Asianet Suvarna News Asianet Suvarna News

IRFC Recruitment 2022: ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಹಣಕಾಸು ನಿಗಮ  ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 28 ಆಗಿದೆ.

IRFC recruitment 2022 notification for Hindi Translator and Assistant Posts gow
Author
Bengaluru, First Published Jan 8, 2022, 2:54 PM IST
  • Facebook
  • Twitter
  • Whatsapp

ನವದೆಹಲಿ(ಜ.8): ಭಾರತೀಯ ರೈಲ್ವೆ ಹಣಕಾಸು ನಿಗಮ (Indian Railway Finance Corporation Limited -IRFC) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಿಂದಿ ಅನುವಾದಕ, ಅಸಿಸ್ಟೆಂಟ್(ಫೈನಾನ್ಸ್​), ಅಸಿಸ್ಟೆಂಟ್ (ಅಡ್ಮಿನಿಸ್ಟ್ರೇಷನ್) ಸೇರಿ ಒಟ್ಟು 4 ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.  ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 28 ಆಗಿದೆ.  ಈಶಾನ್ಯ, ಜಮ್ಮು ಮತ್ತು ಕಾಶ್ಮೀರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಲಕ್ಷದ್ವೀಪದ ಅಭ್ಯರ್ಥಿಗಳಿಗೆ ಫೆಬ್ರವರಿ 1 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ಒಟ್ಟು 4 ಹುದ್ದೆಗಳ ಮಾಹಿತಿ ಇಂತಿದೆ:
ಹಿಂದಿ ಅನುವಾದಕ- 01
ಸಹಾಯಕ (ಫೈನಾನ್ಸ್​)-02
ಸಹಾಯಕ (ಅಡ್ಮಿನಿಸ್ಟ್ರೇಷನ್)-01

ವಿದ್ಯಾರ್ಹತೆ:
ಹಿಂದಿ ಅನುವಾದಕ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಬೋರ್ಡ್​ನಿಂದ ಕಡ್ಡಾಯವಾಗಿ ಇಂಗ್ಲಿಷ್​ ಜೊತೆಗೆ ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಖಾಲಿ ಇರುವ ಎರಡು ಸಹಾಯಕ (ಫೈನಾನ್ಸ್​) ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ವಾಣಿಜ್ಯ ವಿಭಾಗದಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರಬೇಕು.
ಸಹಾಯಕ (ಅಡ್ಮಿನಿಸ್ಟ್ರೇಷನ್): ಯಾವುದೇ ವಿಷಯದಲ್ಲಿ ಶೇ.55ರಷ್ಟು ಅಂಕಗಳೊಂದಿಗೆ ಪದವಿ ಪಡೆದಿರಬೇಕು.

ವೇತನ ವಿವರ:
ಹಿಂದಿ ಅನುವಾದಕ-  ತಿಂಗಳಿಗೆ 21,000-74,000 ರೂ
ಅಸಿಸ್ಟೆಂಟ್ (ಫೈನಾನ್ಸ್​)-ತಿಂಗಳಿಗೆ  21,000-74,000 ರೂ
ಅಸಿಸ್ಟೆಂಟ್ (ಅಡ್ಮಿನಿಸ್ಟ್ರೇಷನ್)-ತಿಂಗಳಿಗೆ  21,000-74,000 ರೂ

ಆಯ್ಕೆ ಪ್ರಕ್ರಿಯೆ: ಭಾರತೀಯ ರೈಲ್ವೆ ಹಣಕಾಸು ನಿಗಮದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.  ಆಯ್ಕೆಯಾದವರು ನವದೆಹಲಿಯಲ್ಲಿ ಕೆಲಸ ಮಾಡಬೇಕಾಗುತ್ತದೆ.

CESCOM 2019 SELECTION RESULT: ಜೂನಿಯರ್ ಪವರ್‌ಮ್ಯಾನ್‌ ಹುದ್ದೆಗಳಿಗೆ ಆಯ್ಕೆಯಾದವರ ಪಟ್ಟಿ ಬಿಡುಗಡೆ

ಸ್ಪೋರ್ಟ್ಸ್​ ಕೋಟಾದಡಿ ಖಾಲಿ ಹುದ್ದೆಗಳ ಭರ್ತಿಗೆ ಮುಂದಾದ ಆಗ್ನೇಯ ರೈಲ್ವೆ: ರೈಲ್ವೆ ಇಲಾಖೆ ಸೇರಲು ಬಯಸುವವರಿಗೆ ಸುವರ್ಣಾವಕಾಶವೊಂದು ಒಲಿದು ಬಂದಿದೆ. ಆಗ್ನೇಯ ರೈಲ್ವೆ(South Eastern Railway) ಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಸ್ಪೋರ್ಟ್ಸ್​ ಕೋಟಾ (Sports Quota) ಆಧಾರದಲ್ಲಿ ಒಟ್ಟು 21 ಸ್ಪೋರ್ಟ್ಸ್​ ಪರ್ಸನ್ ಹುದ್ದೆಗಳಿಗೆ   ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್​ (Online) ಮೂಲಕ ಅರ್ಜಿ ಸಲ್ಲಿಸಬೇಕು. ಜನವರಿ 3ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 2, 2022. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ತಾಣ https://www.rrcser.co.in/ ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಆಗ್ನೇಯ ರೈಲ್ವೆ ನೇಮಕಾತಿಯ ಸ್ಪೋರ್ಟ್ಸ್​ ಕೋಟಾ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್​ನಿಂದ ಕಡ್ಡಾಯವಾಗಿ 10ನೇ ತರಗತಿ, 12 ನೇ ತರಗತಿ, ಐಟಿಐ ಪೂರ್ಣಗೊಳಿಸಿರಬೇಕು. ಮತ್ತು ರಾಜ್ಯ ರಾಷ್ಟ್ರ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯ ಪ್ರಮಾಣ ಪತ್ರ ಹೊಂದಿರಬೇಕು.

HAL Recruitment 2022: ಬೆಂಗಳೂರಿನಲ್ಲಿ ಪ್ರಿನ್ಸಿಪಾಲ್ ಹುದ್ದೆಗೆ ಅರ್ಜಿ ಆಹ್ವಾನಿಸಿದ HAL

ವಯೋಮಿತಿ: ಆಗ್ನೇಯ ರೈಲ್ವೆ ನೇಮಕಾತಿಯ ಸ್ಪೋರ್ಟ್ಸ್​ ಕೋಟಾ ಸ್ಪೋರ್ಟ್ಸ್​ ಪರ್ಸನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಜನವರಿ 1, 2022ಕ್ಕೆ 18-25 ವರ್ಷದೊಳಗಿರಬೇಕು. ವರ್ಗಗಳ ಆಧಾರದಲ್ಲಿ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ: ಆಗ್ನೇಯ ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು  ಸ್ವೀಕೃತ ಅರ್ಜಿಯ ಆಧಾರದಲ್ಲಿ ಶಾರ್ಟ್​​ಲಿಸ್ಟಿಂಗ್ ಮಾಡಿ, ಕ್ರೀಡಾ ಪ್ರಯೋಗಗಳು, ಕ್ರೀಡಾ ಸಾಧನೆ ಮತ್ತು ಶೈಕ್ಷಣಿಕ ಅರ್ಹತೆಯ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಕರ್ನಾಟಕದಲ್ಲಿ  ಉದ್ಯೋಗ ದೊರೆಯಲಿದೆ.  

Follow Us:
Download App:
  • android
  • ios