ಬೆಂಗಳೂರು, (ಮೇ.14): ಭಾರತೀಯ ಸೇನಾ ನೇಮಕಾತಿ 100 ( ಮಹಿಳಾ ಮಿಲಿಟರಿ ಪೊಲೀಸ್) ಸೈನಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಭಾರತೀಯ ಸೇನೆಯಲ್ಲಿ ಮಹಿಳಾ ಅಭ್ಯರ್ಥಿಗಳನ್ನು ಜನರಲ್ ಡ್ಯೂಟಿ ಹುದ್ದೆಗಳಿಗೆ ಭರ್ತಿ ಮಾಡಲು ಲಕ್ನೋ, ಜಬಲ್‌ಪುರ್, ಬೆಂಗಳೂರು ಮತ್ತು ಶಿಲ್ಲಾಂಗ್ ಗಳಲ್ಲಿ ರ್ಯಾಲಿ ನಡೆಸಲಾಗುತ್ತಿದೆ.

ಕೆಲಸ ಬಿಡುವ ಸಮಯದಲ್ಲಿ ಈ ತಪ್ಪುಗಳನ್ನು ಮಾಡಬೇಡಿ....

 ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ರ್ಯಾಲಿಯಲ್ಲಿ ಭಾಗವಹಿಸಲು ಆನ್‌ಲೈನ್‌ನಲ್ಲಿ ಜೂನ್ 8,2019 ರೊಳಗೆ ರಿಜಿಸ್ಟರ್ ಮಾಡಿಕೊಳ್ಳಬೇಕು.

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಮೆಟ್ರಿಕ್ / 10ನೇ ತರಗತಿ ಅಥವಾ ಸಮನಾದ ವಿದ್ಯಾರ್ಹತೆಯನ್ನು ಶೇ45% ರಷ್ಟು ಅಂಕಗಳೊಂದಿಗೆ , ಪ್ರತಿ ವಿಷಯದಲ್ಲಿ ಕನಿಷ್ಟ 33% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಟ 17 1/2 ವರ್ಷ ದಿಂದ ಗರಿಷ್ಟ 21 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ / ವೈದ್ಯಕೀಯ ಪರೀಕ್ಷೆ / ಫಿಸಿಕಲ್ ಫಿಟ್ನೆಸ್ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಕೊಳ್ಳಬೇಕಕಿದ್ದಲ್ಲಿ ಕಚೇರಿಯ ಅಧಿಕೃತ ವೆಬ್‌ಸೈಟ್‌ ಗಾಗಿ ಇಲ್ಲಿ ಕ್ಲಿಕ್ ಮಾಡಿ.