IIIT Bangalore Recruitment 2022: ಸಂಶೋಧನಾ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಒಟ್ಟು 4 ಸಂಶೋಧನಾ ಹುದ್ದೆಗೆ ಅರ್ಜಿ ಆಹ್ವಾನಿಸಿದ  ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು. ಫೆಬ್ರವರಿ 15  ಅರ್ಜಿ ಸಲ್ಲಿಸಲು ಕೊನೆಯ ದಿನ.

IIIT Bangalore Recruitment 2022 notification apply for Research Associate and  Research Assistant posts gow

ಬೆಂಗಳೂರು(ಫೆ.9): ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು (International Institute of Information Technology Bangalore -IIITB) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ  ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 4 ಸಂಶೋಧನಾ  ವಿಭಾಗದ(Research)​ ಹುದ್ದೆಗಳು ಖಾಲಿ ಇದ್ದು, ಎಂ.ಟೆಕ್/ಎಂಎಸ್, ಪಿಹೆಚ್‌ಡಿ ​ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಈಗಾಗಲೇ ಅರ್ಜಿ  ಸಲ್ಲಿಕೆ ಆರಂಭವಾಗಿದ್ದು, ಫೆಬ್ರವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ iiitb.ac.in ಗೆ ಭೇಟಿ ನೀಡಲು ಕೋರಲಾಗಿದೆ.

ಒಟ್ಟು 4 ಹುದ್ದೆಗಳ ವಿವರ:
 ರಿಸರ್ಚ್ ಅಸೋಸಿಯೇಟ್ ಹುದ್ದೆಗಳು - 2
ರಿಸರ್ಚ್ ಅಸಿಸ್ಟೆಂಟ್  ಹುದ್ದೆಗಳು - 2

ವಿದ್ಯಾರ್ಹತೆ: ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ಇಲ್ಲಿನ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಕಂಪ್ಯೂಟರ್​ ಸೈನ್ಸ್​/ ಕಂಪ್ಯೂಟರ್ ಎಂಜಿನಿಯರಿಂಗ್​/ ಎಲೆಕ್ಟ್ರಾನಿಕ್ಸ್​ ಎಂಜಿನಿಯರಿಂಗ್​/ ಮೆಕ್ಯಾನಿಕಲ್​ ಎಂಜಿನಿಯರಿಂಗ್​/ ಮಾಹಿತಿ ತಂತ್ರಜ್ಞಾನದಲ್ಲಿ ಎಂ.ಟೆಕ್/ಎಂಎಸ್, ಪಿಹೆಚ್‌ಡಿ ಪೂರ್ಣಗೊಳಿಸಿರಬೇಕು. 

NMDC RECRUITMENT 2022: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇಲ್​ ಐಡಿ- opportunities@iiitb.ac.in ಗೆ ಕಳುಹಿಸಲು ಕೋರಲಾಗಿದೆ.  ಅಥವಾ ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು  opportunities@iiitb.ac.in ಹಾಗೂ ರಿಸರ್ಚ್ ಅಸಿಸ್ಟೆಂಟ್  ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು fairwork@iiitb.ac.in ಈ ಮೇಲ್ ವಿಳಾಸಕ್ಕೆ ಕೂಡ ಅರ್ಜಿ ಸಲ್ಲಿಸಬಹುದು.

ಉದ್ಯೋಗ ಸ್ಥಳ: ಬೆಂಗಳೂರು ಮತ್ತು ದೆಹಲಿಯಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರು ನೇಮಕಾತಿಯ ರಿಸರ್ಚ್ ಅಸೋಸಿಯೇಟ್ ಮತ್ತು ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನುಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ:  ಅಂತರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ಬೆಂಗಳೂರು ಇಲ್ಲಿನ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಿ  ರಿಸರ್ಚ್ ಅಸೋಸಿಯೇಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವರ್ಷಕ್ಕೆ 6,50,000/- ರಿಂದ 9,60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು. ರಿಸರ್ಚ್ ಅಸಿಸ್ಟೆಂಟ್ ಹುದ್ದೆಗಳಿಗೆ ಐಐಐಟಿ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

Bank of Maharashtra Recruitment 2022: ಖಾಲಿ ಇರುವ 500 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಾರ್ಮಿಕ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗ: ರಾಜ್ಯ ನೌಕರರ ವಿಮಾ ನಿಗಮ (Employees State Insurance Corporation - ESIC) ನೇಮಕಾತಿ ಅಧಿಸೂಚನೆ 2022 ಅನ್ನು ಬಿಡುಗಡೆ ಮಾಡಿದೆ. ನಿಗಮವು ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹೀಗೆ ಒಟ್ಟು 3865 ಹುದ್ದೆಗಳನ್ನು ಭರ್ತಿ ಮಾಡಲು ದೇಶದ ಹಲವು ರಾಜ್ಯಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕದಲ್ಲೂ ಅಪ್ಪರ್ ಡಿವಿಷನ್‌ ಕ್ಲರ್ಕ್ (Upper Divison Clerk)‌, ಸ್ಟೆನೋಗ್ರಾಫರ್ (Stenographer), ಮಲ್ಟಿ ಟಾಸ್ಕಿಂಗ್ ಸ್ಟಾಫ್‌ (Multi Tasking Staff) ಹುದ್ದೆಗಳನ್ನು ಭರ್ತಿ ಮಾಡಲಿದೆ. ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್  http://www.esic.nic.in/ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.  ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಜನವರಿ 15, 2022 ರಿಂದ ಪ್ರಾರಂಭವಾಗಿ ಫೆಬ್ರವರಿ 15, 2022 ರಂದು ಕೊನೆಗೊಳ್ಳಲಿದೆ. ಕರ್ನಾಟಕದಲ್ಲಿ (Karnataka) ಅಪ್ಪರ್ ಡಿವಿಷನ್‌ ಕ್ಲರ್ಕ್  199 ಹುದ್ದೆ, ಸ್ಟೆನೋಗ್ರಾಫರ್ 18 ಹುದ್ದೆ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್‌  65 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

Latest Videos
Follow Us:
Download App:
  • android
  • ios