Indian Army Recruitment 2022: ಕಾನೂನು ಪದವೀಧರರಾಗಿದ್ದರೆ ಭಾರತೀಯ ಸೇನೆಯಲ್ಲಿ ಸುವರ್ಣಾವಕಾಶ

ಭಾರತೀಯ ಸೇನೆಯು ಶಾರ್ಟ್ ಸರ್ವಿಸ್ ಕಮಿಷನ್ ಕೋರ್ಸ್‌ಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಫೆಬ್ರವರಿ 17, 2022 ಆಗಿದೆ.

Indian Army has released a notification regarding the recruitment for  Law Graduates gow

ಬೆಂಗಳೂರು(ಜ.22): ಭಾರತೀಯ ಸೇನೆಯು (Indian Army) ಶಾರ್ಟ್ ಸರ್ವಿಸ್ ಕಮಿಷನ್ ಕೋರ್ಸ್‌ಗೆ (Short Service Commission course) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕಾನೂನು ಪದವೀಧರರಿಗಾಗಿ ಜಡ್ಜ್ ಅಡ್ವೊಕೇಟ್ ಜನರಲ್ ಬ್ರಾಂಚ್  ಪ್ರವೇಶ ಯೋಜನೆಯ 29 ನೇ ಕೋರ್ಸ್‌ನ ನೇಮಕಾತಿ ಕುರಿತು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೋರ್ಸ್‌ಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು joinindianarmy.nic.in ನಲ್ಲಿ ಭಾರತೀಯ ಸೇನೆಯ ಅಧಿಕೃತ ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.   ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಫೆಬ್ರವರಿ 17, 2022 ಆಗಿದೆ.

ಒಟ್ಟು 9 ಹುದ್ದೆಗಳು ಖಾಲಿ ಇದ್ದು, ಇದರಲ್ಲಿ ಪುರುಷ ಅಬ್ಯರ್ಥಿಗಳಿಗೆ 6 ಹುದ್ದೆಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ 3 ಹುದ್ದೆಗಳನ್ನು ಮೀಸಲಿಡಲಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅವಿವಾಹಿತರಾಗಿರಬೇಕೆಂದು ಸ್ಪಷ್ಟವಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಾನೂನು (LLB) ಪದವಿಯಲ್ಲಿ ಕನಿಷ್ಠ 55 ಪ್ರತಿಶತ ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಗಳು ಬಾರ್ ಕೌನ್ಸಿಲ್ ಆಫ್ ಇಂಡಿಯಾ/ ಸ್ಟೇಟ್‌ನಲ್ಲಿ ವಕೀಲರಾಗಿ ನೋಂದಣಿಗೆ ಅರ್ಹರಾಗಿರಬೇಕು. ಅಭ್ಯರ್ಥಿಯು ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಮಾನ್ಯತೆ ಪಡೆದ ಕಾಲೇಜು/ ವಿಶ್ವವಿದ್ಯಾಲಯದಿಂದ ಬಂದವರಾಗಿರಬೇಕು.  ಜುಲೈ 1 2022ಕ್ಕೆ ಅನುಗುಣವಾಗಿ ಅಭ್ಯರ್ಥಿಯ ವಯೋಮಿತಿ 21 ರಿಂದ 27 ವರ್ಷಗಳ ನಡುವೆ ಇರಬೇಕು. 

ಆಯ್ಕೆ ಪ್ರಕ್ರಿಯೆ: ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಆಯ್ಕೆ ಕೇಂದ್ರಗಳಲ್ಲಿ ಎಸ್​​ಎಸ್​​ಬಿಗೆ ಒಳಗಾಗಬೇಕಾಗುತ್ತದೆ. ಅಭ್ಯರ್ಥಿಗಳನ್ನು ಎರಡು ಹಂತಗಳಲ್ಲಿ ಆಯ್ಕೆ ಮಾಡಲಾಗುತ್ತದೆ. ಹಂತ I ಅನ್ನು ಪೂರ್ಣಗೊಳಿಸಿದವರು, ಎರಡನೇ ಹಂತಕ್ಕೆ ಪ್ರವೇಶ ಪಡೆಯುತ್ತಾರೆ. ಎಸ್​ಎಸ್​​ಬಿ ಸಂದರ್ಶನದಲ್ಲಿ ಅಭ್ಯರ್ಥಿಯು ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ.

NTPC Limited Recruitment 2022: ಜನರಲ್ ಸರ್ಜನ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಫ್ಯಾಕಲ್ಟಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರಾಮುವಿ: ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (Karnataka State Open University - KSOU) ಖಾಲಿ ಇರುವ ವಿವಿಧ ಫ್ಯಾಕಲ್ಟಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಒಟ್ಟು 32 ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಆಸಕ್ತರು ಹೆಚ್ಚಿನ ಮಾಹಿತಿಗೆ  https://ksoumysuru.ac.in/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಭೋಧಕರ ಹುದ್ದೆಗೆ ಅರ್ಜಿ  ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​​ನಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಪಿಎಚ್​ಡಿ ಪೂರ್ಣಗೊಳಿಸಿರಬೇಕು.

Sakala Recruitment 2022: ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ನೇಮಕಕ್ಕೆ ಅರ್ಜಿ ಆಹ್ವಾನ

ವಯೋಮಿತಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಭೋಧಕರ ಹುದ್ದೆಗೆ ಅರ್ಜಿ  ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 45 ವರ್ಷದೊಳಗಿರಬೇಕು.

ಆಯ್ಕೆ ಪ್ರಕ್ರಿಯೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಭೋಧಕರ ಹುದ್ದೆಗೆ ಅರ್ಜಿ  ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ದಾಖಲಾತಿ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.

UAS Raichur Recruitment 2022: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ

Latest Videos
Follow Us:
Download App:
  • android
  • ios