Asianet Suvarna News Asianet Suvarna News

ಅಂಚೆ ಇಲಾಖೆಯಲ್ಲಿ ನೇಮಕಾತಿ: ವಿದ್ಯಾರ್ಹತೆ 10ನೇ ತರಗತಿ

ಭಾರತೀಯ ಅಂಚೆ ಇಲಾಖೆ 5000ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ ನೋಡಿ..

India Post Recruitment: 5222 Vacancies in Odisha & Tamil Nadu Postal Circle
Author
Bengaluru, First Published Sep 5, 2020, 6:43 PM IST

ನವದೆಹಲಿ, (ಸೆ.05): ಗ್ರಾಮೀಣ ಡಾಕ್ ಸೇವಕ(ಜಿಡಿಎಸ್) ನೇಮಕಾತಿ ಮೂರನೇ ಸುತ್ತಿನ ಪ್ರಕ್ರಿಯೆ ಆರಂಭವಾಗಿದ್ದು, 5222 ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.

  ಒಡಿಶಾ ಅಂಚೆ ವಲಯದಲ್ಲಿ 3162 ಮತ್ತು ತಮಿಳುನಾಡು ಅಂಚೆ ವಲಯದಲ್ಲಿ  2060 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭಾರತೀಯ ಅಂಚೆ ಇಲಾಖೆ ತಿಳಿಸಿದೆ.

ಅರ್ಜಿ ಹಾಕಿದ್ದ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್: 1,40 ಲಕ್ಷ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಶುರು

ನೊಂದಣಿ ಪ್ರಕ್ರಿಯೆ ಎಲ್ಲವೂ ಹಿಂದಿನ ನೇಮಕಾತಿಯಂತೆಯೇ ಇರಲಿದೆ. ಸೆಪ್ಟೆಂಬರ್ 30 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ವಿದ್ಯಾರ್ಹತೆ: 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: 18 ರಿಂದ 40 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಜಾಬ್ಸ್‌ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
 
ಆಯ್ಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. 

ಅರ್ಜಿ ಶುಲ್ಕ: ಅರ್ಜಿ ಶುಲ್ಕವನ್ನು 100 ರೂ ನಿಗದಿಪಡಿಸಲಾಗಿದ್ದು, ಎಸ್‌ಸಿ.ಎಸ್‌ಟಿ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

Follow Us:
Download App:
  • android
  • ios