Indian Navy Tradesman Recruitment 2022: ನೌಕಾದಳದಲ್ಲಿ ಟ್ರೇಡ್ಸ್‌ಮ್ಯಾನ್ ಸ್ಕಿಲ್ಡ್ ಹುದ್ದೆಗೆ ಅರ್ಜಿ ಆಹ್ವಾನ

ಭಾರತೀಯ ನೌಕಾಸೇನೆಯಲ್ಲಿ ಖಾಲಿ ಇರುವ ಟ್ರೇಡ್ಸ್‌ಮ್ಯಾನ್ ಸ್ಕಿಲ್ಡ್ ಹುದ್ದೆಗೆ  ಅರ್ಜಿ ಆಹ್ವಾನಿಸಿದ್ದು, ಮಾರ್ಚ್​​ 5 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

Indian Navy Recruitment 2022 notification for Tradesman Skilled posts gow

ಬೆಂಗಳೂರು(ಫೆ.18): ಭಾರತೀಯ ನೌಕಾಸೇನೆಯಲ್ಲಿ (Indian Navy) ಖಾಲಿ ಇರುವ ವಿವಿಧ ಹುದ್ದೆಗಳಿಗೆ  ಅಧಿಸೂಚನೆ ಹೊರಡಿಲಾಗಿದೆ. ನೌಕಾಸೇನೆಯು ತನ್ನ ವಿವಿಧ ಪ್ರಧಾನ ಕಛೇರಿಗಳ ಆಡಳಿತಾತ್ಮಕ ನಿಯಂತ್ರಣದಲ್ಲಿ ಖಾಲಿ ಇರುವ ಒಟ್ಟು 1531 ಟ್ರೇಡ್ಸ್‌ಮ್ಯಾನ್ ಸ್ಕಿಲ್ಡ್ (Tradesman Skilled) ಹುದ್ದೆಗೆ  ಅರ್ಜಿ ಆಹ್ವಾನಿಸಿದ್ದು,  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಫೆಬ್ರವರಿ 19ರಿಂದ  ಮಾರ್ಚ್​​ 5ರೊಳಗೆ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಆಸಕ್ತರು  ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್​ಸೈಟ್ https://www.indiannavy.nic.in/ ಗೆ  ಅಥವಾ https://www.joinindiannavy.gov.in/en ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ನೌಕಾಸೇನೆಯ ವಿವಿಧ ಪ್ರಧಾನ ಕಛೇರಿಗಳ ಆಡಳಿತಾತ್ಮಕ ನಿಯಂತ್ರಣದಲ್ಲಿ ಖಾಲಿ ಇರುವ ಟ್ರೇಡ್ಸ್​​ಮ್ಯಾನ್​ ಗ್ರೂಪ್​ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಕಡ್ಡಾಯವಾಗಿ 10ನೇ ತರಗತಿ/ಐಟಿಐ ಉತ್ತೀರ್ಣರಾಗಿರಬೇಕು. ಅಥವಾ ಸಂಬಂಧಪಟ್ಟ ಟ್ರೇಡ್‌ನಲ್ಲಿ ಅಪ್ರೆಂಟಿಸ್ ತರಬೇತಿಯನ್ನು ಪೂರ್ಣಗೊಳಿಸಿರಬೇಕು. 

ವಯೋಮಿತಿ: ಭಾರತೀಯ ನೌಕಾಸೇನೆಯ ವಿವಿಧ ಪ್ರಧಾನ ಕಛೇರಿಗಳ ಆಡಳಿತಾತ್ಮಕ ನಿಯಂತ್ರಣದಲ್ಲಿ ಖಾಲಿ ಇರುವ ಟ್ರೇಡ್ಸ್​​ಮ್ಯಾನ್​ ಗ್ರೂಪ್​ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು 18 ರಿಂದ 25 ವರ್ಷದೊಳಗಿರಬೇಕು. ಸರಕಾರದ ನಿಯಮಗಳ ಪ್ರಕಾರ SC/ST ಅಭ್ಯರ್ಥಿಗಳಿಗೆ 5 ವರ್ಷ, OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

