Indian Navy MR Recruitment 2022: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರರು ನೇಮಕಾತಿ
ಭಾರತೀಯ ನೌಕಾಪಡೆಯ ಎಮ್‌ಆರ್ ನೇಮಕಾತಿ 2022 ರ ಕುರಿತು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಒಟ್ಟು 100 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು ಅರ್ಜಿ ಸಲ್ಲಿಸಲು ಡಿಸೆಂಬರ್ 17 ಕೊನೆಯ ದಿನವಾಗಿದೆ.
ಬೆಂಗಳೂರು (ಡಿ.9): ಭಾರತೀಯ ನೌಕಾಪಡೆಯ ಎಮ್‌ಆರ್ ನೇಮಕಾತಿ 2022 ರ ಕುರಿತು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈಗ ನೀವು ನೌಕಾಪಡೆಯ ಎಮ್‌ಆರ್ ನೇಮಕಾತಿ 2022 ರ ಅಡಿಯಲ್ಲಿ ನಿಮ್ಮ ಆನ್‌ಲೈನ್ ಅರ್ಜಿಯನ್ನು ಸಲ್ಲಿಬಹುದು ವಯಸ್ಸಿನ ಮಿತಿ ಶೈಕ್ಷಣಿಕ ಅರ್ಹತೆ ಮತ್ತು ಎಲ್ಲಾ ಇತರ ಎಲ್ಲಾ ಅಗತ್ಯ ಅರ್ಹತೆಗಳು ಮತ್ತು ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣ https://www.joinindiannavy.gov.in/ ಗೆ ಭೇಟಿ ನೀಡಬಹುದು. ಒಟ್ಟು 100 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 17 ಕೊನೆಯ ದಿನವಾಗಿದೆ.
ಒಟ್ಟು ಹುದ್ದೆಗಳ ಮಾಹಿತಿ ಇಂತಿದೆ
ಮಹಿಳೆಯರಿಗೆ- 20 ಹುದ್ದೆಗಳು
ಪುರುಷರಿಗೆ- 80 ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಪಡೆದಿರಬೇಕು. ಅದರಂತೆ ಮೆಟ್ರಿಕ್ಯುಲೇಷನ್ ಪರೀಕ್ಷೆಯನ್ನು ಅಥವಾ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 1, 2002 ಮತ್ತು ಅಕ್ಟೋಬರ್ 31, 2005 ರ ನಡುವೆ ಹುಟ್ಟಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪರೀಕ್ಷಾ ಶುಲ್ಕ: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವಾಗಿ ರೂ. 550 ಪಾವತಿಸಬೇಕಾಗುತ್ತದೆ. ಶುಲ್ಕವನ್ನು ಪಾವತಿಸಿದ ಅಭ್ಯರ್ಥಿಗಳಿಗೆ ಮಾತ್ರ ಪರೀಕ್ಷಾ ಪ್ರವೇಶ ಕಾರ್ಡ್‌ಗಳು ದೊರೆಯುತ್ತದೆ.
BEL Recruitment 2022: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ
ಆಯ್ಕೆ ಪ್ರಕ್ರಿಯೆ: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಆನ್‌ಲೈನ್ ಪರೀಕ್ಷೆ ನಡೆಸಿ ಶಾರ್ಟ್‌ಲಿಸ್ಟಿಂಗ್ ಮಾಡಲಾಗುತ್ತದೆ. ಬಳಿಕ ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
SOUTHERN RAILWAY RECRUITMENT 2022: ವಿವಿಧ 21 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ದಕ್ಷಿಣ ರೈಲ್ವೆ
ವೇತನ ವಿವರ: ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ 30 ಸಾವಿರ ರೂ. ನೀಡಲಾಗುತ್ತದೆ. ಇದರ ಜೊತೆಗೆ ಭತ್ಯೆಗಳು ಕೂಡ ಇರಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.