ನವದೆಹಲಿ, (ಮಾ.18):ಭಾರತೀಯ ರೈಲ್ವೆ ನೇಮಕಾತಿ ಸೆಲ್(ಆರ್‌ಆರ್‌ಸಿ) ನಲ್ಲಿ ಖಾಲಿ ಇರುವ 1,03,769 ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 

12.03.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 12.04.2019 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ನೇಮಕಾತಿ: ಅರ್ಜಿ ಹಾಕಿ

ವಿದ್ಯಾರ್ಹತೆ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಐಟಿಐಯಲ್ಲಿ ಎನ್ ಸಿ ವಿ ಟಿ /ಎಸ್ ಸಿ ವಿ ಟಿ ಅಥವಾ ರಾಷ್ಟ್ರೀಯ ಅಪ್ರೆಂಟಿಶಿಪ್ ಸರ್ಟಿಫಿಕೇಟ್ (ಎನ್ ಎ ಸಿ) ಮಾನ್ಯತೆ ಪಡೆದ ಸಂಸ್ಥೆಯಿಂದ ಗುರುತಿಸಲ್ಪಟ್ಟ ಐಟಿಐ ವಿದ್ಯಾರ್ಹತೆ ಪಡೆದಿರಬೇಕು.

ವಯೋಮಿತಿ:18 ರಿಂದ 33 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. 

ಅರ್ಜಿ ಶುಲ್ಕ: ಎಸ್ಸಿ / ಎಸ್ಟಿ / ಮಹಿಳಾ / ಮಾಜಿ ಸರ್ಕಾರಿ / ಅಲ್ಪಸಂಖ್ಯಾತರು / ಆರ್ಥಿಕ ಹಿಂದುಳಿದ ವರ್ಗಗಳಿಗೆ ರೂ. 250 / –ಇತರೆ ಅಭ್ಯರ್ಥಿಗಳಿಗೆ ರೂ. 500  ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ: ಕಂಪ್ಯೂಟರ್ ಆಧಾರಿತ ಮತ್ತು ದೈಹಿಕ ಪರೀಕ್ಷೆಯ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. 

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.