INDIAN COAST GUARD RECRUITMENT 2022: ವಿವಿಧ ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ: ಭಾರತೀಯ ನೌಕಾಸೇನೆಯ ವಿವಿಧ ಪ್ರಧಾನ ಕಛೇರಿಗಳ ಆಡಳಿತಾತ್ಮಕ ನಿಯಂತ್ರಣದಲ್ಲಿ ಖಾಲಿ ಇರುವ ಟ್ರೇಡ್ಸ್​​ಮ್ಯಾನ್​ ಗ್ರೂಪ್​ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು  ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನ ವಿವರ: ಭಾರತೀಯ ನೌಕಾಸೇನೆಯ ವಿವಿಧ ಪ್ರಧಾನ ಕಛೇರಿಗಳ ಆಡಳಿತಾತ್ಮಕ ನಿಯಂತ್ರಣದಲ್ಲಿ ಖಾಲಿ ಇರುವ ಟ್ರೇಡ್ಸ್​​ಮ್ಯಾನ್​ ಗ್ರೂಪ್​ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗನುಸಾರವಾಗಿ ಮಾಸಿಕ 19,900 ರಿಂದ 63,200 ರೂ ವರೆಗೆ  ವೇತನ ದೊರೆಯಲಿದೆ.

ಉದ್ಯೋಗ ಸ್ಥಳ: ಭಾರತೀಯ ನೌಕಾಸೇನೆಯ ವಿವಿಧ ಪ್ರಧಾನ ಕಛೇರಿಗಳ ಆಡಳಿತಾತ್ಮಕ ನಿಯಂತ್ರಣದಲ್ಲಿ ಖಾಲಿ ಇರುವ ಟ್ರೇಡ್ಸ್​​ಮ್ಯಾನ್​ ಗ್ರೂಪ್​ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿ ಬೇಕಾದರೂ ಕೆಲಸ ಮಾಡಲು ತಯಾರಿರಬೇಕು.

Land Surveyor Recruitment 2022: ಪರವಾನಗಿ ಭೂಮಾಪಕರ ನೇಮಕಾತಿಗೆ ಮತ್ತೊಮ್ಮೆ ದಿನಾಂಕ ವಿಸ್ತರಣೆ, 1 ದಿನವಷ್ಟೇ ಬಾಕಿ

ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಉದ್ಯೋಗವಕಾಶ: ಭಾರತೀಯ ಕರಾವಳಿ ಭದ್ರತಾಪಡೆ (Indian Coast Guard - ICG) ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಒಟ್ಟು  65  ಸಹಾಯಕ ಕಮಾಂಡೆಂಟ್ ಹುದ್ದೆಗಳು ಖಾಲಿ ಇದ್ದು, ತ್ವರಿತವಾಗಿ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು  ಅಧಿಸೂಚನೆ ಹೊರಡಿಸಿದೆ.   ಫೆಬ್ರವರಿ 18 ರಿಂದ  ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 28 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ joinindiancoastguard.gov.in ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ಕರಾವಳಿ ಭದ್ರತಾಪಡೆಯಲ್ಲಿ ಖಾಲಿ ಇರುವ ಸಹಾಯಕ ಕಮಾಂಡೆಂಟ್ (Assistant Commandant) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹುದ್ದೆಗೆ ಅನುಗುಣವಾಗಿ ಗಣಿತ (Mathematics), ಭೌತಶಾಸ್ತ್ರ (Physics ), ಇಂಜಿನಿಯರಿಂಗ್ ನಲ್ಲಿ ನೇವಲ್ ಆರ್ಕಿಟೆಕ್ಚರ್ (Naval Architecture ), ಮೆಕ್ಯಾನಿಕಲ್ (Mechanical), ಮೆರಿನ್ (Marine), ಆಟೋಮೋಟಿವ್ (Automotive), ಲೋಹಶಾಸ್ತ್ರ (Mechatronics), ಏರೋಸ್ಪೇಸ್ (Aerospace) ಕಲಿತಿರಬೇಕು.

Latest Videos
Follow Us:
Download App:
  • android
  • ios