Income Tax Recruitment 2022: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ

ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಫ್​ಲೈನ್  ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್​ 18 ಕೊನೆಯ ದಿನವಾಗಿದೆ.

Income Tax Department Recruitment 2022 notification for Income Tax Inspector and other post gow

ಬೆಂಗಳೂರು(ಮಾ.6): ಆದಾಯ ತೆರಿಗೆ ಇಲಾಖೆಯಲ್ಲಿ (Income Tax Department) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಮಲ್ಟಿ ಟಾಸ್ಕಿಂಗ್​ ಸ್ಟಾಫ್, ಟ್ಯಾಕ್ಸ್​ ಅಸಿಸ್ಟೆಂಟ್  ಸೇರಿ ಒಟ್ಟು 24 ವಿವಿಧ ಹುದ್ದೆಗಳು ಖಾಲಿ ಇದ್ದು , ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್​ಲೈನ್ (Offline)​ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್​ 18 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ಇಲಾಖೆಯ ಅಧಿಕೃತ ವೆಬ್‌ತಾಣ https://incometaxindia.gov.in/ ಗೆ ಭೇಟಿ ನೀಡಲು ಕೋರಲಾಗಿದೆ.

ಒಟ್ಟು 24 ಹುದ್ದೆಗಳ ಮಾಹಿತಿ ಇಂತಿದೆ
ಆದಾಯ ತೆರಿಗೆ ಇನ್​​ಸ್ಪೆಕ್ಟರ್ (Income Tax Inspector)-01
ತೆರಿಗೆ ಸಹಾಯಕ (Tax Assistant) -05
ಮಲ್ಟಿ ಟಾಸ್ಕಿಂಗ್​ ಸಿಬ್ಬಂದಿ (Multi-Tasking Staff) -18

ಶೈಕ್ಷಣಿಕ ಅರ್ಹತೆ:  ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗೆ ಅನುಸಾರ ವಿದ್ಯಾರ್ಹತೆ ಪಡೆದಿರಬೇಕು.

ಆದಾಯ ತೆರಿಗೆ ಇನ್​​ಸ್ಪೆಕ್ಟರ್ ಹುದ್ದೆಗೆ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ 
ತೆರಿಗೆ ಸಹಾಯಕ ಹುದ್ದೆಗೆ ಪದವಿ ವಿದ್ಯಾರ್ಹತೆ ಅಥವಾ ಅದಕ್ಕೆ ಸಮನಾದ ತತ್ಸಮಾನ. ಗಂಟೆಗೆ 8000 ಕೀ ಡೇಟಾ ಎಂಟ್ರಿ ವೇಗವನ್ನು ಹೊಂದಿರಬೇಕು.
 ಮಲ್ಟಿ ಟಾಸ್ಕಿಂಗ್​ ಸಿಬ್ಬಂದಿ ಹುದ್ದೆಗೆ 10 ನೇ ತರಗತಿ,  ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪಾಸಾಗಿರಬೇಕು.

IRCON Recruitment 2022: ಇಂಜಿನಿಯರ್ ಸೇರಿ ವಿವಿಧ ಹುದ್ದೆಗಳಿಗೆ ಭಾರತೀಯ ರೈಲ್ವೆ ಕನ್​​ಸ್ಟ್ರಕ್ಷನ್​ ಕಂಪನಿ ನೇಮಕಾತಿ

ವಯೋಮಿತಿ: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರ ವಯೋಮಿತಿ ನಿಗದಿಪಡಿಸಲಾಗಿದೆ.
ಆದಾಯ ತೆರಿಗೆ ಇನ್​​ಸ್ಪೆಕ್ಟರ್: 18-30 ವರ್ಷ
ತೆರಿಗೆ ಸಹಾಯಕ: 18-27 ವರ್ಷ
ಮಲ್ಟಿ ಟಾಸ್ಕಿಂಗ್​ ಸಿಬ್ಬಂದಿ: 18-25 ವರ್ಷ

ಆಯ್ಕೆ ಪ್ರಕ್ರಿಯೆ:  ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು  ಶಾರ್ಟ್ ಲಿಸ್ಟಿಂಗ್, ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

ವೇತನ ವಿವರ: ಆದಾಯ ತೆರಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗೆ ಅನುಸಾರವಾಗಿ ವೇತನ ನಿಗದಿಪಡಿಸಲಾಗಿದೆ.
ಆದಾಯ ತೆರಿಗೆ ಇನ್​​ಸ್ಪೆಕ್ಟರ್: ₹ 34,800
ತೆರಿಗೆ ಸಹಾಯಕ:  ₹ 20,200
ಮಲ್ಟಿ ಟಾಸ್ಕಿಂಗ್​ ಸಿಬ್ಬಂದಿ: ₹ 20,200

NWDA Recruitment 2022: ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿಯಲ್ಲಿ ಇಂಜಿನಿಯರ್ ಹುದ್ದೆಗೆ ನೇಮಕಾತಿ

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ತಾಣದಿಂದ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಆದಾಯ ತೆರಿಗೆಯ ಹೆಚ್ಚುವರಿ ಆಯುಕ್ತರು
ಮುಖ್ಯ ಕಚೇರಿ
ಮೊದಲ ಮಹಡಿ, ಕೊಠಡಿ ಸಂಖ್ಯೆ 14
ಆಯಕಾರ್ ಭವನ್, ಪಿ-7
ಚೌರಿಂಘೀ ಸ್ಕ್ವೇರ್
ಕೊಲ್ಕತ್ತಾ-700069

Additional Commissioner of Income Tax,
Headquarters (Personnel & Establishment),
1st Floor, Room No. 14, Aayakar Bhawan,
P-7, Chowringhee Square, Kolkata-700069.

SIDBI Recruitment 2022 : ಸಣ್ಣ ಕೈಗಾರಿಕೆ ಅಭಿವೃದ್ಧಿ ಬ್ಯಾಂಕ್ ನಿಂದ ಉದ್ಯೋಗ ನೇಮಕಾತಿ

Latest Videos
Follow Us:
Download App:
  • android
  • ios