ಭಾರತೀಯ ಸೇನಾ ನೇಮಕಾತಿ 2021 : ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಎದುರು ನೋಡುತ್ತಿರುವವರಿಗೆ ಸುವರ್ಣಾವಕಾಶವಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ನವದೆಹಲಿ, (ಫೆ.06): ಭಾರತೀಯ ಸೇನೆಯ ತಾಂತ್ರಿಕ ಪ್ರವೇಶ ಯೋಜನೆ (ಟಿಇಎಸ್)ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
90 ಖಾಲಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಜಿ ಪ್ರಕ್ರಿಯೆಯು ಫೆಬ್ರವರಿ 1 ರಿಂದ ಪ್ರಾರಂಭವಾಗಿದೆ. ಇನ್ನು ಮಾರ್ಚ್ 2 ರ ವರೆಗೆ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ.
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಹತೆ: ಪಿಸಿಎಂ (ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತ) ವಿಷಯಗಳೊಂದಿಗೆ 10 + 2 ಪರೀಕ್ಷೆಯಲ್ಲಿ (12ನೇ ತರಗತಿ) ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ನೇಮಕಾತಿ ಪ್ರಕ್ರಿಯೆಯ ಮೂಲಕ ಆಯ್ಕೆಯಾಗುವ ಅಭ್ಯರ್ಥಿಗಳು ನಾಲ್ಕು ವರ್ಷಗಳ ಕಾಲ ಮಿಲಿಟರಿ ತರಬೇತಿಯ ಹಾಗೂ ತಾಂತ್ರಿಕ ತರಬೇತಿಯ ನಂತರ ಸೇನೆಗೆ ಸೇರಲಿದ್ದಾರೆ.
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ : joinindianarmy.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 6, 2021, 3:45 PM IST