IARI Recruitment 2022: SSLC ಪಾಸಾದವರನ್ನು ಟೆಕ್ನೀಷಿಯನ್ ಹುದ್ದೆಗಳ ನೇಮಕಾತಿಗೆ ಕರೆದ ಕೃಷಿ ಸಂಶೋಧನಾ ಸಂಸ್ಥೆ

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ಖಾಲಿ ಇರುವ  641  ಟೆಕ್ನೀಷಿಯನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು,  ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನವಾಗಿದೆ.

Indian agriculture research institute recruitment 2022 notification for Technician posts gow

ಬೆಂಗಳೂರು(ಡಿ.5): ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (Indian Agriculture Research Institute) ಖಾಲಿ ಇರುವ ಟೆಕ್ನೀಷಿಯನ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದ್ದು, ಒಟ್ಟು 641 ಟೆಕ್ನಿಷಿಯನ್ (Technician) ಹುದ್ದೆಗಳು ಖಾಲಿ ಇದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು  ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನವಾಗಿದೆ. SSLC ಪಾಸಾದ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಸಕ್ತರು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್​ಸೈಟ್​ iari.res.in ಗೆ ಭೇಟಿ ನೀಡಲು ಕೋರಲಾಗಿದೆ.

ವಿದ್ಯಾರ್ಹತೆ: ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ (IARI) ಕಾಲಿ ಇರುವ ತಂತ್ರಜ್ಞ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್​/ ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ: ಕೃಷಿ ಸಂಶೋಧನಾ ಸಂಸ್ಥೆಯ ತಂತ್ರಜ್ಞ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-30 ವರ್ಷದೊಳಗಿರಬೇಕು. ಸರ್ಕಾರದ ನಿಯಮಾನುಸಾರ ಎಸ್​ಸಿ, ಎಸ್​ಟಿ, ಒಬಿಸಿ, PWD, PH ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ.

DRDO Recruitment 2022: CVRDE ವಿಭಾಗದಲ್ಲಿ ಜೂನಿಯರ್ ರಿಸರ್ಚ್ ಫೆಲೋ ಹುದ್ದೆ

ವರ್ಗಾವಾರು ಮೀಸಲಾಗಿರುವ ಹುದ್ದೆಗಳ ಸಂಖ್ಯೆ ಹೀಗಿದೆ
ಸಾಮಾನ್ಯ ವರ್ಗ -286
ಆರ್ಥಿಕವಾಗಿ ಹಿಂದುಳಿದ ವರ್ಗ -61
ಪರಿಶಿಷ್ಟ ಜಾತಿ -93
ಪರಿಶಿಷ್ಟ ಪಂಗಡ -68
ಇತರೆ ಹಿಂದುಳಿದ ವರ್ಗ (ಎನ್‌ಸಿಎಲ್) -133

ಅರ್ಜಿ ಶುಲ್ಕ: ಕೃಷಿ ಸಂಶೋಧನಾ ಸಂಸ್ಥೆಯ ತಂತ್ರಜ್ಞ  ಹುದ್ದೆಗಳಿಗೆ ಅರ್ಜಿ ಸಲ್ಲಿಸುವ  ಸಾಮಾನ್ಯ/OBC ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕ ಮತ್ತು SC/ST ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆ ಮತ್ತು ವೇತನ: ಕೃಷಿ ಸಂಶೋಧನಾ ಸಂಸ್ಥೆಯ ತಂತ್ರಜ್ಞ  ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು  ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯುತ್ತದೆ ಅದರಲ್ಲಿ ಆಯ್ಕೆಯಾದವರನ್ನು ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ 7ನೇ ವೇತನ ಆಯೋಗದ ಪ್ರಕಾರ ಸಂಬಳ ನೀಡಲಾಗುತ್ತದೆ. ಮತ್ತು ಭಾರತದೆಲ್ಲೆಡೆ ಕೆಲಸ ಮಾಡಬೇಕಾಗುತ್ತದೆ.

ಅರ್ಜಿ ಶುಲ್ಕ: ಸಾಮಾನ್ಯ / ಒಬಿಸಿ / ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ರೂ.1000. ಮತ್ತು ಮಹಿಳಾ / ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.300.

ಆನ್‌ಲೈನ್‌ ಅರ್ಜಿ ಸಲ್ಲಿಸುವ ವೇಳೆ ಅಭ್ಯರ್ಥಿಗಳು ಗರಿಷ್ಠ 5 ನಗರಗಳನ್ನು ಪರೀಕ್ಷೆ ಕೇಂದ್ರಗಳಾಗಿ ಆಯ್ಕೆ ಮಾಡಬಹುದು. ಜನವರಿ 25 ರಿಂದ ಫೆಬ್ರುವರಿ 05 ರವರೆಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯಲಿದೆ. ಅಧಿಸೂಚನೆ ಓದಲು ಈ ಲಿಂಕ್ ಕ್ಲಿಕ್ ಮಾಡಿ  https://cdn.digialm.com//EForms/configuredHtml/1258/74856//Instruction.html 

UPSC CAPF 2020 Final Result: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 2020ನೇ ಸಾಲಿನ ನೇಮಕಾತಿ

ಲ್ಯಾಬ್ ಇನ್‌ ಚಾರ್ಜ್ ಹುದ್ದೆಗೆ ಅರ್ಜಿ ಆಹ್ವಾನಿಸಿದ IIIT Bengaluru: ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (International Institute of Information Technology-IIIT) ಬೆಂಗಳೂರಿನಲ್ಲಿ ಲ್ಯಾಬ್ ಇನ್‌ ಚಾರ್ಜ್ (Lab Incharge) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ opportunities@iiitb.ac.in ವಿಳಾಸಕ್ಕೆ ಈಮೇಲ್ ಮಾಡುವ ಮೂಲಕ ಜನವರಿ 31,2022ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣ https://www.iiitb.ac.in/ ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಬೆಂಗಳೂರು  ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ ನೇಮಕಾತಿಯ ಲ್ಯಾಬ್-ಇನ್‌-ಚಾರ್ಜ್ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಎಲೆಕ್ಟ್ರಾನಿಕ್‌ ನಲ್ಲಿ ಬಿಇ ಅಥವಾ ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

Latest Videos
Follow Us:
Download App:
  • android
  • ios