೈನಿ ಲೀಗಲ್ ಹುದ್ದೆಗೆ ₹37000 ರಿಂದ ₹70000
ಟ್ರೈನಿ ಅಕೌಂಟ್ಸ್ ಹುದ್ದೆಗೆ ₹40000 ರಿಂದ ₹75000
ಅಗ್ರಿಕಲ್ಚರ್ ಗ್ರಾಜುಯೇಟ್ ಟ್ರೈನಿ ಹುದ್ದೆಗೆ ₹40000 ರಿಂದ ₹75000

KIOCL Recruitment 2022: ಕುದುರೆಮುಖ ಕಬ್ಬಿಣ ಕಾರ್ಖಾನೆಯಲ್ಲಿ ಎಂಜಿನಿಯರ್ ಪದವೀಧರರ ನೇಮಕಾತಿ 

BDL ಮ್ಯಾನೇಜರ್ ಹುದ್ದೆಗೆ ನೇಮಕಾತಿ: ಭಾರತ್ ಡೈನಾಮಿಕ್ಸ್ ಲಿಮಿಟೆಡ್ (Bharat Dynamics Limited -BDL) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.   ಒಟ್ಟು 2 ಮ್ಯಾನೇಜರ್ (Manager) ಹುದ್ದೆಗಳು ಖಾಲಿ ಇದ್ದು,  ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 25  ಮೊದಲು ಆಫ್‌ಲೈನ್‌ನ  ಮೂಲಕ ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಭಾರತ್ ಡೈನಾಮಿಕ್ಸ್ ಲಿಮಿಟೆಡ್  ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್  ಮತ್ತು ಕಮ್ಯುನಿಕೇಷನ್ಸ್,  ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್, ಪ್ರೊಡಕ್ಷನ್‌ನಲ್ಲಿ ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಅರ್ಜಿದಾರರು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ ಕೊಡಬೇಕು.
ಭಾರತೀಯ ನೇವಲ್ ಪ್ಲೇಸ್‌ಮೆಂಟ್ ಏಜೆನ್ಸಿ
6 ನೇ ಮಹಡಿ, ಚಾಣಕ್ಯ ಭವನ
ಚಾಣಕ್ಯಪುರಿ, ನವದೆಹಲಿ - 110021 

Follow Us:
Download App:
  • android
  • ios