ನವದೆಹಲಿ, (ಜುಲೈ.08): ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್​​​​ನಲ್ಲಿ ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 51 ಹುದ್ದೆಗಳಿಗೆ ಕ್ರೀಡಾ ಕೋಟಾದಡಿ ನೇಮಕಾತಿ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ITBP ಯ ಅಧಿಕೃತ ವೆಬ್​ಸೈಟ್ ಮೂಲಕ itbpolice.nic.in ನಲ್ಲಿ ಆನ್‌ಲೈನ್‌ನಲ್ಲಿ ಜುಲೈ 13 ರಿಂದ ಆಗಸ್ಟ್ 26 ರವರೆಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಜಾಬ್ಸ್‌ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಹತೆ: ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ / ತತ್ಸಮಾನ ಶಿಕ್ಷಣ ಪೂರ್ಣಗೊಳಿಸಿರಬೇಕು.

ವಯೋಮಿತಿ:  18 ರಿಂದ 23 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. 

ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳಿಗೆ 100 ರೂ. SC/ST ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ. 

ಡೆಬಿಟ್ ಕಾರ್ಡ್‌/ ಕ್ರೆಡಿಟ್ ಕಾರ್ಡ್‌/ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಹೆಚ್ಚಿನ ವಿವರಗಳಿಗೆ ಐಟಿಬಿಪಿ ಅಧಿಕೃತ ಸೈಟ್‌ https://www.itbpolice.nic.in ಗೆ ಭೇಟಿ ನೀಡಬಹುದು.