IGNOU Recruitment 2022: ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಇಗ್ನೋ

  • ಇಗ್ನೋ ದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ 
  • ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿ ಹುದ್ದೆ ಖಾಲಿ
  • ಅರ್ಜಿ ಸಲ್ಲಿಸಲು ಕೊನೆ ದಿನ ಡಿಸೆಂಬರ್ 27  2021
IGNOU  recently published a job notification to fill up Child Development Project Officer post gow

ಬೆಂಗಳೂರು (ಡಿ.23): ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯವು (Indira Gandhi National Open University) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿಯ (Child Development Project Officer) 1 ಹುದ್ದೆ ಖಾಲಿ ಇದ್ದು ಎಂಎಸ್​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 27 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ignou.ac.in ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಲು ಕೋರಲಾಗಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿ: ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​​ನಿಂದ ಕಡ್ಡಾಯವಾಗಿ ಮಕ್ಕಳ ಅಭಿವೃದ್ಧಿ/ ಮಾನವ ಅಭಿವೃದ್ಧಿ ಮತ್ತು ಬಾಲ್ಯ ಅಧ್ಯಯನ/ ಮಾನವ ಅಭಿವೃದ್ಧಿ & ಕುಟುಂಬ ಅಧ್ಯಯನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಅಭ್ಯರ್ಥಿಗಳ ವಯಸ್ಸು ಗರಿಷ್ಠ 57 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ ಮತ್ತು ಉದ್ಯೋಗ ಸ್ಥಳ: ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗೆ ನವದೆಹಲಿಯಲ್ಲಿ ಉದ್ಯೋಗ ನೀಡಲಾಗುತ್ತದೆ. ಮತ್ತು ಮಾಸಿಕ 40,000 ರಿಂದ 60,000 ರೂ ವೇತನ ನೀಡಲಾಗುತ್ತದೆ.

IGNOU Admission 2022: ಇಗ್ನೋ ಜನವರಿ ಸೆಶನ್ ಪ್ರವೇಶಾತಿಗೆ ಡಿ.31ರವರೆಗೆ ಅವಧಿ ವಿಸ್ತರಣೆ

ಇಗ್ನೋ ಜನವರಿ ಸೆಶನ್ ಪ್ರವೇಶಾತಿಗೆ ಡಿ.31ರವರೆಗೆ ಅವಧಿ ವಿಸ್ತರಣೆ: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯವು (Indira Gandhi National Open University) 2022ರ ಜನವರಿ ಸೆಶನ್  ಪದವಿ ಮತ್ತು ಸ್ನಾತಕೋತ್ತರ ಪದವಿ ಮತ್ತು ಪಿಜಿ ಡಿಪ್ಲೋಮಾ ಮತ್ತು ಪಿಜಿ ಸರ್ಟಿಫಿಕೇಟ್ ಕೋರ್ಸ್ ಗಳ ಮರುನೋಂದಣಿ ಅರ್ಜಿ ಸಲ್ಲಿಕೆಯ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ.

KUD RECRUITMENT 2022: ಖಾಲಿ ಇರುವ ಬೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಿದ ಕೆಯುಡಿ

ಆಸಕ್ತರು ಆನ್‌ಲೈನ್ ಮೂಲಕ ಡಿಸೆಂಬರ್ 31, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಿ ಪ್ರವೇಶ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ  ವೆಬ್ಸೈಟ್ https://ignouadmission.samarth.edu.in/ ಗೆ ಭೇಟಿ ನೀಡಿ. ಅಥವಾ ignou.ac.in/ ಗೆ ಭೇಟಿ ನೀಡಿ.

UPSC NDA Notification 2022: 400 ಹುದ್ದೆಗಳ ನೇಮಕಾತಿ ಪರೀಕ್ಷೆ ಅಧಿಸೂಚನೆ ಹೊರಡಿಸಿದ UPSC

ಪ್ರತಿ ವರ್ಷವು ಇಗ್ನೋ ಪ್ರವೇಶ ಪ್ರಕ್ರಿಯೆಯನ್ನು ಜನವರಿ ಮತ್ತು ಜುಲೈ ನಲ್ಲಿ ನಡೆಸುತ್ತದೆ. ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

Karnataka employment policy: ರಾಜ್ಯದಲ್ಲಿ ಸದ್ಯದಲ್ಲೇ 'ಉದ್ಯೋಗ ನೀತಿ' ಜಾರಿ, ಬೆಳಗಾವಿ ಉದ್ಯೋಗ ಮೇಳದಲ್ಲಿ ಬೊಮ್ಮಾಯಿ ಹೇಳಿಕೆ

ಪ್ರವೇಶಾತಿ ಪಡೆಯಲಿರುವ ಹೊಸ ಅಭ್ಯರ್ಥಿಗಳು ತಮ್ಮ ಐಡಿಯನ್ನು ರಚಿಸಬಹುದು ಮತ್ತು ನೆಟ್ ಬ್ಯಾಂಕಿಂಗ್ /ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್ ಬಳಸಿ ಆನ್‌ಲೈನ್‌ನಲ್ಲಿ ಶುಲ್ಕವನ್ನು ಪಾವತಿಸಬಹುದು ಎಂದು ಇಗ್ನೋ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

RUDSETI Self Employment Training: ಸ್ವ ಉದ್ಯೋಗ ಉಚಿತ ತರಬೇತಿಗೆ ರುಡ್‌ಸೆಟ್‌ ಅರ್ಜಿ ಆಹ್ವಾನ

Latest Videos
Follow Us:
Download App:
  • android
  • ios