IIIT Bengaluru Recruitment 2022: ಲ್ಯಾಬ್ ಇನ್ ಚಾರ್ಜ್ ಹುದ್ದೆಗೆ ಅರ್ಜಿ ಆಹ್ವಾನ
ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ, ಬೆಂಗಳೂರಿನಲ್ಲಿ ಲ್ಯಾಬ್-ಇನ್-ಚಾರ್ಜ್ ಹುದ್ದೆಯನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಜನವರಿ 31,2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು: ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (International Institute of Information Technology-IIIT) ಬೆಂಗಳೂರಿನಲ್ಲಿ ಲ್ಯಾಬ್ ಇನ್ ಚಾರ್ಜ್ (Lab Incharge) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ opportunities@iiitb.ac.in ವಿಳಾಸಕ್ಕೆ ಈಮೇಲ್ ಮಾಡುವ ಮೂಲಕ ಜನವರಿ 31,2022ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣ https://www.iiitb.ac.in/ ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಬೆಂಗಳೂರು ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಲ್ಯಾಬ್-ಇನ್-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಎಲೆಕ್ಟ್ರಾನಿಕ್ ನಲ್ಲಿ ಬಿಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ : ಐಐಐಟಿ (IIIT) ಬೆಂಗಳೂರಿನ ಲ್ಯಾಬ್-ಇನ್-ಚಾರ್ಜ್ ಹುದ್ದೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಆಯ್ಕೆ ಪ್ರಕ್ರಿಯೆ: ಐಐಐಟಿ ಬೆಂಗಳೂರಿನ ಲ್ಯಾಬ್-ಇನ್-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.
CNP Recruitment 2022: ನೋಟು ಮುದ್ರಣಾಲಯದಲ್ಲಿ 1 ಲಕ್ಷದವರೆಗೆ ವೇತನ
ವೇತನ: ಐಐಐಟಿ ಬೆಂಗಳೂರಿನ ಲ್ಯಾಬ್-ಇನ್-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನ ನಿಗದಿಯಾಗಿದೆ.
ಅರ್ಜಿ ಶುಲ್ಕ: ಐಐಐಟಿ ಬೆಂಗಳೂರಿನ ಲ್ಯಾಬ್-ಇನ್-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಅರ್ಜಿ ಸಲ್ಲಿಕೆ : ಐಐಐಟಿ ಬೆಂಗಳೂರಿನ ಲ್ಯಾಬ್-ಇನ್-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.iiitb.ac.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆ ಓದಿಕೊಂಡು ನಂತರ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ opportunities@iiitb.ac.in ವಿಳಾಸಕ್ಕೆ ಈ ಮೇಲ್ ಮಾಡುವ ಮೂಲಕ ಜನವರಿ 31,2022ರೊಳಗೆ ಅರ್ಜಿಯನ್ನು ಕಳುಹಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಧಿಸೂಚನೆಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ https://www.iiitb.ac.in/staff-openings
NIMHANS Recruitment 2022: ಸೀನಿಯರ್ ರೆಸಿಡೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ನಿಮ್ಹಾನ್ಸ್
CVRDE ವಿಭಾಗದಲ್ಲಿ ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಅರ್ಜಿ ಆಹ್ವಾನಿಸಿದ DRDO: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation-DRDO) - ಯುದ್ಧ ವಾಹನಗಳ ಸಂಶೋಧನೆ ಮತ್ತು ಅಭಿವೃದ್ಧಿ ಸ್ಥಾಪನೆ (Combat Vehicles Research & Development Establishment-CVRDE) ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 2 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಈ ಜಾಹೀರಾತನ್ನು ಪ್ರಕಟಿಸಿದ ದಿನಾಂಕದಿಂದ 30 ದಿನಗಳ ಒಳಗೆ (ಜನವರಿ 27, 2022) ಒಳಗೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ನಿಗದಿತ ನಮೂನೆಯ ಮೂಲಕ ಕಳುಹಿಸಬಹುದು. ಹೆಚ್ಚಿನ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rac.gov.in ಭೇಟಿ ನೀಡಬಹುದು. ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