Asianet Suvarna News Asianet Suvarna News

2700 ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ: PUC ಮುಗಿಸಿದವರು ಅರ್ಜಿ ಹಾಕ್ಬಹುದು

2700 ನಾವಿಕ ಹುದ್ದೆ ನೇಮಕಾತಿಗೆ ಭಾರತೀಯ ನೌಕಾಪಡೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

Indian navy recruitment 2019 Apply for 2700 sailor posts
Author
Bengaluru, First Published Nov 5, 2019, 2:46 PM IST

ಬೆಂಗಳೂರು, (ನ.05): ಭಾರತೀಯ ನೌಕಾಪಡೆಯು 2700 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 18,2019ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: 10+2/ ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 

ವಯೋಮಿತಿ: ಆಗಸ್ಟ್ 1,2000 ರಿಂದ ಜುಲೈ 31,2003ರ ನಡುವೆ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

ವೇತನ ಶ್ರೇಣಿ: ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700 ರಿಂದ 69,100 ರೂ ವೇತನ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ದೈಹಿಕ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. 

ಅರ್ಜಿ ಶುಲ್ಕ:  ಸಾಮಾನ್ಯ ಅಭ್ಯರ್ಥಿಗಳು 215 ರೂ.  ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us:
Download App:
  • android
  • ios