Asianet Suvarna News Asianet Suvarna News

JSSB Recruitment 2022: ಖಾಲಿ ಇರುವ 294 ಹುದ್ದೆಗಳ ಭರ್ತಿಗೆ ನೇಮಕಾತಿ

ಜೂನಿಯರ್ ಸ್ಟಾಫ್ ಸೆಲೆಕ್ಷನ್ ಬೋರ್ಡ್  ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಎಪ್ರಿಲ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 

JSSB Recruitment 2022 notification for various posts gow
Author
Bengaluru, First Published Apr 7, 2022, 12:59 PM IST

ಬೆಂಗಳೂರು(ಎ.7): ಕಿರಿಯ ಸಿಬ್ಬಂದಿ ಆಯ್ಕೆ ಮಂಡಳಿ  (junior staff selection board - JSSB) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಗ್ರೇಡ್ 4 ರ ಅಡಿಯಲ್ಲಿ ವಾರ್ಡ್ ಬಾಯ್/ ಆಯಾ, ಓಟಿ ಅಟೆಂಡೆಂಟ್, ಒಪಿಡಿ ಅಟೆಂಡೆಂಟ್, ಅಟೆಂಡೆಂಟ್ ಎನ್‌ಆರ್‌ಸಿ, ಪ್ಯೂನ್, ಚೌಕಿದಾರ್, ಸ್ವೀಪರ್, ಧೋಬಿ, ಅಡುಗೆಯವರು, ಮೆಸ್ ಸೇವಕರು ಹೀಗೆ ಒಟ್ಟು 294 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು  ಎಪ್ರಿಲ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. 

ಒಟ್ಟು 294 ಹುದ್ದೆಗಳ ಮಾಹಿತಿ ಇಲ್ಲಿದೆ
ವಾರ್ಡ್ ಬಾಯ್/ ಆಯಾ – 211 ಹುದ್ದೆಗಳು
ಒಟಿ ಅಟೆಂಡೆಂಟ್ – 15
ಹುದ್ದೆಗಳು ಒಪಿಡಿ ಅಟೆಂಡೆಂಟ್ – 6 ಹುದ್ದೆಗಳು
ಅಟೆಂಡೆಂಟ್ ಎನ್ ಆರ್ ಸಿ – 1 ಹುದ್ದೆಗಳು
ಪ್ಯೂನ್ – 20 ಹುದ್ದೆಗಳು
ಕಾವಲುಗಾರ – 15 ಹುದ್ದೆಗಳು
ಸ್ವೀಪರ್ – 11 ಹುದ್ದೆಗಳು
ವಾಷರ್ – 4 ಹುದ್ದೆಗಳು
ಅಡುಗೆಯವರು – 7 ಹುದ್ದೆಗಳು
ಮೆಸ್ ಸೇವಕ - 2 ಹುದ್ದೆಗಳು

ಶೈಕ್ಷಣಿಕ ವಿದ್ಯಾರ್ಹತೆ: ಕಿರಿಯ ಸಿಬ್ಬಂದಿ ಆಯ್ಕೆ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮತ್ತು ಸಂಸ್ಥೆಯಿಂದ  8ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ: ಕಿರಿಯ ಸಿಬ್ಬಂದಿ ಆಯ್ಕೆ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷವಾಗಿರಬೇಕು. 

ಅರ್ಜಿ ಶುಲ್ಕ: ಕಿರಿಯ ಸಿಬ್ಬಂದಿ ಆಯ್ಕೆ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹250, OBC ಅಭ್ಯರ್ಥಿಗಳು ₹200 ಮತ್ತು SC / ST ಅಭ್ಯರ್ಥಿಗಳು  ₹150

Kannadaprabha Recruitment 2022: ವೃತ್ತಿಪರರಿಗೆ ಕನ್ನಡಪ್ರಭ ದಿನ ಪತ್ರಿಕೆ ಅರ್ಜಿ ಆಹ್ವಾನ  

ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ: ರಾಷ್ಟ್ರೀಯ ಶಿಕ್ಷಣ ನೀತಿಯ (National Education Policy) ಅಡಿ ಎಲ್ಲಾ ವಿದ್ಯಾರ್ಥಿಗಳಿಗೂ ಕನ್ನಡ (Kannada) ಕಲಿಕೆಯನ್ನ ರಾಜ್ಯ ಸರ್ಕಾರ (Karnataka Government) ಕಡ್ಡಾಯಗೊಳಿಸಿತ್ತು. ಆದರೆ ಇದಕ್ಕೆ ತದ್ವಿರುದ್ಧವಾಗಿ, ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರವು ಹೈಕೋರ್ಟ್ ಗೆ ಪ್ರಮಾಣಪತ್ರ ಸಲ್ಲಿಸಿತ್ತು. ಹಾಗಾಗಿ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ (Karnataka High court) ಒಪ್ಪಿಗೆ ನೀಡಲು ನಿರಾಕರಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯಡಿ(National Education Policy) ಪ್ರಾದೇಶಿಕ ಭಾಷೆ ಕಲಿಕೆ ಕಡ್ಡಾಯಗೊಳಿಸಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿರುವುದರಿಂದ ಪದವಿ(Degree) ಹಂತದ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2021ರ ಆ.7 ಹಾಗೂ ಸೆ.15ರಂದು ಹೊರಡಿಸಿರುವ ಆದೇಶ ಜಾರಿಗೆ ತಡೆಯಾಜ್ಞೆ ನೀಡಲಾಗುತ್ತಿದೆ’ ಎಂದು ನ್ಯಾಯಪೀಠ ತಿಳಿಸಿ ವಿಚಾರಣೆ ಮುಂದೂಡಿತು.

Bengaluru University ಪರೀಕ್ಷೆ ಎಡವಟ್ಟಿನಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಬೆಂಗಳೂರು

‘ರಾಷ್ಟ್ರೀಯ ಶಿಕ್ಷಣ ನೀತಿಯಡಿ ಪ್ರಾದೇಶಿಕ ಭಾಷೆಗಳನ್ನು ಕಡ್ಡಾಯ ಮಾಡಿಲ್ಲ ಎಂದು ಕೇಂದ್ರ ಸರ್ಕಾರ(Central Government) ಸ್ಪಷ್ಟಪಡಿಸಿದೆ. ಹೀಗಿರುವಾಗ ಹೊರಗಿನಿಂದ ಬಂದ ವಿದ್ಯಾರ್ಥಿಗಳ ಮೇಲೆ ಕನ್ನಡ ಭಾಷೆ ಕಲಿಕೆಯನ್ನು ಏಕೆ ಹೇರುತ್ತೀರಿ? ಉದ್ಯೋಗ(Job) ಪಡೆಯಲು ಕನ್ನಡ ಕಲಿಯುವಂತೆ ಷರತ್ತು ವಿಧಿಸಿ. ಆದರೆ, ಶಿಕ್ಷಣದಲ್ಲಿ ಕನ್ನಡ ಕಲಿಕೆಯನ್ನು ಹೇರಲಾಗದು. ಸರ್ಕಾರದ ನೀತಿಯಿಂದ ಪದವಿಗೂ ಮೊದಲು ಕನ್ನಡ ಕಲಿಯದ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಹಾಗಾಗಿ ಸರ್ಕಾರ ತನ್ನ ನಿರ್ಧಾರವನ್ನು ಮರು ಪರಿಶೀಲಿಸಬೇಕು’ ಎಂದು ನ್ಯಾಯಪೀಠ ಸೂಚನೆ ನೀಡಿತು.

Follow Us:
Download App:
  • android
  • ios