ಭಾರತೀಯ ಸೇನೆಯಲ್ಲಿ ನೇಮಕಾತಿ: ಆರ್ಮಿ ಸೇರುವವರಿಗೆ ಇದು ಸುವರ್ಣಾವಕಾಶ

ಆರ್ಮಿ ಸೇರುವವರಿಗೆ ಸುವರ್ಣಾವಕಾಶ. ಭಾರತೀಯ ಸೇನೆ ವಿಶೇಷ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.
 

indian army recruitment 2020 Apply for 55 ssc officer posts

ನವದೆಹಲಿ, (ಜ.15): ಭಾರತೀಯ ಸೇನೆಯು ಎನ್‌ಸಿಸಿ ವಿಶೇ‍ಷ ಪ್ರವೇಶ ಸ್ಕೀಮ್ ಮೂಲಕ ಒಟ್ಟು 55 SSC ಅಧಿಕಾರಿ ಹುದ್ದೆಗಳ ಭರ್ತಿಗೆ  ಆಹ್ವಾನಿಸಲಾಗಿದೆ.

ಅವಿವಾಹಿತ ಪುರುಷ ಮತ್ತು ಮಹಿಳಾ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 2,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸ್ವಯಂ ಉದ್ಯೋಗಕ್ಕಾಗಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ವಿದ್ಯಾರ್ಹತೆ: ಭಾರತೀಯ ಸೇನೆ ನೇಮಕಾತಿಯ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಶೇ.50%ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ/ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಉತ್ತೀರ್ಣರಾಗಿರಬೇಕು. 

ವಯೋಮಿತಿ: ಜುಲೈ 1,2020ರ ಅನ್ವಯ ಕನಿಷ್ಟ 19 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ( ಜುಲೈ 2,1995ರ ಮುಂಚೆ ಮತ್ತು ಜುಲೈ 1,2001ರ ನಂತರ ಜನಿಸಿರಬಾರದು) ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

ಜಾಬ್ಸ್‌ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

 ವೇತನ  ಶ್ರೇಣಿ: ಭಾರತೀಯ ಸೇನೆ ನೇಮಕಾತಿಯ ಎಸ್‌ಎಸ್‌ಸಿ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 56,100 ರಿಂದ 2,50,000 ರೂ. ತಿಂಗಳಿಗೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಪ್ರ  ಮಾಡಲಾಗುವುದು. 

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ http://joinindianarmy.nic.in/Default.aspx?id=5&lg=eng& ಗೆ ಭೇಟಿ ನೀಡಿ. 

Latest Videos
Follow Us:
Download App:
  • android
  • ios